ಚಿಕ್ಕಬಳ್ಳಾಪುರ | ಅಡ್ಕಸ್ಥಳ ಕಬೀರ್‌ಗೆ ʼಸಾಹಿತ್ಯ ವಿಭೂಷಣʼ ಪ್ರಶಸ್ತಿ

Date:

ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ ಕೊಡಮಾಡುವ ಪ್ರತಿಷ್ಠಿತ ʼಸಾಹಿತ್ಯ ವಿಭೂಷಣʼ ಪ್ರಶಸ್ತಿ ಕವಿ, ಶಿಕ್ಷಕ, ಲೇಖಕ, ರಂಗಭೂಮಿ ಹಾಗೂ ಕುಂಚ ಕಲಾವಿದ ಅಡ್ಕಸ್ಥಳ ಕಬೀರ್ ಅವರಿಗೆ ಲಭಿಸಿದೆ.

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಅಡ್ಕಸ್ಥಳ ಎಂಬ ಪುಟ್ಟ ಗ್ರಾಮದಲ್ಲಿ ಜನಿಸಿರುವ ಕಬೀರ್ ಅವರು, 8 ಅನುವಾದ ಕೃತಿಗಳು ಮತ್ತು 2 ಕವನ ಸಂಕಲನಗಳನ್ನು ಸಾಹಿತ್ಯ ಸಾರಸ್ವತ ಲೋಕಕ್ಕೆ ಕೊಡುಗೆಯಾಗಿ ನೀಡಿದ್ದಾರೆ.

ಪ್ರಸ್ತುತ ಚಿಕ್ಕಬಳ್ಳಾಪುರ ಜಿಲ್ಲೆಯ ವಿಶ್ವ ಪ್ರಸಿದ್ಧ ಶ್ರೀ ಸತ್ಯ ಸಾಯಿ ಲೋಕ ಸೇವಾ ಶಿಕ್ಷಣ ಸಂಸ್ಥೆಯಲ್ಲಿ ಮೂರು ದಶಕಗಳಿಗಿಂತಲೂ ಹೆಚ್ಚು ಕಾಲದಿಂದ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ಶಿಕ್ಷಣ, ಸಾಹಿತ್ಯ, ಕಲೆ ಮತ್ತು ರಂಗಭೂಮಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಬಹುಮುಖ ಪ್ರತಿಭೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇರಳದ ಗಡಿನಾಡಿನಿಂದ ಬಂದು ಕರ್ನಾಟಕದ ಗಡಿನಾಡಿನಲ್ಲಿ ಸೇವೆ ಸಲ್ಲಿಸುತ್ತಾ ಸಂಘ ಸಂಸ್ಥೆಗಳಿಂದ ʼಗಡಿನಾಡಿನ ಕಿಡಿʼ ಎಂಬ ಬಿರುದನ್ನೂ ಪಡೆದಿದ್ದಾರೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಕೊಳೆಗೇರಿಗಳ ಜನ ನೀರು ನೆರಳು ಬೆಳಕಿಲ್ಲದೆ ನರಳಬೇಕಿರುವುದು ನಾಗರಿಕ ಸಮಾಜದ ನಾಚಿಕೆಗೇಡು

ತನ್ನ ವಿಶಿಷ್ಟ ಸೇವೆಗಾಗಿ ‌ ಈಗಾಗಲೇ ಹಲವಾರು ಪ್ರಶಸ್ತಿ, ಪುರಸ್ಕಾರ, ಪಾರಿತೋಷಕಗಳನ್ನು ಪಡೆದಿದ್ದು, ಇದೀಗ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಸೇವೆಗಾಗಿ ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆಯಿಂದ ರಾಷ್ಟ್ರಮಟ್ಟದ ಸಾಹಿತ್ಯ ವಿಭೂಷಣ ಪ್ರಶಸ್ತಿ ಪಡೆಯುವ ಮೂಲಕ ರಾಜ್ಯ ಹಾಗೂ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...