ಚಿಕ್ಕಬಳ್ಳಾಪುರ | ಸಚಿವ ಸಂಪುಟ ಸಭೆ ಶಿಫ್ಟ್ ಮಾಡಿದ್ದು ತೀವ್ರ ನಿರಾಸೆ ತಂದಿದೆ: ಆಂಜನೇಯ ರೆಡ್ಡಿ

Date:

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದಲ್ಲಿ ಜೂನ್ 19 ರಂದು ನಡೆಯಬೇಕಿದ್ದ ಸಚಿವ ಸಂಪುಟ ಸಭೆ ಕೊನೆ ಕ್ಷಣದಲ್ಲಿ ವಿಧಾನಸೌಧಕ್ಕೆ ಸ್ಥಳಾಂತರ ಮಾಡಿದ್ದು ಬಯಲು ಸೀಮೆ ಜಿಲ್ಲೆಗಳ ಜನರಿಗೆ ತೀವ್ರ ನಿರಾಸೆ ತಂದಿದೆ ಎಂದು ಶಾಶ್ವತ ನೀರಾವರಿ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.

“ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮಾಡಿ ಬಯಲು ಸೀಮೆ ಜಿಲ್ಲೆಗಳ ಜನರ ಆಶೋತ್ತರಗಳಿಗೆ ಸ್ಪಂದಿಸಬೇಕಾಗಿದ್ದ ಸರ್ಕಾರವು ಪಲಾಯನ ಮಾಡಿದ್ದು ಸರಿಯಲ್ಲ. ಇಲ್ಲಿ ಸಚಿವ ಸಂಪುಟ ಸಭೆ ಮಾಡಲು ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿತ್ತು. ಆದರೂ ಕೊನೆ ಕ್ಷಣದಲ್ಲಿ ಸ್ಥಳಾಂತರ ಮಾಡಿ ಈ ಭಾಗದ ಜಿಲ್ಲೆಗಳ ಜನರ ನಿರೀಕ್ಷೆಗಳನ್ನು ಹುಸಿ ಮಾಡಿದ್ದಾರೆ. ನಾವು ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಬಯಲುಸೀಮೆ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ನೀರಾವರಿ ಸಮಸ್ಯೆಗಳನ್ನು ಚರ್ಚೆ ಮಾಡಿ ಪರಿಹಾರ ನೀಡಬೇಕು, ಇಲ್ಲದಿದ್ದರೆ ಸಚಿವ ಸಂಪುಟ ಸಭೆ ಬಳಿಕ ನೀರಾವರಿ ಹೋರಾಟವನ್ನು ತೀವ್ರಗೊಳಿಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.

“ಸಿಎಂ ತವರು ಜಿಲ್ಲೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮಾಡಿದ್ದಾರೆ. ಆದರೆ, ನಂದಿ ಬೆಟ್ಟವು ವಿಶೇಷವಾದ ಸ್ಥಾನಮಾನ ಹೊಂದಿದೆ. ಇಲ್ಲಿಗೆ ಮಹಾತ್ಮ ಗಾಂಧಿ, ನೆಹರು, ಇಂದಿರಾಗಾಂಧಿ ಅವರೆಲ್ಲರೂ ಇಲ್ಲಿಗೆ ಭೇಟಿಯನ್ನು ನೀಡಿದ್ದರು. ಇಲ್ಲಿ ಸಚಿವ ಸಂಪುಟ ಸಭೆ ನಡೆದಿದ್ರೆ ಸರ್ಕಾರಕ್ಕೆ ಘನತೆ, ಗೌರವ ಹೆಚ್ಚಾಗುತ್ತಿತ್ತು. ಇಲ್ಲಿ ಸಭೆ ನಡೆದಿದ್ದರೆ ಬಯಲು ಸೀಮೆ ಭಾಗದ ಜನರಿಗೆ ಬಹಳ ಅನುಕೂಲವಾಗಲಿತ್ತು. ಆದರೆ ಹೀಗೆ ಮಾಡಿರುವ ಸರ್ಕಾರದ ಧೋರಣೆ ಸರಿಯಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೌರಿಬಿದನೂರು, ದೊಡ್ಡಬಳ್ಳಾಪುರದಲ್ಲಿ ಕೈಗಾರಿಕೆ ಸ್ಥಾಪನೆಯಾಗಿದೆ. ಆದರೆ ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಗುಡಿಬಂಡೆ, ಶಿಡ್ಲಘಟ್ಟ ಈ ಭಾಗದಲ್ಲಿ ಅಂತಹ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ. ಇಲ್ಲಿಯೂ ಕೈಗಾರಿಕಾ ವಲಯ ಆಗಿದ್ರೆ ನಿರುದ್ಯೋಗ ಸಮಸ್ಯೆಯಾದರೂ ನಿವಾರಣೆಯಾಗುತ್ತಿತ್ತು. ಈ ಎಲ್ಲಾ ನೀರಿಕ್ಷೆಗಳನ್ನು ಹುಸಿಯಾಗಿಸಿರುವುದು ಈ ಭಾಗದ ಜನರಿಗೆ ಬೇಸರ ತರಿಸಿದೆ.

ಇದನ್ನು ಓದಿದ್ದೀರಾ…? ಸಚಿವ ಸಂಪುಟ ಸಭೆಯಲ್ಲಿ ಬಯಲುಸೀಮೆ ನೀರಿನ ಸಮಸ್ಯೆ ಕುರಿತ ಚರ್ಚೆಗೆ ಆಗ್ರಹ

ಚಿಕ್ಕಬಳ್ಳಾಪುರ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಆನಂದ್, “ಬಡವರ ಪರ ಇದ್ದೀವಿ ಎಂದು ಹೇಳಿಕೊಂಡು ಕಾಂಗ್ರೆಸ್‌ ಅಧಿಕಾರ ಹಿಡಿಯಿತು. ಆದರೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಹಾಗೂ ಸಚಿವರ ವಿರುದ್ಧ ಈ ಭಾಗದ ಜನರಿಗೆ ಬಹಳ ಬೇಸರ ಬಂದಿದೆ. ಸಚಿವ ಸಂಪುಟ ಸಭೆ ನಂದಿ ಬೆಟ್ಟದಲ್ಲಿ ವಿಧಾನಸೌಧಕ್ಕೆ ಸ್ಥಳಾಂತರ ಆಗಿದೆ. ಆ ಸಭೆಯಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡ್ಬೇಕು ಇಲ್ಲದಿದ್ದರೆ ಮುಂದಿನ ಸಚಿವ ಸಂಪುಟ ಕಡ್ಡಾಯವಾಗಿ ನಂದಿ ಬೆಟ್ಟದಲ್ಲಿಯೇ ಮಾಡಿದರೆ ಈ ಭಾಗದ ಜನರ ನಂಬಿಕೆಯನ್ನು ಅವರು ಉಳಿಸಿಕೊಳ್ಳುತ್ತಾರೆ ಇಲ್ಲ ಅಂದ್ರೆ ಈ ಸರ್ಕಾರದ ಮೇಲೆ ನಂಬಿಕೆ ಕಳೆದುಕೊಳ್ಳುತ್ತಾರೆ. ಯಾವುದೇ ರೀತಿಯ ಅಡ್ಡಿ, ಆತಂಕಗಳು ಇರಲಿಲ್ಲ. ಇಲ್ಲಿಂದ ಯಾಕೆ ಶಿಫ್ಟ್ ಆಯಿತು ಎಂಬುದರ ಬಗ್ಗೆ ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವರು ತಿಳಿಸಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...