ಚಿಕ್ಕಬಳ್ಳಾಪುರ | ಪೆಟ್ರೋಲ್ ಸುರಿದು ಪತ್ನಿಯನ್ನೇ ಹತ್ಯೆಗೈದ ವಿಕೃತ ಕ್ರೂರಿ

Date:

ಕೌಟುಂಬಿಕ ಕಲಹದಿಂದ ವಿಕೃತ ಮನಸ್ಸಿನ ಕ್ರೂರ ಪತಿಯೊಬ್ಬ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೈದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ನಗರಗೆರೆ ಗ್ರಾಮದಲ್ಲಿ ಮಂಗಳವಾರ ರಾತ್ರಿ ದುರ್ಘಟನೆ ನಡೆದಿದೆ. ಹೋಟೆಲ್ ಮಾಲೀಕನಾಗಿರುವ ಎನ್‌.ಕೆ ಶಂಕರಯ್ಯ ಎಂಬಾತ ಹತ್ಯೆಗೈದಿದ್ದಾನೆ ಎಂದು ವರದಿಯಾಗಿದೆ.

ಶಂಕರಯ್ಯನಿಗೆ ಇಬ್ಬರು ಪತ್ನಿಯದಿದ್ದಾರೆ. 2ನೇ ಪತ್ನಿ ಶಾರದಮ್ಮ ಅವರನ್ನು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾರದಮ್ಮ ಮತ್ತು ಶಂಕರಯ್ಯ ನಡುವೆ ಆಗಾಗ್ಗೆ ಸಣ್ಣ ಪುಟ್ಟ ಜಗಳವಾಗುತ್ತಿತ್ತು. ಮಂಗಳವಾರ ರಾತ್ರಿಯೂ ಜಗಳವಾಗಿದ್ದು, ಈ ವೇಳೆ, ಶಾರದಮ್ಮ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಘಟನೆಯಲ್ಲಿ ಕ್ರೂರಿ ಶಂಕರಯ್ಯನಿಗೂ ಬೆಂಕಿ ತಗುಲಿದ್ದು, ಸುಟ್ಟ ಗಾಯಗಳಾಗಿವೆ. ಆತನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...