ಚಿಕ್ಕಬಳ್ಳಾಪುರ | ಕರ್ನಾಟಕಕ್ಕೆ ಕೇಂದ್ರದ ಕೊಡುಗೆ ಚೊಂಬು: ಸಚಿವ ಎಂ ಸಿ ಸುಧಾಕರ್‌

Date:

ರಾಜ್ಯಕ್ಕೆ ಕೇಂದ್ರ ಬಿಜೆಪಿ ಸರ್ಕಾರದ ಕೊಡುಗೆ ಕೇವಲ ಚೊಂಬಷ್ಟೇ. ನಮ್ಮ ರಾಜ್ಯದ ವಿಚಾರದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ‌ಅನ್ಯಾಯ ಧೋರಣೆ ಮಾಡುತ್ತಿದೆ ಎಂದು ಸಚಿವ ಎಂ ಸಿ ಸುಧಾಕರ್‌ ವಾಗ್ದಾಳಿ ನಡೆಸಿದರು.

ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್‌ ವೃತ್ತದಲ್ಲಿ ಕೇಂದ್ರ ಬಜೆಟ್‌ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಘಟಕ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

“ಕೇಂದ್ರ ಬಿಜೆಪಿ ಸರ್ಕಾರ ನಿರಂತರವಾಗಿ ರಾಜ್ಯದ ಜನರಿಗೆ ಅನ್ಯಾನ ಮಾಡುತ್ತಿದ್ದು, ಈ ಬಾರಿಯ ಬಜೆಟ್‌ನಲ್ಲೂ ರಾಜ್ಯಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ಕೇವಲ ಸರ್ಕಾರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಆಂಧ್ರ ಮತ್ತು ಬಿಹಾರ ರಾಜ್ಯಗಳಿಗೆ ಹೆಚ್ಚು ಅನುದಾನ ನೀಡಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿರಂತರ ಜನವಿರೋಧಿ ಆಡಳಿತ ನಡೆಸುತ್ತಿರುವ ಕೇಂದ್ರ ಬಿಜೆಪಿ ಕೇವಲ ಭಾವನಾತ್ಮಕ ವಿಚಾರಗಳಿಂದ ಜನರ ಮನಸ್ಸನ್ನು ಗೆಲ್ಲುವ ಪ್ರಯತ್ನ ಮಾಡುತ್ತಿದೆ. ಜನಸಾಮಾನ್ಯರ, ರೈತರ ಹಿತ ಕಾಪಾಡುವಲ್ಲಿ ವಿಫಲವಾಗಿದೆ. ನೀರಾವರಿ ಯೋಜನೆಗಳು, ಮೂಲಭೂತ ಸೌಲಭ್ಯಗಳು ಸೇರಿದಂತೆ ಅಭಿವೃದ್ಧಿ ವಿಚಾರದಲ್ಲಿ ಚಿಂತನೆ ನಡೆಸುತ್ತಿಲ್ಲ. ಈ ನಿಟ್ಟಿನಲ್ಲಿ ರಾಜ್ಯದ 19 ಮಂದಿ ಸಂಸದರು ಸಂಪೂರ್ಣ ವಿಫಲರಾಗಿದ್ದಾರೆ” ಎಂದು ಕುಟುಕಿದರು.

“ವಿಪಕ್ಷ ನಾಯಕರು ಅಭಿವೃದ್ಧಿ ವಿಚಾರಗಳನ್ನು ಬಿಟ್ಟು, ಇಲ್ಲಸಲ್ಲದ ವಿಚಾರಗಳನ್ನು ಇಟ್ಟುಕೊಂಡು ಕಲಾಪ ಹಾಳುಮಾಡುತ್ತಿದ್ದಾರೆ. ಮುಖ್ಯ ವಿಚಾರಗಳನ್ನು ಚರ್ಚೆ ಮಾಡುತ್ತಿಲ್ಲ” ಎಂದು ಗುಡುಗಿದರು.

“ಕೈಗಾರಿಕೆ ಅಭಿವೃದ್ಧಿ ನಿಟ್ಟಿನಲ್ಲಿ 5,200 ಎಕರೆಗೂ ಅಧಿಕ ಭೂಮಿ ಗುರುತಿಸಿದ್ದೇವೆಂದು ಈ ಭಾಗದ ಲೋಕಸಭಾ ಸದಸ್ಯರು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಮಂಚೇನಹಳ್ಳಿಯಲ್ಲಿ 2 ಸಾವಿರ ಎಕರೆ ಜಾಗವಿದೆ ಎನ್ನುತ್ತಿದ್ದಾರೆ. ಇದಕ್ಕೆ ದಾಖಲೆ ಏನಿದೆ ಎಂಬುದನ್ನು ಅವರು ತೋರಿಸಲಿ. ಇದು ಜನರನ್ನು ಯಾಮಾರಿಸುವ ಪ್ರಯತ್ನ. ಸಂಸದರು ಬಡಾಯಿ ಕೊಚ್ಚಿಕೊಳ್ಳುವುದನ್ನು ಬಿಟ್ಟು ತಾಕತ್ತಿದ್ದರೆ ಲೋಕಸಭೆಯಲ್ಲಿ ಮಾತನಾಡಲಿ” ಎಂದು ಪರೋಕ್ಷವಾಗಿ ಸಂಸದ ಕೆ ಸುಧಾಕರ್‌ ಅವರಿಗೆ ಸವಾಲೆಸೆದರು.

“ನಮ್ಮ ಸರ್ಕಾರ ಹೈಟೆಕ್‌ ಮಾರುಕಟ್ಟೆ ನಿರ್ಮಾಣಕ್ಕಾಗಿ ₹20 ಕೋಟಿ ಅನುದಾನ ಮೀಸಲಿಟ್ಟಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ತರಾತುರಿಯಲ್ಲಿ ಜಾಗ ಗುರುತಿಸದೆ ರೋಪ್‌ ವೇ ಕಾಮಗಾರಿಗೆ ಚಾಲನೆ ನೀಡಿದ್ದರು. ಆದರೆ ನಾವು ರೋಪ್‌ ವೇ ನಿರ್ಮಾಣಕ್ಕೆ ಅಗತ್ಯವಿರುವ ಜಾಗ ಗುರುತಿಸಿ ಅರಣ್ಯ ಇಲಾಖೆ ಜಾಗವನ್ನು ಪ್ರವಾಸೋದ್ಯಮ ಇಲಾಖೆಗೆ ವರ್ಗಾವಣೆ ಮಾಡಿದ್ದು, ರಾಜ್ಯಪಾಲರ ಅಂಕಿತಕ್ಕೆ ಕಾಯುತ್ತಿದ್ದೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಮುಚ್ಚುವ ಸ್ಥಿತಿಯಲ್ಲಿದ್ದ ಸರ್ಕಾರಿ ಶಾಲೆಯಲ್ಲೀಗ 250ಕ್ಕೂ ಅಧಿಕ ಮಕ್ಕಳು!

“ಕೇಂದ್ರದ ಬಜೆಟ್‌ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಕುರಿತು ಬಿಜೆಪಿ ಧ್ವನಿ ಎತ್ತುತ್ತಿಲ್ಲ. ಈ ಭಾಗದ ಜನಕ್ಕೆ ನ್ಯಾಯಕೊಡಿಸುವ ಕೆಲಸ ಮಾಡಿ. ನಿಮ್ಮ ಸಾಧನೆ ಏನೆಂಬುದನ್ನು ರಾಜ್ಯದ ಜನಕ್ಕೆ ತಿಳಿಸಿ. ನಿಮಗೆ ನೈತಿಕತೆ ಇಲ್ಲ. ಸರ್ಕಾರವನ್ನು ಹಾಳುಮಾಡುವ ನಿಮ್ಮ ಯಾವುದೇ ಆರೋಪಗಳು ಫಲಿಸುವುದಿಲ್ಲ. ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಹೋರಾಟದ ಮೂಲಕ ಜನರಿಗೆ ತಿಳಿಸುವ ಕೆಲಸವನ್ನು ಕಾಂಗ್ರೆಸ್‌ ಮಾಡಲಿದೆ” ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ‌ ಪಿ ಬಚ್ಚೇಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ‌ ಕೇಶವರೆಡ್ಡಿ, ರಾಜೇಗೌಡ, ಶಾಸಕ ಸುಬ್ಬಾರೆಡ್ಡಿ, ಭರಣಿ ವೆಂಕಟೇಶ್‌, ಮಮತಾ ಮೂರ್ತಿ, ರಾಜೇಶ್‌, ವೆಂಕಟಲಕ್ಷ್ಮಮ್ಮ, ಅಣ್ಣಮ್ಮ ಸೇರಿದಂತೆ ನೂರಾರು ಮಂದಿ ಕಾಂಗ್ರೆಸ್‌ ಕಾರ್ಯಕರ್ತರು ಇದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...