ಹೊಸ ವರ್ಷಾಚರಣೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

Date:

ಹೊಸ ವರ್ಷಾಚರಣೆ ಆರಂಭಕ್ಕೆ ಇನ್ನೇನು 5 ದಿನಗಳು ಬಾಕಿ ಉಳಿದಿವೆ. ಇನ್ನು ಚಿಕ್ಕಬಳ್ಳಾಪುರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ನಂದಿಬೆಟ್ಟದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಡಿಸೆಂಬರ್ 31ರ ಸಂಜೆ 6 ರಿಂದ ಜನವರಿ 1 ಬೆಳಗ್ಗೆ 6 ಗಂಟೆವರೆಗೆ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ಚಿಕ್ಕಬಳ್ಳಾಪುರ ಡಿಸಿ ರವೀಂದ್ರ ಅವರು ಆದೇಶ ಹೊರಡಿಸಿದ್ದಾರೆ.

2024ರ ಜನವರಿ 1ರಂದು ಹೊಸ ವರ್ಷಾಚರಣೆಯ ಪ್ರಯುಕ್ತ ಚಿಕ್ಕಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ನಂದಿಗಿರಿಧಾಮದಲ್ಲಿ ಆಗಮಿಸುವ ಅತಿಥಿಗಳು ಮತ್ತು ಸಾರ್ವಜನಿಕರು ರಾತ್ರಿ ವೇಳೆಯಲ್ಲಿ ಮದ್ಯಪಾನ ಮತ್ತು ಧೂಮಪಾನ ಮಾಡಿ ಅಸಭ್ಯ ವರ್ತನೆ ತೋರುವುದು. ಮಹಿಳೆಯರೊಂದಿಗೆ ಅನುಚಿತ ವರ್ತನೆಗಳು ತೋರುವ ಸಂಭವವಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ತೊಂದರೆಯಾಗುವ ಸಾಧ್ಯತೆಯಿವೆ.

“ಹೊಸ ವರ್ಷಾಚರಣೆಯ ಪ್ರಯುಕ್ತ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ನಂದಿಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲು ಹಾಗೂ ಪ್ರವಾಸಿಗರಿಗೆ ಅತಿಥಿ ಗೃಹಗಳಲ್ಲಿ ಕೊಠಡಿಗಳನ್ನು ಕಾಯ್ದಿರಿಸುವುದನ್ನು ರದ್ದುಗೊಳಿಸುವುದು ಸೂಕ್ತವೆಂದು ಮನಗಂಡು ಈ ಆದೇಶ ಹೊರಡಿಸಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹೊಸ ವರ್ಷಾಚರಣೆ | ಮಧ್ಯರಾತ್ರಿ 1 ಗಂಟೆವರೆಗೆ ಸಂಭ್ರಮಾಚರಣೆಗೆ ಅವಕಾಶ: ಆಯುಕ್ತ ಬಿ.ದಯಾನಂದ್

2023ರ ಹೊಸ ವರ್ಷದ ಮೊದಲ ದಿನದಂದೂ ಸಹ ಜಿಲ್ಲಾಡಳಿತ ನಂದಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧಿಸಿತ್ತು. ಜತೆಗೆ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರ ಓಡಾಟ ನಿರ್ಬಂಧಿಸಲು ಚೆಕ್ಪೋಸ್ಟ್ ತೆರೆದಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...