ಚಿಕ್ಕಬಳ್ಳಾಪುರ | ಬಾಲಕಿಯರಿಗೆ ಬರೆ, ವೇಶ್ಯಾವಾಟಿಕೆಗೆ ಒತ್ತಾಯ; ಬಾಲಮಂದಿರ ಅಧೀಕ್ಷಕಿಯ ವಿಕೃತಿ

Date:

ಲೈಂಗಿಕ ಕಿರುಕುಳ, ದೌರ್ಜನ್ಯ, ಹಿಂಸೆಗಳಿಂದ ನೊಂದ ಸಂತ್ರಸ್ತ ಬಾಲಕಿಯರಿಗೆ ಆತ್ಮಸ್ಥೈರ್ಯ, ಧೈರ್ಯ ತುಂಬಬೇಕಿದ್ದ ಬಾಲಕಿಯರ ಮಂದಿರದಲ್ಲಿಯೇ ಸಂತ್ರಸ್ತೆಯರ ಮೇಲೆ ದೌರ್ಜನ್ಯಗಳು ನಡೆದಿರುವ ಆಘಾತಕಾರಿ ಪ್ರಕರಣ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ. ನಗರದಲ್ಲಿರುವ ಸರ್ಕಾರಿ ಬಾಲಕಿಯರ ಮಂದಿರದ ಅಧೀಕ್ಷಕಿ ಮತ್ತು ಸಹಾಯಕಿ ಬಾಲಕಿಯರನ್ನು ಕಟ್ಟಿ ಹಾಕಿ ಹಲ್ಲೆ ನಡಸಿ, ವೇಶ್ಯಾವೃತ್ತಿ ಅನುಸರಿಸುವಂತೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ದೌರ್ಜನ್ಯಕ್ಕೊಳಗಾದ ಹೆಣ್ಣು ಮಕ್ಕಳ ರಕ್ಷಣೆ ಮತ್ತು ನೆರವಿಗಾಗಿ ಸರ್ಕಾರವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಬಾಲಕಿಯರ ಮಂದಿರಗಳನ್ನು ನಡೆಸುತ್ತಿದೆ. ಮಂದಿರದಲ್ಲಿ ನೊಂದ ಬಾಲಕಿಯರಿಗೆ ಆಹಾರ, ವಸತಿ ನೀಡಿ ಅವರನ್ನು ಪೋಷಿಸಲಾಗುತ್ತದೆ. ಆದರೆ, ಚಿಕ್ಕಬಳ್ಳಾಪುರದ ಸರ್ಕಾರಿ ಬಾಲಕಿಯರ ಮಂದಿರವು ಹೆಣ್ಣುಮಕ್ಕಳ ಪಾಲಿಗೆ ಯಮ ಸ್ವರೂಪಿಯಾಗಿದೆ.

ಸಂತ್ರಸ್ತ ಹೆಣ್ಣುಮಕ್ಕಳಿಗೆ ಸಾಂತ್ವನ ಹೇಳಿ, ಆತ್ಮಸ್ಥೈರ್ಯ ತುಂಬಬೇಕಾದ ಬಾಲಮಂದಿರದ ಅಧೀಕ್ಷಕಿ ಮಮತಾ ಮತ್ತು ಸಹಾಯಕಿ ಸರಸ್ವತಿ ಬಾಲಕಿಯರಿಗೆ ದೈಹಿಕ ಹಿಂಸೆ, ಮಾನಸಿಕ ಕಿರುಕುಳ ನೀಡಿದ್ದಾರೆ. ವೇಶ್ಯಾವೃತ್ತಿಯಲ್ಲಿ ತೊಡಗಿಸಿಕೊಳ್ಳುವಂತೆ ಒತ್ತಾಯ ಹಾಕಿದ್ದಾರೆ. ನಿರಾಕರಿಸಿದ ಬಾಲಕಿಯರನ್ನು ಕಟ್ಟಿ ಹಾಕಿ, ಅವರ ಮೇಲೆ ಹಲ್ಲೆಗೈದು, ಬರೆ ಹಾಕಿದ್ದಾರೆ. ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಮಂದಿರಕ್ಕೆ ಚಿಕ್ಕಬಳ್ಳಾಪುರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು ಭೇಟಿ ನೀಡದಾಗ ಬಾಲಕಿಯರು ತಾವು ಅನುಭಿಸುತ್ತಿರುವ ಹಿಂಸೆಗಳ ಬಗ್ಗೆ ಹೇಳಿಕೊಂಡಿದ್ದಾರೆ. ಬಾಲಮಂದಿರದ ಅಧೀಕ್ಷಕಿ ಮಮತಾ ಮತ್ತು ಸಹಾಯಕಿಸ ಸರಸ್ವತಿ ವಿರುದ್ಧ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಸೂಚನೆ ನೀಡಿದ್ದು, ಚಿಕ್ಕಬಳ್ಳಾಪುರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಈದಿನ.ಕಾಮ್ ಯತ್ನಿಸಿದ್ದು, ಅವರು ಸಂಪರ್ಕಕ್ಕೆ ದೊರೆತಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕಬಳಿಕ ಸುದ್ದಿಯನ್ನು ಅಪ್‌ಡೇಟ್‌ ಮಾಡಲಾಗುವುದು.

ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯದ ಬಗ್ಗೆ ಈದಿನ.ಕಾಮ್‌ ಪ್ರಕಟಿಸಿದ ಕೆಲ ವರದಿ ಇಲ್ಲಿವೆ;
_____________________________________________________________

ಹೊಸಕಾಲದ ವಿಕೃತಿ | ಹೆಣ್ಣನ್ನು ಅವಮಾನಿಸುವ ವೇದಿಕೆಯಾಗುತ್ತಿದೆಯೇ ಸಾಮಾಜಿಕ ಜಾಲತಾಣ?

ಸಾಮಾಜಿಕ ಮಾಧ್ಯಮದಲ್ಲಿ ಮಹಿಳೆಯರನ್ನು ಮಾರಿಯರಂತೆ ಬಿಂಬಿಸುವ, ದಡ್ಡರೆಂದು ಅಪಹಾಸ್ಯ ಮಾಡುವ, ನಡೆ, ವರ್ಣನೆ, ನಿರೂಪಣೆಗಳ ಮೂಲಕ ಮಹಿಳೆಯರನ್ನು ಅಪಮಾನ ಮಾಡುವ ಪೋಸ್ಟರ್‌ಗಳು, ಚಿತ್ರಗಳು, ರೀಲ್ಸ್‌-ವಿಡಿಯೋಗಳು ವೈರಲ್ ಆಗುತ್ತಲೇ ಇವೆ. ಅವುಗಳನ್ನು ಮಹಿಳೆಯರು ಅದರಲ್ಲೂ ಯುವತಿಯರು ಒಪ್ಪಿಕೊಳ್ಳುವಂತಹ ಮನಸ್ಥಿತಿಯನ್ನೂ ಹುಟ್ಟುಹಾಕಲಾಗಿದೆ. ಇದೆಲ್ಲದರ ನಡುವೆ, ಮಹಿಳೆಯರ ಪ್ರತಿಭೆಯನ್ನೂ ತಮ್ಮ ಟ್ರೋಲ್‌ಗಳ ಲಾಲಸೆಗಾಗಿ ಅವಹೇಳನ ಮಾಡುವ ಪ್ರವೃತ್ತಿಯೂ ಬೆಳೆಯುತ್ತಿದೆ. ನಿತ್ಯ ಮಹಿಳೆಯರು ಅಪ್‌ಲೋಡ್‌ ಮಾಡುವ ವಿಡಿಯೋ, ರೀಲ್ಸ್‌ಗಳಲ್ಲಿ ಹೆಚ್ಚಾಗಿ ಅವರ ಪ್ರತಿಭೆಯನ್ನು ಪುರಸ್ಕರಿಸುವುದಕ್ಕಿಂತ ಅವರ ಸೌಂದರ್ಯ ಕುರಿತ ಕಮೆಂಟ್‌ಗಳು ಹೆಚ್ಚಾಗುತ್ತಿವೆ. ಹೆಣ್ಣಿನ ಅಂದ-ಚೆಂದ, ಮೈಬಣ್ಣ, ದೇಹದ ಗಾತ್ರ, ಆಕಾರ ಸೇರಿದಂತೆ ಅವರ ಬಾಹ್ಯ ಸೌಂದರ್ಯದ ಬಗ್ಗೆ ಕೀಳು ಅಭಿರುಚಿಯ ಕಮೆಂಟ್‌ ಮಾಡುವ, ಅವಮಾನಿಸುವ ಪ್ರವೃತ್ತಿ ಮಿತಿ ಮೀರುತ್ತಿದೆ.

ಪ್ರಜ್ವಲ್ ಲೈಂಗಿಕ ಹಗರಣ | ಹಾಸನ ರಿಪಬ್ಲಿಕ್ ಮತ್ತು ರಾಜಕೀಯ ವಿಕೃತಿ

ಸಂತ್ರಸ್ತೆಯ ಕುಟುಂಬದವರಿಗೆ ಹಾನಿ ಮಾಡುವುದಾಗಿ ಬೆದರಿಕೆ ಹಾಕಿ ಬಲವಂತವಾಗಿ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಅಲ್ಲದೆ, ತನ್ನ ಕೃತ್ಯದ ವಿಡಿಯೋಗಳನ್ನು ತಾನೇ ರೆಕಾರ್ಡ್‌ ಮಾಡಿ, ಸಂತ್ರಸ್ತೆಯನ್ನು ಬ್ಲಾಕ್‌ಮೇಲ್ ಮಾಡಿದ್ದಾರೆ ಎಂದು ಓರ್ವ ಸಂತ್ರಸ್ತೆ ಆರೋಪಿಸಿದ್ದಾರೆ. ರಾಜ್ಯಸಭಾ ಸಂಸದರಾಗಿದ್ದ ದೇವೇಗೌಡರ ಅಧಿಕೃತ ನಿವಾಸವನ್ನೂ ಈ ಕೃತ್ಯಗಳಿಗೆ ಬಳಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಲೈಂಗಿಕ ಹಗರಣವು ಹೊರಬರುತ್ತಿದ್ದಂತೆ ರಾಜ್ಯದೆಲ್ಲೆಡೆ ಪ್ರತಿಭಟನೆಗಳು ಭುಗಿಲೆದ್ದವು. ಸಂಸದ ಪ್ರಜ್ವಲ್‌ನನ್ನು ಬಂಧಿಸುವಂತೆ ಒತ್ತಾಯಗಳು ಕೇಳಿಬಂದವು. ಈ ಮಧ್ಯೆ ರಾಜಕೀಯ ಪಕ್ಷಗಳ ನಡುವೆ ಕೆಸರೆರಚಾಟವೂ ಆರಂಭವಾಯಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...