ಚಿಕ್ಕಬಳ್ಳಾಪುರ | ಜಮೀನು ಸರ್ವೆ ಮಾಡಲು ಬಂದ ಭೂಮಾಪಕರ ಮೇಲೆ ಹಲ್ಲೆ; ಕ್ರಮ ಕೈಗೊಳ್ಳಲು ಪೊಲೀಸರ ನಿರ್ಲಕ್ಷ್ಯ

Date:

ಜಮೀನನ್ನು ಸರ್ವೆ ಮಾಡಲು ಬಂದ ಸರ್ವೇಯರ್‌ಗಳ ಮೇಲೆ ಭೂ ಮಾಲಿಕರು ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಪೆದ್ದೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಜಮೀನೊಂದರಲ್ಲಿ ಸರ್ವೆ ಮಾಡಲು ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್ಗಳು ಹಾಗೂ ರಿಸರ್ವ್‌ ಪೊಲೀಸರ ಭದ್ರತೆಯಲ್ಲಿ ಕಳೆದ ಡಿಸೆಂಬರ್‌ನಲ್ಲಿ ಸರ್ವೆ ಕಾರ್ಯ ಪುನರಾರಂಭಿಸಲಾಗಿತ್ತು. ಪೆದ್ದೂರಿನ ಸರ್ವೆ ನಂ.171/2 ರ ಹದ್ದುಬಸ್ತು ಅಳತೆಗೆ ಪರವಾನಗಿ ಭೂಮಾಪಕ ಕೆ.ಎಸ್‌.ವೆಂಕಟರಮಣಪ್ಪ ಅವರು ಡಿ.24 ರಂದು ಪೊಲೀಸ್‌ ಬಂದೋಬಸ್ತ್‌ನಲ್ಲಿ ಜಮೀನಿನ ಅಳತೆ ಕೆಲಸ ನಿರ್ವಹಿಸುತ್ತಿರುವಾಗ ಪೊಲೀಸರ ಮುಂದೆಯೇ ಪಕ್ಕದ ಜಮೀನಿನ ಭೂ ಮಾಲಿಕರು ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಇದು ಭೂಮಾಪಕರ ಆತಂಕ್ಕೆ ಕಾರಣವಾಗಿದೆ. ಅಂದಿನಿಂದ ಸರ್ವೇಯರ್‌ಗಳು ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಭೂ ದಾಖಲೆಗಳ ಇಲಾಖೆಯ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಕ್ರಮವೂ ಆಗಿಲ್ಲ, ಬಂಧನವೂ ಆಗಿಲ್ಲ ಎಂದು ಸರ್ವೆ ಅಧಿಕಾರಿಗಳು ಅಳಲು ತೋಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ?:ಚಿಕ್ಕಬಳ್ಳಾಪುರ | ವಿಟಿಯು ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಸರ್ಕಾರಿ ಪರವಾನಗಿ ಭೂಮಾಪಕರ ಸಂಘ ಹಲ್ಲೆಗೊಳಗಾದ ಸರ್ವೆಯರ್‌ ಬೆಂಬಲಕ್ಕೆ ನಿಂತು ತಮ್ಮ ಕೆಲಸಗಳನ್ನು ಸ್ಥಗಿತಗೊಳಿಸಿದ್ದರು. ಹದ್ದುಬಸ್ತ್ , ಗಡಿ ಗುರುತಿಸುವಿಕೆ, ತತ್ಕಾಲ್‌ ಪೋಡಿ, ಅಲಿನೇಷನ್‌, 11 ಇ (ಕ್ರಯ, ವಿಭಾಗ) ಹೀಗೆ ಜಮೀನು ವಿವಾದಗಳಿಗೆ ಸಂಬಂಧಿಸಿದ ಎಲ್ಲ ಕೆಲಸಗಳು ಸ್ಥಗಿತಗೊಂಡು ಜನರು ಪರದಾಡುವಂತಾಗಿದೆ. ಈ ಮಧ್ಯೆ ಹಲ್ಲೆ ನಡೆಸಿದವರು ನಿರೀಕ್ಷಣಾ ಜಾಮೀನು ಪಡೆದ ಹಿನ್ನೆಲೆ ಸದ್ಯ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರೂ ಬಂಧನವಾಗಿಲ್ಲ.

ಇದೀಗ ಸರ್ವೆಯರ್‌ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಮೇಲಧಿಕಾರಿಗಳು ಭರವಸೆ ನೀಡಿದ್ದು, ಈಗ ಸರ್ವೆ ಕೆಲಸ ಮತ್ತೆ ಆರಂಭಿಸುವುದಾಗಿ ಸರ್ವೆಯರ್‌ಗಳು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...