ಚಿಕ್ಕಬಳ್ಳಾಪುರ | ಭೀಕರ ಅಪಘಾತ; ತಂದೆ, ಮಗಳು ಸಾವು, ತಾಯಿ ಸ್ಥಿತಿ ಗಂಭೀರ

Date:

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್‌ ವಾಹನವೊಂದು ಬೈಕಿನ ಮೇಲೆ ಬಿದ್ದ ಪರಿಣಾಮ ತಂದೆ, ಮಗಳು ಸಾವನ್ನಪ್ಪಿದ್ದು, ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿಯ ಇಶಾ ಫೌಂಡೇಶನ್‌ ಗೇಟ್‌ ಬಳಿ ನಡೆದಿದೆ.

ಶನಿವಾರ ಇಶಾ ಫೌಂಡೇಶನ್‌ ನೋಡಲು ಬಂದಿದ್ದ ಬಂಡಹಳ್ಳಿ ಗ್ರಾಮದ ವೆಂಕಟೇಶ್‌, ಮಗಳು ದೀಕ್ಷಿತಾ ಮೃತ ದುರ್ದೈವಿಗಳು. ತಾಯಿ ರೂಪ ಗಂಭೀರವಾಗಿ ಗಾಯಗೊಂಡಿರವ ಮಹಿಳೆ.

ವೆಂಕಟೇಶ್‌ ದಂಪತಿ ತನ್ನ ಮಗಳೊಂದಿಗೆ ಶನಿವಾರ ರಾತ್ರಿ ಇಶಾ ದರ್ಶನಕ್ಕಾಗಿ ತೆರಳುತ್ತಿದ್ದರು ಎನ್ನಲಾಗಿದ್ದು, ಈ ವೇಳೆ ಗೂಡ್ಸ್‌ ವಾಹನ ಬೈಕ್‌ ಮೇಲೆ ಉರುಳಿ ಬಿದ್ದಿದೆ. ಬೈಕ್‌ ಮೇಲೆ ಗೂಡ್ಸ್‌ ವಾಹನ ಬಿದ್ದ ಪರಿಣಾಮ ತಂದೆ ವೆಂಕಟೇಶ್‌, ಮಗಳು ದೀಕ್ಷಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಾಯಿ ರೂಪ ಅವರ ಎರಡು ಕಾಲುಗಳು ಮುರಿದು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಆಗಮಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...