ಚಿಕ್ಕಬಳ್ಳಾಪುರ | ನೀರಿನ ಹೊಂಡಕ್ಕೆ ಬಿದ್ದು ನಾಲ್ಕು ವರ್ಷದ ಮಗು ಸಾವು

Date:

ಹೊಲದಲ್ಲಿ ಜೋಳ ಬಿತ್ತನೆ ಮಾಡಲು ಹೋಗಿದ್ದ ದಂಪತಿಯೊಂದಿಗೆ ತೆರಳಿದ್ದ ನಾಲ್ಕು ವರ್ಷದ ಮಗು ಆಟವಾಡುತ್ತಿದ್ದ ನೀರಿನ ಹೊಂಡಕ್ಕೆ ಬಿದ್ದು ಅಸುನೀಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ಭಾನುವಾರ ನಡೆದಿದೆ.

ಗುಡಿಬಂಡೆ ತಾಲೂಕಿನ ಲಗುಮೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ನಾಲ್ಕು ವರ್ಷದ ಅರ್ಪಿತ್ ರೆಡ್ಡಿ ಸಾವನ್ನಪ್ಪಿದ್ದಾನೆ. ಹಳೇಗುಂಡಿಬಂಡೆ ಗ್ರಾಮದ ನಿವಾಸಿಗಳಾದ ನರಸಿಂಹಮೂರ್ತಿ ಮತ್ತು ಭಾಗ್ಯಮ್ಮ ದಂಪತಿಗೆ ಈತ ಒಬ್ಬನೇ ಮಗನಾಗಿದ್ದ. ದಂಪತಿಯು ಮದುವೆಯಾದ 14 ವರ್ಷಗಳ ಬಳಿಕ ಅರ್ಪಿತ್ ರೆಡ್ಡಿ ಜನಿಸಿದ್ದ. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡ ಪೋಷಕರ ಅಕ್ರಂದನ ಮುಗಿಲು ಮುಟ್ಟಿತ್ತು.

ದಂಪತಿ ಲಗುಮೇನಹಳ್ಳಿಯ ಜಮೀನಿನಲ್ಲಿ ಜೋಳ ಬಿತ್ತನೆ ಮಾಡಲು ಮಗುವಿನೊಂದಿಗೆ ಹೋಗಿದ್ದರು. ಈ ವೇಳೆ ಮಗು ಆಟವಾಡುತ್ತ ಹೋಗಿ ನೀರಿನ ಹೊಂಡಕ್ಕೆ ಬಿದ್ದಿದೆ. ಕೆಲ ಗಂಟೆಗಳವರೆಗೂ ಯಾರೂ ನೋಡಿಲ್ಲವಾದ್ದರಿಂದ ಮಗು ಉಸಿರುಗಟ್ಟಿ ಸಾವನ್ನಪ್ಪಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ವಾಡಿಕೆಗಿಂತ ಮೊದಲೇ ಮಳೆ; ಮುನ್ನೆಚ್ಚರಿಕೆ ವಹಿಸುವಂತೆ ಹೆಸ್ಕಾಂ ಮನವಿ

ಮಗು ಕಾಣಿಸದೆ ಇದ್ದಾಗ ಪೋಷಕರು ಜಮೀನಿನಲ್ಲಿ ಹುಡುಕಾಡಿದ್ದಾರೆ. ನಂತರ ಜಮೀನಿನ ಬಳಿಯ ನಿರ್ಮಾಣ ಹಂತದ ಮನೆ ಮುಂದೆ ನೀರಿನ ಹೊಂಡದಲ್ಲಿ ಮಗುವಿನ ಶವ ಪತ್ತೆಯಾಗಿದೆ. ತಕ್ಷಣವೇ ಮಗುವನ್ನು ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಗೆ ಕರೆದ್ಯೊಯಲಾಗಿತ್ತು. ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಮಗು ಸಾವನ್ನಪ್ಪಿರುವುದನ್ನು ದೃಢಪಡಿಸಿದ್ದಾರೆ. ಘಟನೆ ಬಗ್ಗೆ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...