ಚಿಕ್ಕಬಳ್ಳಾಪುರ | ಕೊಲೆ ಮಾಡಿ ಸಂಪಿನಡಿ ಹೆಣ ಹೂತಿಟ್ಟ ಸ್ನೇಹಿತರು

Date:

ಕುಡಿದ ಅಮಲಿನಲ್ಲಿ ಸ್ನೇಹಿತನೊಬ್ಬನನ್ನು ಕೊಲೆ ಮಾಡಿ ನಿರ್ಮಾಣ ಹಂತದಲ್ಲಿದ್ದ ಸಂಪಿನಡಿಯಲ್ಲಿ ಹೆಣ ಹೂತಿಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ತೌಡನಹಳ್ಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ನಡೆದಿದೆ.

ಬಿಹಾರ ಮೂಲದ ರಿಹಾನ್ ಕೊಲೆಯಾದ ದುರ್ದೈವಿ. ಸಾಜೀದ್‌ ಮತ್ತು ಆಲಂ ಕೊಲೆ ಮಾಡಿರುವ ಆರೋಪಿಗಳು. ಈ ಮೂವರೂ ಬಿಹಾರ ರಾಜ್ಯದ ಆರರಿಯ ಜಿಲ್ಲೆಯ ಕುರಸಿಲ್‌ ಗ್ರಾಮದವರಾಗಿದ್ದು, ಗಾರೆ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಇತ್ತೀಚೆಗಷ್ಟೇ ಬೆಂಗಳೂರಿನ ಗುತ್ತಿಗೆದಾರ ಮಂಜುನಾಥ್‌ ಎಂಬುವರು ಗಾಣದ ಎಣ್ಣೆ ತಯಾರಿಕಾ ಕಾರ್ಖಾನೆಯೊಂದರ ಕಟ್ಟಡ ನಿರ್ಮಾಣ ಕಾಮಗಾರಿಗೆಂದು ಚಿಕ್ಕಬಳ್ಳಾಪುರದ ತೌಡನಹಳ್ಳಿಗೆ ಕರೆತಂದಿದ್ದರು.

ಕಳೆದ 20 ದಿನಗಳಿಂದ ಕೆಲಸ ಮಾಡುತ್ತಿದ್ದವರು, ಈದ್‌ ಮಿಲಾದ್‌ ಹಬ್ಬದ ಬಳಿಕ ನಾಪತ್ತೆಯಾಗಿದ್ದರು. ಗುತ್ತಿಗೆದಾರ ಮಂಜುನಾಥ್‌ ಈದ್‌ ಮಿಲಾದ್‌ ಹಿನ್ನೆಲೆ ಹಣ ಕೊಟ್ಟಿದ್ದು, ಮೂವರೂ ಸೇರಿ ಕೆಲಸದ ಜಾಗದಲ್ಲೇ ಪಾರ್ಟಿ ಮಾಡಿದ್ದರು. ಈ ಸಂದರ್ಭದಲ್ಲಿ ರಿಹಾನ್‌ ಮತ್ತು ಸಜೀದ್‌ ನಡುವೆ ಜಗಳ ಏರ್ಪಟ್ಟಿದ್ದು, ಸಜೀದ್‌ ಅಲ್ಲೇ ಬಿದ್ದಿದ್ದ ಸಿಮೆಂಟ್‌ ಇಟ್ಟಿಗೆಯಿಂದ ರಿಹಾನ್‌ ತಲೆಗೆ ಹೊಡೆದಿದ್ದ. ರಿಹಾನ್‌ ಸ್ಥಳದಲ್ಲೇ ಮೃತಪಟ್ಟಿದ್ದು, ಆಲಂ ಮತ್ತು ಸಜೀದ್‌ ಸೇರಿಕೊಂಡು ಮೃತದೇಹವನ್ನು ಸಂಪಿಗೆಂದು ತೋಡಿದ್ದ ಗುಂಡಿಯಲ್ಲಿ ಹೂತಿಟ್ಟು ಸ್ಥಳದಿಂದ ಪರಾರಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಹಾರ್‌ ತೆರಳಿದ್ದ ಆಲಂ ಸತ್ಯ ಬಾಯಿಬಿಟ್ಟಿದ್ದು, ಅಲ್ಲಿನ ಪೊಲೀಸರು ಚಿಕ್ಕಬಳ್ಳಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಆಲಂ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಸಜೀದ್‌ ಗಾಗಿ ಬಲೆ ಬೀಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳಾರತಿ ಎತ್ತಬೇಕಾದ್ದು ಕಾವೇರಿಗಲ್ಲ, ಕಾಂಗ್ರೆಸ್ಸಿಗರಿಗೆ

ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...