ಚಿಕ್ಕಬಳ್ಳಾಪುರ | ಕೋಚಿಮುಲ್‌ ಆಡಳಿತ ಮಂಡಳಿ ಕೊನೆಗೊಳಿಸಿ, ಚುನಾವಣೆ ನಡೆಸುವಂತೆ ಬಿಜೆಪಿ ಆಗ್ರಹ

Date:

ಕೋಚಿಮುಲ್‌ನಲ್ಲಿ ಪ್ರಸ್ತುತ ಇರುವ ಆಡಳಿತ ಮಂಡಳಿಯನ್ನು ಕೊನೆಗೊಳಿಸಿ ಕೂಡಲೇ ಚುನಾವಣೆ ನಡೆಸಬೇಕು ಎಂದು ಮೈತ್ರಿ ಪಕ್ಷಗಳ ಮುಖಂಡರು, ಕಾರ್ಯಕರ್ತರು‌ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಚಿಕ್ಕಬಳ್ಳಾಪುರ ನಗರದ ಪತ್ರಿಕಾ ಭವನದಲ್ಲಿ ಶನಿವಾರ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, “ಕೋಚಿಮುಲ್‌ ಆಡಳಿತ ಮಂಡಳಿಯ ಅಧಿಕಾರವಧಿ ಮೇ 12ಕ್ಕೆ ಮುಕ್ತಾಯವಾಗಿದ್ದು, ನೆಪಗಳನ್ನು ಹೇಳದೆ ಕೂಡಲೇ ಚುನಾವಣೆ ನಡೆಸಿ ಹೊಸ ಆಡಳಿತ ನಡೆಸಬೇಕು” ಎಂದು ಆಗ್ರಹಿಸಿದರು.

ಜೆಡಿಎಸ್‌ ಜಿಲ್ಲಾಧ್ಯಕ್ಷ ಮುನಿಯಪ್ಪ ಮಾತನಾಡಿ, “ಕಾನೂನನ್ನು ಅರಿತಿರುವ ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ ಕೋಚಿಮುಲ್‌ ಚುನಾವಣೆ ಬಗ್ಗೆ ಅರಿವಿಲ್ಲವೇ?. ರಾಜ್ಯಾದ್ಯಂತ ಇದೇ ರೀತಿ ಸಹಕಾರಿ ಹಾಲು ಒಕ್ಕೂಟಗಳ ಚುನಾವಣೆಯನ್ನು ಮುಂದೂಡಿ, ಆಡಳಿತ ಮಂಡಳಿ ಹಾಗೂ ಪದಾಧಿಕಾರಿಗಳ ಅವಧಿಯನ್ನು ಮುಂದುವರೆಸಿರುವುದು ಖಂಡನೀಯ. ಪ್ರಜಾಪ್ರಭುತ್ವದ ಉಳಿವಿಗಾಗಿ ಕೂಡಲೇ ಚುನಾವಣೆ ನಡೆಸಿ ಹಾಲು ಉತ್ಪಾದಕರ ಅಭಿವೃದ್ಧಿಗೆ ಸಹಕರಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಮುಖಂಡ ಕೆ ವಿ ನಾಗರಾಜು ಮಾತನಾಡಿ, “ಸಹಕಾರಿ ಕ್ಷೇತ್ರ ಪ್ರಜಾಪ್ರಭುತ್ವದ ವ್ಯವಸ್ಥೆಯಿಂದ ದೂರ ಸರಿಯುತ್ತಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಆಡಳಿತ ಮಂಡಳಿ, ಪದಾಧಿಕಾರಿಗಳ ಅವ್ಯವಹಾರದ ಕುರಿತು ಇ.ಡಿ ತನಿಖೆ ನಡೆಸಿ ವರದಿ ಸಲ್ಲಿಸಿದೆ. ಸರ್ಕಾರ ಸಬೂಬುಗಳನ್ನು ಹೇಳಿ ಪ್ರಸ್ತುತ ಇರುವ ಆಡಳಿತ ಮಂಡಳಿಯನ್ನು ಒಂದು ವರ್ಷದವರೆಗೆ ಮುಂದುವರೆಸಿ ಮತ್ತೊಮ್ಮೆ ಡೆಲಿಗೇಟ್ಸ್‌ಗಳನ್ನು ನೇಮಿಸುವ ಹುನ್ನಾರ ನಡೆಸಿದೆ. ಹಾಗಾಗಿಯೇ ಚುನಾವಣೆಯನ್ನು ಮುಂದೂಡಲಾಗುತ್ತಿದೆ” ಎಂದು ಕಿಡಿಕಾರಿದರು.

“ಈಗಾಗಲೇ ಸಹಕಾರಿ ಒಕ್ಕೂಟದ ಸದಸ್ಯ ಸಂಘಗಳಿಂದ(ಕೊಲಾರ 782, ಚಿಕ್ಕಬಳ್ಳಾಪುರ 799) ಡೆಲೆಗೇಟ್ಸ್‌ಗಳನ್ನು ನೇಮಿಸಲಾಗಿದ್ದು, ತುರ್ತಾಗಿ ಚುನಾವಣಾ ಪ್ರಕ್ರಿಯೆಯನ್ನು ನಡೆಸಬೇಕು” ಎಂದು ಒತ್ತಾಯಿಸಿದರು.

ಕೋಚಿಮುಲ್‌ ಮಾಜಿ ಅಧ್ಯಕ್ಷ ರಮೇಶ್ ಮಾತನಾಡಿ, “ಇಡೀ ರಾಜ್ಯದಲ್ಲೇ ಅತಿ ಹೆಚ್ಚು ಹಾಲು ಉತ್ಪಾದನೆಯಾಗುವುದು ನಮ್ಮ ಕೋಚಿಮುಲ್‌ ಒಕ್ಕೂಟದಲ್ಲಿ ಮಾತ್ರ. ಲೋಕಸಭೆ ಚುನಾವಣೆ ಮುಗಿದರೂ ಹಾಲು ಒಕ್ಕೂಟದ ಚುನಾವಣೆ ನಡೆಸದಿರುವುದು ಸರಿಯಲ್ಲ. ಹಿರಿಯ ಸಚಿವ ರಾಜಣ್ಣ ಅವರು ಪಕ್ಷದ ಹಿತಾಸಕ್ತಿಗಾಗಿ ರಾಜಕೀಯ ಒತ್ತಾಯಕ್ಕೆ ಮಣಿಯುತ್ತಿರುವುದು ಸರಿಯಲ್ಲ. ಕೂಡಲೇ ಚುನಾವಣೆ ನಡೆಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಹಬ್ಬಗಳು ತ್ಯಾಗ ಮತ್ತು ಭ್ರಾತೃತ್ವದ ಸಂಕೇತ: ಡಾ ವಿನ್ಸೆಂಟ್ ಆಳ್ವಾ

ಸುದ್ದಿಗೋಷ್ಟಿಯಲ್ಲಿ ಕೋಚಿಮುಲ್‌ ಮಾಜಿ ಅಧ್ಯಕ್ಷ ರಮೇಶ್‌, ನಾರಾಯಣಸ್ವಾಮಿ, ಅಶ್ವತಪ್ಪ, ಮಾಜಿ ನಿರ್ದೇಶಕಿ ಪ್ರೇಮಕುಮಾರಿ, ರಾಮಣ್ಣ, ಚಿಂತಾಮಣಿ ಗೋಪಾಲಕೃಷ್ಣ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...