ಚಿಕ್ಕಬಳ್ಳಾಪುರ: ಪೊಲೀಸ್ ಅತಿಥಿ ಗೃಹದಲ್ಲಿ ರಾಜೀವ್ ಗೌಡ ವಿಚಾರಣೆ

Date:

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಮೊಬೈಲ್ ಕರೆ ಮಾಡಿ ಧಮ್ಕಿ ಹಾಕಿದ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಪೊಲೀಸ್ ಅತಿಥಿ ಗೃಹದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ರಾಜೀವ್ ಗೌಡ ಅವರಿಗೆ ಮಂಗಳೂರಿನಲ್ಲಿ ಮೂರು ದಿನ ಆಶ್ರಯ ನೀಡಿದ ಉದ್ಯಮಿ ಮೈಕಲ್ ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಡರಾತ್ರಿ ಈ ಇಬ್ಬರನ್ನು ಕರೆತಂದು ನಗರ ಪೊಲೀಸ್ ಠಾಣೆ ಬಳಿಯ ಅತಿಥಿ ಗೃಹದಲ್ಲಿ ಇರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಿಗ್ಗೆಯಿಂದಲೇ ಎಎಸ್‌ಪಿ ಜಗನ್ನಾಥ ರೈ, ಡಿವೈಎಸ್‌ಪಿ ರವಿಕುಮಾರ್, ತನಿಖಾಧಿಕಾರಿ ಇನ್ ಸ್ಪೆಕ್ಟರ್ ಆನಂದ್ ವಿಚಾರಣೆ ನಡೆಸುತ್ತಿದ್ದಾರೆ.

ಸೀನ್ ಆಫ್ ಕ್ರೈಂ ಆಫೀಸರ್ಸ್ (ಸೋಕೊ) ತಂಡ ಸಹ ವಿಚಾರಣೆಯಲ್ಲಿ ಭಾಗಿಯಾಗಿದೆ.

ಕೇರಳದ ಗಡಿ ಭಾಗದಲ್ಲಿ ರಾಜೀವ್‌ ಗೌಡನನ್ನು ಬಂಧನ ಮಾಡಲಾಗಿದೆ. ಪ್ರಕರಣದಲ್ಲಿ ಬಂಧನ ಮಾಡದಂತೆ ರಾಜೀವ್‌ ಗೌಡ ಜಾಮೀನು ಅರ್ಜಿ ಸಲ್ಲಿಸಿದ್ದರು. ಕೋರ್ಟ್‌ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಗುಣಮಟ್ಟ ಕುರಿತು ಮಾತಾಡಲು ಮೋದೀಜಿಗೆ ನೈತಿಕ ಹಕ್ಕು ಇಲ್ಲವೇ ಇಲ್ಲ!

ಸಚಿವ ಜಮೀರ್‌ ಪುತ್ರ ಝೈದ್‌ ಖಾನ್‌ ನಟನೆಯ ‘ಕಲ್ಟ್‌’ ಸಿನಿಮಾ ಫ್ಲೆಕ್ಸ್‌ (Cult Movie Flex) ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ (Sidlaghatta) ನಗರಸಭೆ ಪೌರಾಯುಕ್ತೆ ಅಮೃತ ಗೌಡಗೆ ರಾಜೀವ್‌ ಗೌಡ ಧಮ್ಕಿ ಹಾಕಿದ್ದರು.

ಧಮ್ಕಿ ಹಾಕಿದ್ದ ಆಡಿಯೋ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆ ಕ್ಷಮೆ ಕೋರಿದ್ದರು. ಆದರೆ ಅಮೃತ ಗೌಡ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಾದ ಬಳಿಕ ಪರಾರಿಯಾಗಿದ್ದ ರಾಜೀವ್‌ ಜಾಮೀನು ಪಡೆಯಲು ನಾನಾ ಕಸರತ್ತು ನಡೆಸಿದ್ದ. ಕೋರ್ಟ್‌ ಜಾಮೀನು ವಜಾಗೊಳಿಸಿದ ಬೆನ್ನಲ್ಲೇ ಬಂಧನ ಯಾವಾಗ ಎಂದು ಮಾಧ್ಯಮಗಳು ಸರ್ಕಾರವನ್ನು ಪ್ರಶ್ನಿಸುತ್ತಿದ್ದವು. ಕೊನೆಗೆ 13 ದಿನದ ಬಳಿಕ ರಾಜೀವ್‌ ಗೌಡ ಬಂಧನವಾಗಿದ್ದು ನಾಳೆ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.

ಅಮೃತಗೌಡ ಮತ್ತು ಶಿಡ್ಲಘಟ್ಟ ಜೆಡಿಎಸ್ ತಾಲೂಕು ಅಧ್ಯಕ್ಷ ಶ್ರೀನಿವಾಸಗೌಡ ದೂರಿನ ಮೇರೆಗೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ರಾಜೀವ್‌ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಎರಡು ಪ್ರಕರಣ ದಾಖಲಾಗುತ್ತಿದ್ದಂತೆ ರಾಜೀವ್‌ ಗೌಡ ಎರಡು ಮೊಬೈಲ್‌ ಫೋನ್‌ಗಳನ್ನು ಸ್ವಿಚ್‌ ಆಫ್‌ ಮಾಡಿ ನಾಪತ್ತೆಯಾಗಿದ್ದ. ರಾಜೀವ್ ಗೌಡ ಬಂಧನಕ್ಕೆ ಚಿಕ್ಕಬಳ್ಳಾಪುರ ಎಸ್‌ಪಿ ಕುಶಾಲ್ ಚೌಕ್ಸಿ ಎರಡು ತಂಡಗಳನ್ನು ನೇಮಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...