ಚಿಕ್ಕಬಳ್ಳಾಪುರ | ಚುನಾವಣಾ ವೆಚ್ಚ ₹95 ಲಕ್ಷ ಮೀರಿದರೆ ಅಭ್ಯರ್ಥಿ ಅನರ್ಹ: ಜಿಲ್ಲಾಧಿಕಾರಿ ರವೀಂದ್ರ

Date:

ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗೆ ₹95 ಲಕ್ಷಗಳವರೆಗೆ ಚುನಾವಣಾ ವೆಚ್ಚ ಮಾಡಲು ಅವಕಾಶವಿರುತ್ತದೆ. ಮಿತಿ ಮೀರಿ ವೆಚ್ಚ ಮಾಡಿದ ಅಭ್ಯರ್ಥಿಗಳು ಅರ್ನಹಗೊಳ್ಳಲಿದ್ದಾರೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಹೇಳಿದರು.

2024ರ ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜಕೀಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮುಂದಿನ ಚುನಾವಣಾ ಪ್ರಕ್ರಿಯೆಗಳ ಕುರಿತು ಮಾತನಾಡಿದರು.

“ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ, ಖಾಸಗಿ ಸ್ಥಳಗಳಲ್ಲಿ ಚುನಾವಣಾ ಪ್ರಚಾರ, ರಾಜಕೀಯ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಅನುಮತಿ ಕಡ್ಡಾಯ. ನಾಮಪತ್ರ ಸಲ್ಲಿಕೆವರೆಗೆ ಈ ಚುನಾವಣಾ ವೆಚ್ಚವು ಪಕ್ಷದ ಲೆಕ್ಕಕ್ಕೆ ಸೇರಿಸಲಾಗುತ್ತದೆ. ನಾಮಪತ್ರ ಸಲ್ಲಿಕೆಯಾದ ಮೇಲೆ ಅಭ್ಯರ್ಥಿಯ ಲೆಕ್ಕಕ್ಕೆ ಸೇರ್ಪಡೆ ಮಾಡಲಾಗುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾರ್ವಜನಿಕವಾಗಿ ಕಾಣುವ ಅಥವಾ ಪ್ರದರ್ಶನಗೊಳ್ಳುವ ಹಾಗೆ ಯಾವುದೇ ರಾಜಕೀಯ ಪ್ರತಿನಿಧಿಗಳ, ಅಭ್ಯರ್ಥಿಗಳ ಛಾಯಾಚಿತ್ರಗಳನ್ನು, ಜಾಹೀರಾತು ವಿವರವುಳ್ಳ ಪ್ರಕಟಣೆಗಳನ್ನು ಖಾಸಗಿ ಕಟ್ಟಡಗಳ ಮೇಲೂ ಅನುಮತಿಯಿಲ್ಲದೆ ಹಾಕುವಂತಿಲ್ಲ” ಎಂದು ಹೇಳಿದರು.

ಚುನಾವಣಾ ಅಧಿಸೂಚನೆ, ನಾಮಪತ್ರ ಸಲ್ಲಿಕೆ, ಹಿಂಪಡೆಯುವಿಕೆ, ಮತದಾನ ದಿನಾಂಕ, ಎಣಿಕೆ ದಿನಾಂಕ ಸೇರಿದಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತದಾರರ ವಿವರ, ಮತಗಟ್ಟೆಗಳ ವಿವರ, ಚುನಾವಣಾ ಕರ್ತವ್ಯದ ಸಿಬ್ಬಂದಿ ವಿವರದ ಸಂಪೂರ್ಣ ವಿವರವನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ತಿಳಿಸಿದರು.

“ಚುನಾವಣಾ ಸಂದರ್ಭದಲ್ಲಿ ಯಾವುದೇ ಅಭ್ಯರ್ಥಿಗಳು ಮತದಾರರಿಗೆ ಆಮಿಷವೊಡ್ಡುವ ವಸ್ತುಗಳನ್ನು ವಿತರಿಸುವುದು ಕಂಡುಬಂದಲ್ಲಿ ಅಥವಾ ಚುನಾವಣೆಗೆ ಸಂಬಂಧಿಸಿದ ಇತರ ದೂರುಗಳಿದ್ದಲ್ಲಿ ಸಾರ್ವಜನಿಕರು ಸಿ-ವಿಜಲ್‌ ಆ್ಯಪ್‌ ಮುಖಾಂತರ ದೂರು ಸಲ್ಲಿಸಿದರೆ 100 ನಿಮಿಷಗಳ ಒಳಗಡೆ ಕ್ರಮವಹಿಸಲಾಗುವುದು. ಅಲ್ಲದೆ ಚುನಾವಣೆಗೆ ಸಂಬಂಧಿಸಿದ ಮಾಹಿತಿ ಹಾಗೂ ಮತದಾರರ ನೋಂದಣಿಗೆ ಸಂಬಂಧಿಸಿದಂತೆ ವೋಟರ್‌ ಹೆಲ್ಪ್‌ಲೈನ್‌ ಮೂಲಕ ಸಂಪರ್ಕಿಸಬಹುದು. ಜತೆಗೆ ಟೋಲ್ ಫ್ರೀ ನಂ.1950 ಕರೆ ಮಾಡಿ ತಿಳಿಸಬಹುದು. ಚುನಾವಣೆಗೆ ಸಂಬಂಧಪಟ್ಟಂತೆ ಸಭೆ ಸಮಾರಂಭ, ಮೆರವಣಿಗೆ ಇನ್ನಿತರ ಅನುಮತಿಗೆ ಏಕಗವಾಕ್ಷಿ ಪದ್ದತಿ ಮೂಲಕ ಕ್ರಮವಹಿಸಲಾಗಿದ್ದು, ಸುವಿಧಾ ಆ್ಯಪ್‌ ಮುಖಾಂತರ ಅನುಮತಿಗೆ ಅರ್ಜಿ ಸಲ್ಲಿಸಬಹುದು. ವಿಶೇಷ ಚೇತನರು ಮನೆ ಮತದಾನಕ್ಕಾಗಿ ಸಕ್ಷಮ ಆ್ಯಪ್‌ ಮೂಲಕ ನೋಂದಣಿಯಾಗಬಹುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಚುನಾವಣಾ ನೀತಿ ಸಂಹಿತೆ ಜಾರಿ; ಪ್ರಚಾರ ಸಾಮಗ್ರಿಗಳ ತೆರವು

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ ಟಿ ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ ಎಲ್ ನಾಗೇಶ್, ಅಪರ ಜಿಲ್ಲಾಧಿಕಾರಿ ಡಾ ಎನ್ ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ವೆಚ್ಚ ಅಧಿಕಾರಿ ಹರೀಶ್, ಚುನಾವಣಾ ತಹಶೀಲ್ದಾರ್ ಮುನಿಶಾಮಿರೆಡ್ಡಿ, ಬಹುಜನ ಸಮಾಜ ಪಕ್ಷದ ಪ್ರತಿನಿಧಿ ಕಾಂತರಾಜು ಸಿ, ಭಾರತೀಯ ಜನತಾ ಪಕ್ಷದ ಪ್ರತಿನಿಧಿ ಲಕ್ಷ್ಮೀ ನಾರಾಯಣ ಗುಪ್ತ, ಭಾರತ ಕಮ್ಯೂನೀಸ್ಟ್ ಪಕ್ಷದ ಪ್ರತಿನಿಧಿ ಬಿ ಎನ್ ಮುನಿಕೃಷ್ಣಪ್ಪ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಪ್ರತಿನಿಧಿ ಮಧುಸೂಧನ್, ಜಾತ್ಯತೀತ ಜನತಾದಳ ಪಕ್ಷದ ಪ್ರತಿನಿಧಿ ನಾರಾಯಣಸ್ವಾಮಿ, ಆಮ್ ಆದ್ಮಿ ಪಕ್ಷದ ಪ್ರತಿನಿಧಿ ನಂದಿ ಭಾಷಾ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...