ಚಿಕ್ಕಬಳ್ಳಾಪುರ | ಡಿ.13ಕ್ಕೆ ಬೃಹತ್ ಲೋಕ ಅದಾಲತ್

Date:

ಸಂಚಾರಿ ನಿಯಮಗಳ ಉಲ್ಲಂಘನೆಗೆ ಒಳಗಾಗಿ ದಂಡ ಪಾವತಿಸುವ ಪ್ರಕರಣಗಳಿಗೆ ಡಿಸೆಂಬರ್ 12 ರವರೆಗೆ ಶೇ. 50 ರಷ್ಟು ರಿಯಾಯ್ತಿ ನೀಡಲಾಗುತ್ತಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕರು ಅರ್ಧದಷ್ಟು ದಂಡ ಪಾವತಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ ಎಂದು ಚಿಕ್ಕಬಳ್ಳಾಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಟಿ ಪಿ ರಾಮಲಿಂಗೇಗೌಡ ಅವರು ತಿಳಿಸಿದರು.

ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್ ಕುರಿತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಿಲ್ಲೆಯ ನ್ಯಾಯಾಲಯಗಳಲ್ಲಿ 48000 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇವೆ ಇವುಗಳ ಪೈಕಿ ಈಗಾಗಲೆ ಲೋಕಾ ಅದಲತ್ ಗೆ ತೆಗೆದುಕೊಳ್ಳಲು 6900 ಪ್ರಕರಣಗಳುನ್ನು ಗುರುತಿಸಲಾಗಿದೆ ಮುಂದಿನ ತಿಂಗಳ 12 ನೇ ತಾರೀಕಿನ ವರೆಗೆ ಸುಮಾರು 10 ಸಾವಿರ ಪ್ರಕರಣಗಳು ಅದಾಲತ್ ಗೆ ಬರುವ ನಿರೀಕ್ಷೆ ಇದೆ. ಒಟ್ಟಾರೆ ಡಿಸೇಂಬರ್ 13ರ ಅದಾಲತ್ ನಲ್ಲಿ 8 ರಿಂದ 10 ಸಾವಿರ ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಗುರಿ ಇದ್ದು, ಜಿಲ್ಲೆಯ ನಾಗರೀಕರ ಸೇವೆಯನ್ನು ಪ್ರಕರಣಗಳನ್ನು ತ್ವರಿತ ಇತ್ಯರ್ಥ ಮಾಡುವ ಮೂಲಕ ಮಾಡಲಾಗುವುದು. ಜಿಲ್ಲೆಯಲ್ಲಿ ಎಲ್ಲಿಯಾದರೂ, ಯಾವುದೇ ರೀತಿಯ ಸಮಸ್ಯೆಗಳು ಕಂಡುಬಂದಲ್ಲಿ ಮಾಧ್ಯಮ ಬೆಳಕಿಗೆ ತನ್ನಿ, ಆಗ ಸಕ್ಷಮ ಪ್ರಾಧಿಕಾರಗಳು ಹಾಗೂ ಅಧಿಕಾರಿಗಳು ಪರಿಹರಿಸುವ ಪ್ರಯತ್ನ ಮಾಡಲಿದ್ದಾರೆ. ಈ ಕುರಿತು ಸೂಚನೆಗಳನ್ನು ಸಹ ಈಗಾಗಲೇ ಜಿಲ್ಲಾಡಳಿತಕ್ಕೆ ನೀಡಲಾಗಿದೆ. ಜಿಲ್ಲಾಡಳಿತದ ಅಧಿಕಾರಿಗಳು ಸಹ ಉತ್ತಮ ಸಹಕಾರ ನೀಡುತ್ತಿದ್ದಾರೆ. ಒಂದು ವೇಳೆ ಸಕ್ಷಮ ಪ್ರಾಧಿಕಾರಗಳು ಸಾರ್ವಜನಿಕರ ಕುಂದು ಕೊರತೆಗಳನ್ನು, ಅಹವಾಲುಗಳಿಗೆ ಸ್ಪಂದಿಸದೆ ಇದ್ದರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು” ಎಂದು ಮಾಧ್ಯಮ ಪ್ರತಿನಿಧಿಗಳಲ್ಲಿ ಮನವಿ ಮಾಡಿದರು.

ನೇರವಾಗಿ ಸಕ್ಷಮ ಪ್ರಾಧಿಕಾರಗಳನ್ನು ಸಂಪರ್ಕಿಸಿ ಯಾವುದೇ ಸಾರ್ವಜನಿಕರು ಯಾವುದೇ ರೀತಿಯ ಕುಂದು ಕೊರತೆಗಳನ್ನು, ಅಹವಾಲುಗಳನ್ನು , ಸಮಸ್ಯೆಗಳನ್ನು ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರಗಳನ್ನು ಹಾಗೂ ಆ ಪ್ರಾಧಿಕಾರಗಳ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳುವ ಪ್ರಯತ್ನ ವನ್ನು ಮೊದಲಿಗೆ ಮಾಡಬೇಕು ಅಲ್ಲಿ ಪರಿಹಾರ ಅಥವಾ ವಿಲೇವಾರಿ ಆಗದೇ ಇದ್ದಪಕ್ಷದಲ್ಲಿ ಜಿಲ್ಲೆಯ ನ್ಯಾಯಾಲಯಗಳಲ್ಲಿನ ಮಧ್ಯಸ್ಥಿಕೆ ಕೇಂದ್ರಗಳು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಲು ಪ್ರಯತ್ನಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ನಿರಂತರವಾಗಿ ರಾಜಿ ಪಂಚಾಯಿತಿ ಮೂಲಕ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿಯಾಗಬಲ್ಲ ಪ್ರಕರಣಗಳನ್ನು ಇತ್ಯರ್ಥಪಡಿಸುತ್ತಾ ಬರಲಾಗುತ್ತಿದೆ, ಈ ಬಾರಿಯ ಡಿಸೆಂಬರ್ 13ರ ಅದಾಲತ್ನಲ್ಲಿ ಜಿಲ್ಲಾ ನ್ಯಾಯಾಲಯವೂ ಸೇರಿದಂತೆ ಜಿಲ್ಲೆಯ ತಾಲ್ಲೂಕು ಹಂತದ ನ್ಯಾಯಾಲಯಗಳಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನ‌ರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಷೇಮುಗಳು,ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಪ್ರಕರಣಗಳು, ವಿಚ್ಛೇಧನವನ್ನು ಹೊರತುಪಡಿಸಿ ವೈವಾಹಿಕ ಕುಟುಂಬ ನ್ಯಾಯಾಲಯದ ಪ್ರಕರಣಗಳನ್ನು ಕಕ್ಷಿದಾರರು ಹಾಗೂ ವಕೀಲರ ಸಹಕಾರದೊಂದಿಗೆ ಇತ್ಯರ್ಥಪಡಿಸಲಾಗುವುದುಜೊತೆಗೆ ಚೆಕ್ಕು ಅಮಾನ್ಯ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧಿಕರಣದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕಾರ್ಮಿಕರ ವಿವಾದಗಳು, ಭೂಸ್ವಾಧೀನ ಪ್ರಕರಣಗಳು ಹಾಗೂ ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಸಿವಿಲ್ ಪಿಂಚಣಿ ಪ್ರಕರಣಗಳನ್ನು ರಾಜಿ ಮೂಲಕ ಇಬ್ಬರೂ ಕಕ್ಷಿದಾರರ ಮನವೊಲಿಸಿ ಇತ್ಯರ್ಥ ಪಡಿಸಲಾಗುವುದು. ಜೊತೆಗೆ ರಾಜಿಯಾಗಬಲ್ಲ ಸಿವಿಲ್ ಹಾಗೂ ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳನ್ನೂ ಇತ್ಯರ್ಥ ಪಡಿಸಲಾಗುವುದು. ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಉಭಯ ಕಕ್ಷಿದಾರರು ರಾಜಿ ಮಾಡಿಕೊಳ್ಳಲು ಸೂಕ್ತ ಕಾನೂನು ಸಲಹೆ ಮತ್ತು ಮಾರ್ಗದರ್ಶನವನ್ನು ನೀಡಲಾಗುವುದು ಎಂದರು.

ಲೋಕ ಅದಾಲತ್ನಲ್ಲಿ ಪ್ರಕರಣಗಳನ್ನು ಸ್ವಯಂ ಪ್ರೇರಿತರಾಗಿ ಇತ್ಯರ್ಥಪಡಿಸಿಕೊಳ್ಳಲು ಎರಡೂ ಕಡೆಯವರಿಗೂ ಒಪ್ಪಿಗೆಯಾಗುವಂತೆ ಪ್ರಕರಣ ತೀರ್ಮಾನವಾಗುವುದರಿಂದ ಇಬ್ಬರ ನಡುವಿನ ಬಾಂಧವ್ಯ ಉಳಿದು ವಿವಾದವು ಸುಖಾಂತ್ಯಗೊಳ್ಳುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ವ್ಯಾಜ್ಯ ಪೂರ್ವ ಪ್ರಕರಣಗಳನ್ನೂ ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶವಿರುತ್ತದೆ. ಸಂಧಾನಕಾರರು ಸೂಚಿಸುವ ಪರಿಹಾರ ಸಮ್ಮತಿಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಲೋಕ ಅದಾಲತ್ ವಿಶೇಷ ಅವಕಾಶವಾಗಿರುತ್ತದೆ ಎಂದರು.

ಇದನ್ನು ಓದಿದ್ದೀರಾ..? ಜೂಜು ಅಡ್ಡೆಯ ಮೆಲೆ ದಾಳಿ ಎಂಟು ಜನರನ್ನು ಬಂಧಿಸಿದ ಬಟ್ಲಹಳ್ಳಿ ಪೊಲೀಸರು

ಲೋಕ ಅದಾಲತ್ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವುದರಿಂದ ಪದೇ ಪದೇ ನ್ಯಾಯಾಲಯಕ್ಕೆ ಅಲೆಯುವುದು ತಪ್ಪುತ್ತದೆ. ಕಕ್ಷಿದಾರರ ಸಮಯ ಮತ್ತು ಹಣ ಉಳಿತಾಯವಾಗಿ ಇಬ್ಬರಿಗೂ ನ್ಯಾಯ ದೊರೆತಂತಾಗಿ ನೆಮ್ಮದಿಯೂ ದೊರೆಯುತ್ತದೆ. ಅಲ್ಲದೇ ನ್ಯಾಯಾಲಯದ ಅಮೂಲ್ಯ ಸಮಯವೂ ಉಳಿತಾಯವಾಗಿ ಆ ಸಮಯವನ್ನು ಬಾಕಿ ಇರುವ ಇತರೆ ಪ್ರಕರಣಗಳ ವಿಚಾರಣೆ ಮತ್ತು ಇತ್ಯರ್ಥಕ್ಕೆ ನೀಡಲು ಸಹಕಾರಿಯಾಗುತ್ತದೆ. ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳುವುದರಿಂದ ಕಕ್ಷಿದಾರರ ನಡುವಿನ ವೈಮನ್ಯಸ್ಸು,ಭಿನ್ನಾಭಿಪ್ರಾಯ, ದ್ವೇಷ ಕಡಿಮೆಯಾಗಿ ಇಬ್ಬರ ನಡುವೆ ಸಾಮರಸ್ಯ, ಸೌಹಾರ್ದತೆಯ ವಾತಾವರಣ ನಿರ್ಮಾಣವಾಗಿ ಸಮಾಜದಲ್ಲಿ ಶಾಂತಿ ನೆಮ್ಮದಿಯೂ ನಿರ್ಮಾಣವಾಗುತ್ತದೆ ಎಂದರು.

ಡಿಸೆಂಬರ್ 13 ರ ಅದಾಲತ್ ನಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ಸಾರ್ವಜನಿಕರು ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕುಗಳ ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.

ಈ ವೇಳೆ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪ ರವರು ಉಪಸ್ಥಿತರಿದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...