ಚಿಕ್ಕಬಳ್ಳಾಪುರ | ಭೀಕರ ಅಪಘಾತ; ಬೆಂಗಳೂರಿಗೆ ಹೊರಟಿದ್ದ 12 ಮಂದಿ ದುರ್ಮರಣ

Date:

ಲಾರಿ ಹಾಗೂ ಟಾಟಾ ಸುಮೊ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೂಲಿ ಕೆಲಸಕ್ಕೆ ತೆರಳುತ್ತಿದ್ದ 12 ಮಂದಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ನಗರದ ಹೊರವಲಯದಲ್ಲಿರುವ ಸಂಚಾರ ಪೊಲೀಸ್‌ ಠಾಣೆಯ ಎದುರೇ ದು‍ರ್ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಟಾಟಾ ಸುಮೋ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಟಾಟಾ ಸುಮೋದಲ್ಲಿದ್ದ 13 ಮಂದಿ ಪೈಕಿ, 12 ಮಂದಿ ಮೃತಪಟ್ಟಿದ್ದಾರೆ. ಟಾಟಾ ಸುಮೋ ಸಂಪೂರ್ಣ ನಜ್ಜುಗುಜ್ಜಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟಾಟಾ ಸುಮೊ ಬಾಗೇಪಲ್ಲಿಯಿಂದ ಬೆಂಗಳೂರು ಕಡೆ ಸಾಗುತ್ತಿತ್ತು. ಮುಂಜಾನೆ ದಟ್ಟ ಮಂಜು ಕವಿದಿದ್ದ ಕಾರಣ, ಚಾಲಕನಿಗೆ ರಸ್ತೆ ಸರಿಯಾಗಿ ಕಾಣಿಸಿಲ್ಲ. ಹೀಗಾಗಿ, ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಟಾಟಾ ಸುಮೋ ಆಂಧ್ರದ ಗೋರಂಟ್ಲದಿಂದ ಬೆಂಗಳೂರಿಗೆ ತೆರಳುತ್ತಿತ್ತು. 7 ಸೀಟಿನ ಸಾಮರ್ಥ್ಯದ ಟಾಟಾ ಸುಮೊದಲ್ಲಿ 13 ಜನ ಪ್ರಯಾಣ ಪ್ರಯಾಣಿಸುತ್ತಿದ್ದರು. ಅವರೆಲ್ಲರೂ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು ಎಂದು ಹೇಳಲಾಗಿದೆ.

“ಘಟನೆಯಲ್ಲಿ ಓರ್ವ ಮಗು, ಮೂವರು ಮಹಿಳೆಯರು ಸೇರಿ 12 ಜನರು ಮೃತಪಟ್ಟಿದ್ದಾರೆ. ಓರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಮೃತರು ಆಂಧ್ರದ ಗೊರಂಟ್ಲ ಪ್ರದೇಶಕ್ಕೆ ಸೇರಿದವರು ಎಂದು ತಿಳಿದುಬಂದಿದೆ. ಒಬ್ಬೊಬ್ಬರು ಒಂದೊಂದು ಊರಿನವರಾಗಿದ್ದಾರೆ” ಎಂದು ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್​ ನಾಗೇಶ್ ತಿಳಿಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಘಟನೆ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...