ಚಿಕ್ಕಬಳ್ಳಾಪುರ | ಅಮ್ಮ ಎಜುಕೇಷನಲ್ ಅಂಡ್ ರೂರಲ್ ಡೆವಲಪ್ಮೆಂಟ್‌ನಿಂದ ರಕ್ತದಾನ ಶಿಬಿರ

Date:

ಚಿಕ್ಕಬಳ್ಳಾಪುರದ ಅಮ್ಮ ಎಜುಕೇಷನಲ್ ಅಂಡ್ ರೂರಲ್ ಡೆವಲಪ್ಮೆಂಟ್ ಟ್ರಸ್ಟ್‌ನ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ರಕ್ತದಾನ ಶಿಬಿರದ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 100 ಸಾಧಕರಿಗೆ ಸನ್ಮಾನ ಕೂಡ ಹಮ್ಮಿಕೊಳ್ಳಲಾಗಿತ್ತು.

ರಕ್ತದಾನ ಶಿಬಿರಕ್ಕೆ ಡಿ.ವೈ.ಎಸ್ಪಿ ಶಿವಕುಮಾರ್ ಚಾಲನೆ ನೀಡಿ, ಸಮಾಜಕ್ಕೆ ಏನಾದರೂ ಮಾಡಬೇಕು ಎಂಬ ಸಂಕಲ್ಪದೂಂದಿಗೆ ಉದ್ಭವವಾದ ಈ ಟ್ರಸ್ಟ್‌ಗೆ ಇಂದು ವರ್ಷದ ಸಂಭ್ರಮ. ಟ್ರಸ್ಟ್‌ನ ಶೈಕ್ಷಣಿಕ ಸೇವೆ ಪಡೆಯುತ್ತಿರುವ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಆಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಮ್ಮ ಉಜ್ವಲ ಭವಿಷ್ಯಕ್ಕೆ ಪೋಷಕರು ಪಡುವ ಕಷ್ಟಗಳು ಅಷ್ಟಿಷ್ಟಲ್ಲ. ಜೊತೆಗೆ ನಿಮ್ಮ ಭವಿಷ್ಯದ ದೃಷ್ಟಿಯಿಂದ ಅವರು ಪಟ್ಟಂತಹ ಶ್ರಮವನ್ನು ಅವರಿಗೆ ಸುಖಕರ ಜೀವನ ಒದಗಿಸಿ ಹಿಂತಿರುಗಿಸಿ ಶಿಸ್ತು ಸಮಯ ಪಾಲನೆ ಮಾಡಬೇಕು. ಶಿಕ್ಷಕರನ್ನು ಗೌರವಿಸಿ, ವಿದ್ಯಾಭಾಸದ ದಿನಗಳಲ್ಲಿ ಕೇವಲ ಓದಿನ ಕಡೆ ಗಮನ ಹರಿಸಬೇಕು. ಭವಿಷ್ಯಕ್ಕೆ ಕುತ್ತು ತರುವಂತಹ ಆಸೆ ಅಮಿಷ ತೋರಿಸುವವರಿಂದ ದೂರವಿರಿ. ಒಳ್ಳೆ ದಾರಿಯನ್ನು ತೋರಿಸುವ ಸ್ನೇಹಿತರ ಜೊತೆ ಬಾಂಧವ್ಯ ಬೆಳೆಸಿಕೊಳ್ಳಬೇಕು. ಸ್ವಾವಲಂಬಿ ಜೀವನ ನಡೆಸಿ ದುಷ್ಚಟಿಕೆಗಳಿಗೆ ಬಲಿಯಾಗದಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್.ಬಿ ರೆಡ್ಡಿ ಮಾತನಾಡಿ , ಸಂಸ್ಥೆ ಕಟ್ಟುವುದು ಸುಲಭ, ಆದರೆ ನಿರ್ವಹಣೆ ಕಷ್ಟದ. ಶೋಷಿತರಿಗೆ, ನಿರ್ಗತಿಕರಿಗೆ, ಬಡ ವಿದ್ಯಾರ್ಥಿಗಳಿಗೆ ಕೈಲಾದಷ್ಟು ನೆರವು ನೀಡಲು ಮುಂದಾಗುವ ಸಂಘ ಸಂಸ್ಥೆಗಳಿಗೆ ಮಾನಸಿಕವಾಗಿ ಆರ್ಥಿಕವಾಗಿ ಧೈರ್ಯ ತುಂಬಬೇಕು ಎಂದು ಸ್ನೇಹಿತರಾದ ಶ್ರೀನಿವಾಸ್ ಸಾಮಾಜಿಕ ಕಳಕಳಿಯೊಂದಿಗೆ ಅಮ್ಮ ಎಜುಕೇಷನಲ್ ಟ್ರಸ್ಟ್ ಮುಖಾಂತರ ಸಮಾಜ ಸೇವೆ ಮಾಡಲು ಮುಂದಾಗಿದ್ದಾರೆ. ಅವರ ಜೊತೆ ನಾವೆಲ್ಲರೂ ನಿಲ್ಲಬೇಕು ಎಂದರು.

chikkaballapura 1

ಸಮ ಸಮಾಜ ನಿರ್ಮಾಣಕ್ಕೆ ನಮ್ಮ ಮೇಲಿರುವ ಸಾಮಾಜಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು. ಕೆಟ್ಟದ್ದನ್ನ ಖಂಡಿಸಿ ನಿಲ್ಲಿಸಬೇಕು. ಒಳ್ಳೆಯದನ್ನ ಅನುಸರಿಸಿ ಸಮಾಜದಲ್ಲಿ ಸಾಧನೆ ಮಾಡಿದ ಬಹುತೇಕ ವ್ಯಕ್ತಿಗಳನ್ನು ಸ್ಪೂರ್ತಿಯಾಗಿಟ್ಟಿಕೊಂಡು ಇತರರಿಗೆ ಮಾದರಿಯಾಗಬೇಕೆಂದು ಕರೆ ನೀಡಿದರು.

ಅಮ್ಮ ಎಜುಕೇಷನಲ್ ಅಂಡ್ ರೂರಲ್ ಡೆವಲಪ್ಮೆಂಟ್ ಟ್ರಸ್ಟ್‌ನ ಅಧ್ಯಕ್ಷ ಗೋಳ್ಳು ಶ್ರೀನಿವಾಸ್ ಮಾತನಾಡಿ, ಕೋವಿಡ್ ಸಮಯದಲ್ಲಿ ಬದುಕು ಎನೆಂಬುದು ಎಲ್ಲರಿಗೂ ಗೂತ್ತಾಗಿದೆ. ಜನರು ಪಟ್ಟಂತಹ ಕಷ್ಟಗಳನ್ನು ನೋಡಿ ಐದು ಜನ ಸ್ನೇಹಿತರ ತಂಡವನ್ನು ಕಟ್ಟಿಕೊಂಡು ಕಳೆದ ವರ್ಷ ಅಮ್ಮ ಎಜುಕೇಷನಲ್ ಅಂಡ್ ರೂರಲ್ ಡೆವಲಪ್ಮೆಂಟ್ ಟ್ರಸ್ಟ್ ಪ್ರಾರಂಭಿಸಿದ್ದೇವೆ. ಶೈಕ್ಷಣಿಕ,ಆರೋಗ್ಯ ಹಾಗೂ ಇತರೆ ಕ್ಷೇತ್ರಗಳಲ್ಲಿ ಆದಷ್ಟು ಸಹಾಯ ಮಾಡುತ್ತ ಬಂದಿದ್ದು ಇಂದು ವಾರ್ಷಿಕೋತ್ಸವ ಅಂಗವಾಗಿ ಜೀವ ಉಳಿಸುವ ಕಾರ್ಯ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಬದುಕು ಶಾಶ್ವತವಲ್ಲ, ಇದ್ದಷ್ಟು ದಿನ ಸಮಾಜಕ್ಕೆ ಏನಾದರೂ ಮಾಡಬೇಕೆಂಬ ಉದ್ದೇಶದಿಂದ ಮುಂದೆ ಸಾಗಿದ್ದೇವೆ ಎಂದರು.

ಇದನ್ನು ಓದಿದ್ದೀರಾ? ಬಾಗೇಪಲ್ಲಿ | ಗಣೇಶ ಹಬ್ಬ: ಎಲ್ಲೆಡೆ ಪರಿಸರ ಪೂರಕ ಮೂರ್ತಿ ಪ್ರತಿಷ್ಠಾಪನೆ

ಕಾರ್ಯಕ್ರಮದಲ್ಲಿ ವಿಷೇಶ ಅಹ್ವಾನಿತರಾಗಿ ಮಕ್ಕಳ ತಜ್ಞ ಡಾ. ರವಿ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೋಡಿರಂಗಪ್ಪ, ಟಿಎಪಿಸಿಎಂಎಸ್ ಅಧ್ಯಕ್ಷ ಆವಲಕೊಂಡರಾಯಪ್ಪ, ನಿರ್ದೇಶಕ ಈರಚಿನ್ನಪ್ಪ, ವಿಶ್ವ ವಿವೇಕ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಅಂಜಿ, ಉಮೇಶ್. ಜಿ, ಕೆ.ಸಿ. ರಾಜಾಕಾಂತ್, ಸುಧಾ ವೆಂಕಟೇಶ್, ಬಿ.ಎನ್. ಗಂಗಾಧರಪ್ಪ, ಕರವೇ ರಾಜ್ಯ ಉಪಾಧ್ಯಕ್ಷ ತಿಪ್ಪೇನಹಳ್ಳಿ ನಾರಾಯಣಸ್ವಾಮಿ, ಡಿ.ವಿ.ನಾರಾಯಣಸ್ವಾಮಿ, ಅಮ್ಮ ಎಜುಕೇಷನಲ್ ಅಂಡ್ ರೂರಲ್ ಡೆವಲಪ್ಮೆಂಟ್ ಟ್ರಸ್ಟ್ ನ ಕಾರ್ಯದರ್ಶಿ ಗಂಗರಾಜು, ಜಂಟಿ ಕಾರ್ಯದರ್ಶಿ ವೆಂಕಟೇಶ್, ಖಂಜಾಜಿ ಆನಂದ್, ಸದಸ್ಯರಾದ ಶಿಲ್ಪ ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...