ಚಿಕ್ಕಬಳ್ಳಾಪುರ | ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ; ನಿಯಮ ಪಾಲನೆಗೆ ಸಹಾಯವಾಣಿ ಸ್ಥಾಪನೆ

Date:

ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೆಯ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ- 2024ರ ಸಂಬಂಧ ಮತದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಹಾಯವಾಣಿ ಸ್ಥಾಪಿಸಿದೆ.

ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ (ಹರಿಹರ, ದಾವಣಗೆರೆ ಮತ್ತು ಜಗಳೂರು ತಾಲೂಕುಗಳು ಮಾತ್ರ)ಜಿಲ್ಲೆಗಳು ಒಳಪಡಲಿದ್ದು, ಜೂನ್ 3ರಂದು ಮತದಾನ ಕಾರ್ಯ ನಡೆಯಲಿದೆ.

ಚುನಾವಣಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು ಇವರ ಕಚೇರಿಯಲ್ಲಿ ಮತ್ತು ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಗಳಲ್ಲಿ ಸಹಾಯವಾಣಿ(Helpline)ಯನ್ನು ಸ್ಥಾಪಿಸಲಾಗಿರುತ್ತದೆ. ಚುನಾವಣಾಧಿಕಾರಿಗಳ ಕಚೇರಿಯ ಸಹಾಯವಾಣಿ (Helpline) ಸಂಖ್ಯೆ: 080-22109665 ಆಗಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳ ಕಚೇರಿ ಸಹಾಯವಾಣಿ (Helpline) ವಿವರ

ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ ದಾವಣಗೆರೆ -1800-4250380, ಚಿತ್ರದುರ್ಗ 08194-1950, ತುಮಕೂರು 08162-273595, ಚಿಕ್ಕಬಳ್ಳಾಪುರ- 08156-277071, ಕೋಲಾರ 08152-243507 ಆಗಿರುತ್ತದೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಬುದ್ಧನ ಜೀವನ ತತ್ವಗಳು ಎಲ್ಲ ಕಾಲಕ್ಕೂ ಬೆಲೆಯುಳ್ಳವುಗಳಾಗಿವೆ: ದಸಂಸ ರಾಜ್ಯಾಧ್ಯಕ್ಷ ತಿರಕಪ್ಪ ಚಿಕ್ಕೇರಿ

“ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಪ್ರಜಾ ಪ್ರತಿನಿಧಿ ಕಾಯ್ದೆ, 1951ರ ಸೆಕ್ಷನ್ 135(ಸಿ)ರಡಿಯಲ್ಲಿ, ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ, ಮತದಾನ ಅಂತ್ಯಗೊಳ್ಳುವ 48 ಗಂಟೆಗಳ ಪೂರ್ವದಿಂದ ಅಂದರೆ ಜೂನ್‌ 01 ಅಪರಾಹ್ನ 4 ಗಂಟೆಯಿಂದ ಮತದಾನ ಪ್ರಕ್ರಿಯೆ ಮುಕ್ತಾಯಗೊಳ್ಳುವವರೆಗೆ ಚುನಾವಣಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶುಷ್ಕದಿನ(Dry Day)ವನ್ನು ಘೋಷಿಸಲಾಗಿರುತ್ತದೆ. ಈ ಅವಧಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದ್ದು, ಎಲ್ಲ ಮದ್ಯದ ಅಂಗಡಿಗಳು ಮುಚ್ಚಲ್ಪಡುತ್ತವೆ. ಚುನಾವಣಾ ನಿಯಮಾವಳಿಗಳ ಅನ್ವಯ ಮತದಾನ ಅಂತ್ಯಗೊಳ್ಳುವ 48 ಗಂಟೆಗಳ ಪೂರ್ವದಲ್ಲಿ ಅಂದರೆ ಜೂನ್‌ 1ರ ಅಪರಾಹ್ನ 4-00 ಗಂಟೆಗೆ ಚುನಾವಣಾ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದ್ದು, ನಂತರದಲ್ಲಿ ಯಾವುದೇ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ಬಹಿರಂಗ ಪ್ರಚಾರ ಕೈಗೊಳ್ಳುವುದನ್ನು ನಿಷೇಧಿಸಿದೆ” ಎಂದು ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...