ಚಿಕ್ಕಬಳ್ಳಾಪುರ | ಅಕ್ರಮವಾಗಿ ಗಾಂಜಾ ಮಾರಾಟ; ಆರೋಪಿ ಬಂಧನ

Date:

ಚಿಂತಾಮಣಿ ನಗರ ಪೊಲೀಸ್ ಠಾಣಾ ಸರಹದ್ದು ವ್ಯಾಪ್ತಿಯ ಕೀರ್ತಿನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಪೊಲೀಸರು ಅರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, 5 ಕೆಜಿ 720 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿ ಶಬಾನ ತನ್ನ ಮನೆಯಲ್ಲಿಯೇ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಠಾಣೆಯ ಸಿಬ್ಬಂದಿಗಳು ಕೀರ್ತಿ ನಗರದ ಶಬಾನ ಅವರ ಮನೆಯ ಬಳಿ ಹೋಗಿ ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಆಕೆಯು ಅಕ್ರಮವಾಗಿ ಮಾರಾಟ ಮಾಡಲು ತನ್ನ ಮನೆಯಲ್ಲಿ ಇಟ್ಟುಕೊಂಡಿದ್ದ ಸುಮಾರು 5 ಕೆಜಿ 720 ಗ್ರಾಂ ಗಾಂಜಾ(ಅಂದಾಜು ಬೆಲೆ ₹1.5 ಲಕ್ಷ)ವನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ವಶಕ್ಕೆ ಪಡೆದ ಗಾಂಜಾ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಟ, ದಾಸ್ತಾನು ಮತ್ತು ಸಾಗಾಣಿಕೆಯನ್ನು ನಿಯಂತ್ರಿಸಬೇಕೆಂದು ಪೊಲೀಸ್ ಅಧೀಕ್ಷಕ ಕುಶಾಲ್ ಚೌಕ್ಸೆಯವರು ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದರು. ಅದರಂತೆ ಅಪರ ಪೊಲೀಸ್ ಉಪಾಧೀಕ್ಷಕ ರಾಜ ಇಮಾಮ್ ಕಾಸಿಂ ಪಿ ಹಾಗೂ ಚಿಂತಾಮಣಿ ಉಪವಿಭಾಗ ಉಪಾದೀಕ್ಷಕ ಮುರಳೀಧರ ಪಿ ನೇತೃತ್ವದಲ್ಲಿ ಠಾಣಾ ಮಟ್ಟದಲ್ಲಿ ವಿಶೇಷ ತಂಡಗಳನ್ನು ರಚನೆ ಮಾಡಿ, ಠಾಣಾ ಸರಹದ್ದಿನಲ್ಲಿ ಆಕ್ರಮವಾಗಿ ಮಾರಾಟ, ಸಾಗಾಣಿಕೆ, ದಾಸ್ತಾನು ಮಾಡಿರುವಂತ ಮಾದಕವಸ್ತುಗಳ ಬಗ್ಗೆ ಮಾಹಿತಿಗಳನ್ನು ಸಂಗ್ರಹಿಸಿ ಕ್ರಮವಹಿಸುವಂತೆ ಸೂಚನೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಕಳಪೆ ಪಡಿತರ ವಿತರಣೆ; ಬಿಸಿಯೂಟದ‌ ಅಕ್ಕಿ, ಗೋದಿ, ಬೇಳೆ ಚೀಲಗಳಲ್ಲಿ ಜಡೆಗಟ್ಟಿದ ಹುಳುಗಳು

ಚಿಂತಾಮಣಿ ನಗರ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಈಗಾಗಲೇ ಎನ್‌ಡಿಪಿಎಸ್ ಕಾಯ್ದೆಯ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿರುವ ಆಸಾಮಿಗಳ ಮೇಲೆ ನಿಗಾ ಇಟ್ಟಿದ್ದರು. ಇದರ ಬೆನ್ನಲ್ಲೇ ಫೆಬ್ರವರಿ 11ರ ಬೆಳಿಗ್ಗೆ 11ಕ್ಕೆ ಚಿಂತಾಮಣಿ ನಗರ ಪೊಲೀಸ್ ಠಾಣೆಯ ಪಿಎಸ್‌ಐ ನಾರಾಯಣಸ್ವಾಮಿ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ವಿಚಾರವನ್ನು ಮೇಲಧಿಕಾರಿಗಳಿಗೆ ತಿಳಿಸಿ ಅವರ
ಮಾರ್ಗದರ್ಶನ ಪಡೆದು ಕಾರ್ಯಾಚರಣೆ ಆರಂಭಿಸಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...