ಚಿಕ್ಕಬಳ್ಳಾಪುರ | ಊರು ತೊರೆದ ಪ್ರೇಮಿಗಳು; ಯುವಕನ ತಂದೆ-ತಾಯಿ ಮೇಲೆ ಮಾರಣಾಂತಿಕ ಹಲ್ಲೆ

Date:

ಬೆಳಗಾವಿಯಲ್ಲಿ ಪ್ರೇಮ ಪ್ರಕರಣದಲ್ಲಿ ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ರಾಜ್ಯವನ್ನು ‘ದುಶ್ಯಾಸನರ ರಾಜ್ಯ’ ಎಂದು ಹೈಕೋರ್ಟ್‌ ಕರೆದಿದೆ. ಬೆಳಗಾವಿ ಪ್ರಕರಣವನ್ನು ಖಂಡಿಸಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇಂತಹ ಸಮಯದಲ್ಲೇ ಅಂತದ್ದೇ ಮತ್ತೊಂದು ಪ್ರಕರಣ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.

ಒಂದೇ ಗ್ರಾಮದ, ಒಂದೇ ಸಮುದಾಯದ ಯುವಕ-ಯುವತಿ ಪ್ರೀತಿಸಿ, ಊರು ತೊರೆದು ಹೋದರೆಂಬ ಕಾರಣಕ್ಕೆ, ಯುವತಿಯ ಕುಟುಂಬಸ್ಥರು ಯುವಕನ ತಂದೆ-ತಾಯಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಘಟನೆ ಜಿಲ್ಲೆಯ ಗುಂಡಿಬಂಡೆ ತಾಲೂಕಿನ ದಪ್ಪರ್ತಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನೆರೆ-ಹೊರೆಯಲ್ಲಿ ವಾಸಿಸುತ್ತಿದ್ದ ಯುವಕ-ಯುವತಿ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಅವರ ಪ್ರೀತಿಗೆ ಯುವತಿಯ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ, ಪ್ರೇಮಿಗಳು ಸೋಮವಾರ ಊರು ಬಿಟ್ಟು ಹೋಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರಿಂದ ವಿಚಲಿತರಾದ ಯುವತಿ ಕುಟುಂಬಸ್ಥರು ಯುವಕನ ತಂದೆ-ತಾಯಿ ಮೇಲೆ ಹಲ್ಲೆ ಮಾಡಿದ್ದಾರೆ. ಯುವಕನ ತಾಯಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಯುವತಿಯ ಕುಟುಂಬಸ್ಥರೂ ಕೂಡ ತಮಗೂ ಗಾಯಗಳಾಗಿವೆ ಎಂಬಂತೆ ನಟಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ಘಟನೆ ಸಂಬಂಧ ಗುಡಿಬಂಡೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮದಲ್ಲಿ ಪೊಲೀಸ್ ಬಂದೋಬಸ್‌ ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...