ಚಿಕ್ಕಬಳ್ಳಾಪುರ | ಪ್ರತ್ಯೇಕ ಘಟನೆ; ತಾಯಿ ಮೇಲೆ ಅತ್ಯಾಚಾರ, ಮನೆಗೆ ನುಗ್ಗಿ ಮಹಿಳೆಯ ಕೊಲೆ

Date:

ಕುಡಿದ ಅಮಲಿನಲ್ಲಿದ್ದ ಮಗನೇ ತನ್ನ ತಾಯಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಚಿನ್ನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಭಾನುವಾರ ಘಟನೆ ನಡೆದಿದೆ ಎನ್ನಲಾಗಿದ್ದು, ಮದ್ಯದ ಅಮಲಿನಲ್ಲಿದ್ದ ಮಗ ತಾಯಿ ಮೇಲೆ ಅತ್ಯಾಚಾರವೆಸಗಿ, ಬಳಿಕ ತಂದೆ ತಾಯಿ ಇಬ್ಬರ ಮೇಲೆ ಹಲ್ಲೆ ಮಾಡಿ ಮನೆಯ ಹಿಂಭಾಗದ ತಿಪ್ಪೆಗುಂಡಿಗೆ ಎಸೆದಿದ್ದಾನೆ. ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸಂತ್ರಸ್ತೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆಂದು ತಿಳಿದುಬಂದಿದೆ.

ಆರೋಪಿ ಮಗ ವಿವಾಹಿತನಾಗಿದ್ದು, ಪತ್ನಿಯಿಂದ ದೂರ ಆಗಿದ್ದಾನೆಂದು ತಿಳಿದುಬಂದಿದೆ. ಗುಡಿಬಂಡೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಂತಾಮಣಿ ತಾಲೂಕಿನ ಕೈವಾರ ಗ್ರಾಮದಲ್ಲಿ ಮನೆಗೆ ನುಗ್ಗಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೈವಾರ ಗ್ರಾಮದ ನಿವೃತ್ತ ಸೆಕ್ರೇಟರಿ ಗೋವಿಂದಪ್ಪ ಅವರ ಪತ್ನಿ 70 ವರ್ಷದ ಲಲಿತಮ್ಮ ಕೊಲೆಯಾದ ಮಹಿಳೆ. ಮಗ ಅಮರೇಂದ್ರ ಶಿಡ್ಲಘಟ್ಟ ತಾಲೂಕು ಕಂದಾಯ ಇಲಾಖೆ ಆರ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಸೊಸೆ ಸುಧಾ ಸರ್ಕಾರಿ ಶಾಲೆಯಲ್ಲಿ ಅಡುಗೆ ಕೆಲಸಕ್ಕೆ ಹೋಗುತ್ತಿದ್ದರು.

ಮಗ ಸೊಸೆ ಇಬ್ಬರೂ ಕೆಲಸಕ್ಕೆ ತೆರಳಿದ್ದ ವೇಳೆ ದುಷ್ಕರ್ಮಿಗಳು ಮನೆಗೆ ನುಗ್ಗಿದ್ದು, ಮನೆಯಲ್ಲಿದ್ದ ಲಲಿತಮ್ಮ ಅವರ ಕತ್ತು ಸೀಳಿ ಕೊಲೆ ಮಾಡಿದ್ದಾರೆ. ಸೋಮವಾರ ಮದ್ಯಾಹ್ನ ಮನೆಗೆ ಬಂದ ಸೊಸೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅತ್ತೆಯನ್ನು ಕಂಡ ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆ ವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸಿ‌ದ್ದಾರೆ. ಆದರೂ ದ್ದು, ಚಿಕಿತ್ಸೆ ಫಲಿಸದೆ ಲಲಿತಮ್ಮ ಮೃತಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ಸರ್ಕಾರಿ ಇಲಾಖೆ ಸಿಬ್ಬಂದಿಗಳಿಗೆ ಕ್ರಿಕೆಟ್‌ ಪಂದ್ಯಾವಳಿ

ಚಿಕ್ಕಬಳ್ಳಾಪುರ ಎಸ್‌ಪಿ ಕುಶಾಲ್‌ ಚೌಕ್ಸೆ, ಎಎಸ್‌ಪಿ ರಜಾಕ್‌ ಇಮಾಮ್‌ ಖಾಸೀಂ, ಚಿಂತಾಮಣಿ ವಿಭಾಗದ ಡಿವೈಎಸ್‌ಪಿ ಮುರುಳೀಧರ್‌, ಪಿಐ ವಿಜಯ್‌ ಕುಮಾರ್‌, ಚಿಂತಾಮಣಿ ಗ್ರಾಮಾಂತರ ಠಾಣೆಯ ಪಿಐ ಶಿವರಾಜ್‌, ಕೈವಾರ ಹೊರಠಾಣೆಯ ಎಎಸ್‌ಐ ಪ್ರಕಾಶ್‌ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರ ತಂಡ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿದ್ದು, ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...