ಶಿಡ್ಲಘಟ್ಟ | ಸರ್ಕಾರಿ ಶಾಲೆ ಜಾಗ ಒತ್ತುವರಿ ಆರೋಪ: ತಹಶೀಲ್ದಾರ್‌ ಭೇಟಿ, ತೆರವುಗೊಳಿಸುವ ಭರವಸೆ

Date:

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟಿ.ಪೆದ್ದನಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ಸೇರಿದ ಜಾಗವನ್ನು ಗ್ರಾಮಸ್ಥರು ಒತ್ತುವರಿ ಮಾಡಿದ್ದಾರೆ ಎಂಬ ದೂರಿನ ಮೇರೆಗೆ ತಹಶೀಲ್ದಾರ್ ಎನ್.ಗಗನಸಿಂಧು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಾಲೆಗೆ ಸಂಬಂಧಿಸಿದ ಜಾಗವನ್ನು ಕೆಲವರು ಒತ್ತುವರಿ ಮಾಡಿರುವ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಸರ್ಕಾರಿ ಶಾಲೆ ನಡೆಸದೆ ಮುಚ್ಚಿದ್ದಾರೆ. ಶಾಲೆಯ ಒತ್ತುವರಿ ಜಾಗ ತೆರವುಗೊಳಿಸಿದರೆ ಶಾಲೆಗೆ ಮಕ್ಕಳು ಬರುವಂತೆ ವ್ಯವಸ್ಥೆ ಮಾಡುತ್ತೇವೆಂದು ಗ್ರಾಮಸ್ಥರು ತಹಶೀಲ್ದಾರ್ ಅವರಿಗೆ ಮನವಿ ಮಾಡಿದ್ದರು. ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ಶಾಲೆಗೆ ಸೇರಿದ ಜಾಗದಲ್ಲಿ ಮನೆ ನಿರ್ಮಿಸುತ್ತಿರುವವರಿಗೆ ಕಾಮಗಾರಿ ಸ್ಥಗಿತಗೊಳಿಸುವಂತೆ ಸೂಚಿಸಿದರು.

“15 ದಿನದ ಒಳಗಾಗಿ ಈ ಜಾಗದ ದಾಖಲೆ ತಂದುಕೊಡಬೇಕು. ದಾಖಲೆಗಳು ಸರಿ ಇದ್ದಲ್ಲಿ ಕಾಮಗಾರಿ ಮುಂದುವರೆಸಲು ಅವಕಾಶ ನೀಡಲಾಗುತ್ತದೆ. ಪಿಡಿಒ ಅಥವಾ ನಮ್ಮ ಗಮನಕ್ಕೆ ತರದೆ ಕಾಮಗಾರಿ ಪ್ರಾರಂಭಿಸಿದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಾಲೆಗೆ ಸೇರಿದ ಜಾಗ 75×100 ಅಡಿಯಷ್ಟಿರುವುದು ಶಾಲೆ ದಾಖಲೆಗಳಲ್ಲಿ ಉಲ್ಲೇಖವಾಗಿದೆ. ಆದರೆ ಸ್ಥಳದಲ್ಲಿ ಅಳತೆ ಮಾಡಿದರೆ 77×79 ಅಡಿ ಮಾತ್ರ ಬರುತ್ತಿದೆ. ಉಳಿದ ಜಾಗ ಎಲ್ಲಿ ಹೋಯ್ತು. ಗ್ರಾಮದಲ್ಲಿ ಈ ವರ್ಷ ಶಾಲೆ ಆರಂಭವಾಗದಿದ್ದಲ್ಲಿ ಸಂಪೂರ್ಣ ಜಾಗವನ್ನು ಸರ್ಕಾರದ ವಶಕ್ಕೆ ಪಡೆದುಕೊಳ್ಳಬೇಕು” ಎಂದು ಗ್ರಾಮಸ್ಥರು ಕಂದಾಯ ನಿರೀಕ್ಷಕರೂ ಸೇರಿದಂತೆ ಗ್ರಾಮ ಸಹಾಯಕರ ಗಮನಕ್ಕೆ ತಂದರು.

“ಒತ್ತುವರಿ ಮಾಡಿರುವ ಸರ್ಕಾರಿ ಶಾಲೆಯ ಜಾಗವನ್ನು ಸಂಪೂರ್ಣವಾಗಿ ಸ್ವಾಧೀನಕ್ಕೆ ಪಡೆದುಕೊಳ್ಳುತ್ತೇವೆ. ಗ್ರಾಮದಲ್ಲಿ ಸರ್ಕಾರಿ ಶಾಲೆ ಪುನರ್ ಸ್ಥಾಪನೆಗೆ ಅವಕಾಶ ಮಾಡಿಕೊಡಲಾಗುತ್ತದೆ. ಸಾರ್ವಜನಿಕರು ಮಕ್ಕಳನ್ನು ಸರ್ಕಾರಿ ಶಾಲೆಯಲ್ಲಿ ಓದಿಸಿ, ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳಿ” ಎಂದು ತಹಶೀಲ್ದಾರ್ ಸಲಹೆ ನೀಡಿದರು.

“ಗ್ರಾಮದ ಜನರಿಗೆ ನೀರು ಪೂರೈಸುವ ಉದ್ದೇಶದಿಂದ ಇದೇ ಸರ್ಕಾರಿ ಜಾಗದಲ್ಲಿ ಕೊಳವೆಬಾವಿ ಕೊರೆಸಿದ್ದು, ಅದರಲ್ಲಿ ನೀರು ಸಹ ಇತ್ತು. ಆದರೆ ಜಾಗವನ್ನು ಒತ್ತುವರಿ ಮಾಡಿಕೊಳ್ಳುವ ಉದ್ದೇಶದಿಂದ ಕೊಳವೆಬಾವಿಗೆ ಅಳವಡಿಸಿದ್ದ ಪಂಪು, ಮೋಟಾರನ್ನು ಒಳಗೆ ಬೀಳಿಸಿದ್ದಾರೆ. ಅದರಲ್ಲಿನ ಪಂಪು ಮೋಟಾರು ಮೇಲೆತ್ತಿದರೆ ಗ್ರಾಮಕ್ಕೆ ಕುಡಿಯುವ ನೀರು ಲಭ್ಯವಾಗುತ್ತದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು” ಎಂದು ಗ್ರಾಮಸ್ಥರು ತಹಶೀಲ್ದಾರ್‌ಗೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕೇಂದ್ರ ಆಯವ್ಯಯ ಸಂಪೂರ್ಣ ಕಳಪೆಯಾಗಿದೆ: ಮಾಜಿ ಶಾಸಕ ರಾಜು ಆಲಗೂರ ಆರೋಪ

ಕಂದಾಯ ನಿರೀಕ್ಷಕ ಅಮರೇಂದ್ರ, ಗ್ರಾಮ ಲೆಕ್ಕಾಧಿಕಾರಿ ರಾಕೇಶ್, ದಿಬ್ಬೂರಹಳ್ಳಿ ಠಾಣೆಯ ಪಿಎಸ್‌ಐ ಶ್ಯಾಮಲ, ಪಿಡಿಒ ವಜ್ರೇಶ್, ಸಿಆರ್‌ಪಿ ವೆಂಕಟೇಶಪ್ಪ, ಜಯಚಂದ್ರ, ರಾಮಕೃಷ್ಣಪ್ಪ, ಶ್ರೀನಿವಾಸ್, ಪಿಳ್ಳಪ್ಪ, ಶಿವಪ್ಪ, ವೆಂಕಟರೆಡ್ಡಿ ದ್ಯಾವಪ್ಪ ಇದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಶಿಷ್ಟ ಜಾತಿ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ

ಚಿಂತಾಮಣಿ:ಇತ್ತೀಚಿಗೆ ಇಲ್ಲಿನ ಪರಿಶಿಷ್ಟ ಜಾತಿ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘ...

ಕಾರ್ಮಿಕನ ಮಗಳ ಮದುವೆಯ ಸಹಾಯಧನಕ್ಕೆ ಸಲ್ಲಿಸಿದ್ದ ಅರ್ಜಿ ರದ್ದು ಕಾರ್ಮಿಕರ ಪ್ರತಿಭಟನೆ

ಚಿಂತಾಮಣಿ:ಮದುವೆ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಪ್ರಮುಖ ಕ್ಷಣ ಆದರೆ ದಿನಗೂಲಿ ಕಾರ್ಮಿಕರು...

ಒಳಮೀಸಲಾತಿಯಿಂದ ಅನ್ಯಾಯವನ್ನು ಸರಿಪಡಿಸದೇ ಇದ್ದರೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ: ಎಂ.ವಿ.ಕೃಷ್ಣಪ್ಪ

ಬಾಗೇಪಲ್ಲಿ:- ನ್ಯಾ.ನಾಗಮೋಹನದಾಸ್ ವರದಿಯನ್ನು ತಿದ್ದುಪಡಿ ಮಾಡಿ ಎ, ಬಿ, ಸಿ ವರ್ಗಗಳಾಗಿ...

ಟೊಮೆಟೊ ಬೆಲೆ ಕುಸಿತ: ಅವಿಭಜಿತ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ಸಂಕಷ್ಟ

ಪ್ರತಿದಿನ ಟೊಮೆಟೊ ಬೆಲೆ ಕುಸಿಯುತ್ತಿರುವ ಕಾರಣ ರೈತರು ನಿರಾಶೆಗೆ ಒಳಗಾಗಿದ್ದಾರೆ. ಕೋಲಾರ...