ಚಿಕ್ಕಬಳ್ಳಾಪುರ | ಜಮೀನು ವಿಚಾರಕ್ಕೆ ದಲಿತ ಸಮುದಾಯದವರಿಗೆ ಹಲ್ಲೆ; ತಂಗಿಡಪ್ಪ ಕುಟುಂಬದ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ದಲಿತ ಕುಟುಂಬದವರ ಮೇಲೆ ಕುರುಬ ಸಮುದಾಯದವರು ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ರಾಮಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ.

ದಲಿತ ಸಮುದಾಯದ ಭಾಸ್ಕರ್ ಮತ್ತು ಅತ್ತಿಗೆ ಚಿತ್ರಾ ಸೇರಿದಂತೆ ಇತರರ ಮೇಲೆ ಇದೇ ಗ್ರಾಮದ ಕುರುಬ ಸಮುದಾಯದ ತಂಗಿಡಪ್ಪ ಕುಟುಂಬದವರು ಹಲ್ಲೆ ಸೋಮವಾರದಂದು ಹಲ್ಲೆ ಮಾಡಿದ್ದು, ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ದಸಂಸ ಮುಖಂಡ ಗಂಗಪ್ಪ ಜಿ ವಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಕಮ್ಮಡಿಕೆ ಗ್ರಾಮದ ಸರ್ವೇ ನಂಬರ್‌ 76/1, 2, 3 ಮತ್ತು 4ರ ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ತಂಗಿಡಪ್ಪ ಕುಟುಂಬದವರು ಜೆಸಿಬಿ ತಂದು ಅಲ್ಲಿಯ ಗಿಡಮರಗಳನ್ನು ಕಿತ್ತು ಗಲಾಟೆ ಮಾಡಿ ದೌರ್ಜನ್ಯ ಎಸಗಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸದರಿ ಜಮೀನಿನ ವಿಚಾರದಲ್ಲಿ 2017ರಂದು ತಂಗಿಡಪ್ಪ ಕುಟುಂಬದವರು ಬೋವಿ ಸಮುದಾಯ(ಎಸ್‌ಸಿ)ದ ನಾರಾಯಣಪ್ಪ ಕುಟುಂಬದವರ ಮೇಲೆ ದೌರ್ಜನ್ಯ ನಡೆಸಿದ್ದು, 6 ಮಂದಿಯನ್ನು ಶಾಶ್ವತ ಅಂಗವಿಕಲರನ್ನಾಗಿ ಮಾಡಿದ್ದಾರೆ. ಹೀಗಿರುವಾಗ ಇಂದು ಪೊಲೀಸ್ ಬಲ ಪ್ರಯೋಗಿಸಿ ಸದರಿ ಜಮೀನನ್ನು ಮತ್ತೊಮ್ಮೆ ಕಬಳಿಸಲು ಮುಂದಾಗಿದ್ದಾರೆ. ಸದರಿ ಘಟನೆಗೆ ಚಿಕ್ಕಬಳಾಪುರ ಜಿಲ್ಲಾ ಪೋಲಿಸ್ ಇಲಾಖೆಯ ನಿಷ್ಕ್ರಿಯ ನಡಾವಳಿಯೇ ಕಾರಣ” ಎಂದು ಸ್ಥಳೀಯ ದಸಂಸ ಮುಖಂಡ ಗಂಗಪ್ಪ ಜಿ ವಿ ಆರೋಪಿಸಿದರು.

gudibande fight

“ಸಂತ್ರಸ್ತರು ಗಂಭೀರ ಗಾಯಗೊಂಡಿದ್ದು, ಆರೋಪಿಗಳ ದುರ್ವರ್ತನೆ ಕಂಡು ಹೆದರಿದ್ದಾರೆ. ಈ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳ ಬಳಿ ಕೊಲೆ ಆತಂಕ ವ್ಯಕ್ತಪಡಿಸಿದ್ದು, ತಪ್ಪಿತಸ್ತರ ವಿರುದ್ಧ ಕ್ರಮಕ್ಕೆ ಮನವಿ ಮಾಡಿದ್ದಾರೆ. ಪೊಲೀಸ್‌ ಅಧಿಕಾರಿಗಳು ಸಂತ್ರಸ್ತರಿಗೆ ಬೆಂಬಲ ನೀಡಿದ್ದು, ಯಾವುದೇ ರೀತಿ ತೊಂದರೆಗಳಾಗುವುದಿಲ್ಲವೆಂದು ಸಂತ್ರಸ್ತರನ್ನು ಸಂತೈಸಿದ್ದಾರೆ ಎಂದು ಗಂಗಪ್ಪ ಜಿ ವಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅಮಿತ್ ಶಾ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಲು ಆಗ್ರಹಿಸಿ ಒಡಲ ದನಿ ಮಹಿಳಾ ಒಕ್ಕೂಟ ಪ್ರತಿಭಟನೆ

ಈ ಘಟನೆಯನ್ನು ದಸಂಸ ಜಿಲ್ಲಾ ಶಾಖೆ ತೀವ್ರವಾಗಿ ಖಂಡಿಸಿದ್ದು, ಘಟನೆ ತಿಳಿದ ಕೂಡಲೇ ಗುಡಿಬಂಡೆ ತಾಲೂಕು ಪದಾಧಿಕಾರಿಗಳು ಸಂತ್ರಸ್ತ ದಲಿತರಿಗೆ ನೈತಿಕ ಬೆಂಬಲ ಸೂಚಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗೆ ಒತ್ತಾಯಿಸಿರುತ್ತಾರೆ.

ಘಟನೆಗೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಡಿವೈಎಸ್‌ಪಿಯವರನ್ನು ಸಂಪರ್ಕಿಸದೆ. ಆದರೆ ಅವರು ಯಾವುದೇ ಕರೆಗೆ ಲಭ್ಯವಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...