ಚಿಕ್ಕಬಳ್ಳಾಪುರ | ಖಾಸಗಿ ಶಾಲೆಗಳಿಂದ ದುಬಾರಿ ಶುಲ್ಕ ವಸೂಲಿ; ಶುಲ್ಕ ನಿಯಂತ್ರಣ ಪ್ರಾಧಿಕಾರ ರಚನೆಗೆ ಎಎಪಿ ಆಗ್ರಹ

Date:

ಖಾಸಗಿ ಶಾಲಾ ಕಾಲೇಜುಗಳಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ದಾಖಲಾತಿಗೆ ದುಬಾರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ದುಬಾರಿ ಶುಲ್ಕ ನಿಯಂತ್ರಣಕ್ಕೆ ಸರ್ಕಾರ ಕೂಡಲೇ ‘ಶುಲ್ಕ ನಿಯಂತ್ರಣ ಪ್ರಾಧಿಕಾರ’ ರಚನೆ ಮಾಡಬೇಕು ಎಂದು ಚಿಕ್ಕಬಳ್ಳಾಪುರ ಎಎಪಿ ಜಿಲ್ಲಾಧ್ಯಕ್ಷ ಭೈರರೆಡ್ಡಿ ಒತ್ತಾಯಿಸಿದರು.

ಚಿಕ್ಕಬಳ್ಳಾಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. “ಎಸ್‌ಎಸ್‌ಎಲ್‌ ಮತ್ತು ಪಿಯುಸಿ ಫಲಿತಾಂಶಗಳು ಹೊರಬಿದ್ದಿವೆ. ಶಾಲಾ ಕಾಲೇಜುಗಳಲ್ಲಿ ದಾಖಲಾತಿ ಆರಂಭವಾಗಿದೆ. ಈ ಬಾರಿ ಶೇ.30ರಷ್ಟು ಶುಲ್ಕ ಹೆಚ್ಚಳ ಮಾಡಲಾಗಿದೆ. ಇದರಿಂದ ಬಡ, ಮಧ್ಯಮ ವರ್ಗದ ಜನರಿಗೆ ಆರ್ಥಿಕ ಸಂಕಷ್ಟ ಶುರುವಾಗಿದೆ. ಸರಕಾರಿ ಶಾಲೆ ಕಾಲೇಜುಗಳಲ್ಲಿ ಸರಿಯಾದ ಮೂಲಭೂತ ಸೌಲಭ್ಯ ಇಲ್ಲದ ಕಾರಣ ಜನರು ಖಾಸಗಿ ಶಾಲಾ ಕಾಲೇಜು ಮೊರೆ ಹೋಗುತ್ತಿದ್ದಾರೆ. ಇದು ನಮ್ಮ ರಾಜ್ಯದ ದುರಂತ” ಎಂದು ಹೇಳಿದರು.

“ರಾಜ್ಯದಲ್ಲಿ ಸಂಸದರು ಹಾಗೂ ಶಾಸಕರು ಸಾಕಷ್ಟು ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದಾರೆ. ಪ್ರಸ್ತುತ ಶಿಕ್ಷಣ ಉದ್ಯಮವಾಗಿದೆ. ಇದರಿಂದ ಶುಲ್ಕ ನಿಯಂತ್ರಣ ಪ್ರಾಧಿಕಾರ ರಚನೆ ಆಗುತ್ತಿಲ್ಲ. ಬಡ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸರಕಾರ ಕೂಡಲೇ ಶುಲ್ಕ ನಿಯಂತ್ರಣ ಪ್ರಾಧಿಕಾರ ರಚನೆ ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರಕಾರ ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ವಸೂಲಿ ಕ್ರಮಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ದೆಹಲಿ ಮಾದರಿಯಲ್ಲಿ ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ವಾರ್ಷಿಕ ಲೆಕ್ಕಪರಿಶೋಧನೆ ನಡೆಸಬೇಕು. ಹಾಗೆಯೇ ಶುಲ್ಕ ನಿಯಂತ್ರಣ ಪ್ರಾಧಿಕಾರ ರಚನೆ ಮಾಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಎಎಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೀಪಕ್ ರಾವ್, ಕಾರ್ಯದರ್ಶಿ ನಾಸಿರ್ ಅಲಿ, ತಾಲೂಕು ಸಂಚಾಲಕರಾದ ಅಬ್ಬಾಸ್, ಅಶೋಕ್ ವಿ, ಸಂಶುದ್ದೀನ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...