ಚಿಕ್ಕಬಳ್ಳಾಪುರ | ಅನರ್ಹತೆ ಹಿನ್ನೆಲೆ ನಗರಸಭೆ ಆಯುಕ್ತ ಮಂಜುನಾಥ್ ನೇಮಕಾತಿ ರದ್ದು; ವಾರ್ಡ್ ಸದಸ್ಯರ ಅಸಮಾಧಾನ

Date:

ಚಿಕ್ಕಬಳ್ಳಾಪುರ ನಗರಸಭೆ ಆಯುಕ್ತ ಎ.ಎಸ್ ಮಂಜುನಾಥ್‌ ಅವರನ್ನು ಅನರ್ಹತೆ ಆಧಾರದ ಮೇಲೆ ನೇಮಕಾತಿ ರದ್ದುಗೊಳಿಸಿ ಹೈಕೋರ್ಟ್‌ ಆದೇಶಿಸಿದೆ. ಹೀಗಾಗಿ, ನಗರಸಭೆ ವಾರ್ಡ್ ಸದಸ್ಯರಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ಇದೇ ರೀತಿ ಸಾಕಷ್ಟು ಮಂದಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಿದ್ದಾರೆ. ಕೆಲ ಸದಸ್ಯರ ಮಾತಿಗೆ ಕಿಮ್ಮತ್ತು ನೀಡಿಲ್ಲವೆಂಬ ಕಾರಣಕ್ಕೆ ಈ ರೀತಿ ಮಾಡಿರುವುದು ಸರಿಯಲ್ಲ ಎಂದು ನಗರಸಭೆ ವಾರ್ಡ್‌ ಸದಸ್ಯ ನರಸಿಂಹಮೂರ್ತಿ ಅಸಮಾಧಾನ ವ್ಯಕ್ತಪಡಿಸಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, “ಪೌರಾಯುಕ್ತ ಮಂಜುನಾಥ್‌ ಅಧಿಕಾರ ವಹಿಸಿಕೊಂಡ ಬಳಿಕ ತೆರಿಗೆ ವಸೂಲಿ, ನಗರದ ಸ್ವಚ್ಛತೆ ಸೇರಿದಂತೆ ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದ್ದವು. ಹಲವು ವರ್ಷಗಳಿಂದ ಮುಂದೂಡಲಾಗಿರುವ ನಗರಸಭೆ ಮಳಿಗೆಗಳ ಹರಾಜು ಪ್ರಕ್ರಿಯೆ, ಮಳಿಗೆಗಳ ಬಾಡಿಗೆ ಹೆಚ್ಚಳ ಮಾಡಬೇಕು ಎಂಬುದು ನಮ್ಮ ಬೇಡಿಕೆಯಾಗಿತ್ತು. ಅದನ್ನ ಹಾಲಿ ಅಧ್ಯಕ್ಷರು ಮಾಡಿದ್ದರು. ಇದು ಕೆಲ ಸದಸ್ಯರಿಗೆ ಭಾರವಾಗಿದ್ದು, ಆಯುಕ್ತರ ನೇಮಕಾತಿ ರದ್ದುಗೊಳಿಸಲು ಕಾರಣವಾಗಿದೆ. ಇದೇ ರೀತಿ ಮುಂದುವರಿದರೆ ಯಾವುದೇ ಅಧಿಕಾರಿ ಬಂದರೂ ನಗರದ ಅಭಿವೃದ್ಧಿ ಎಂದಿಗೂ ಸಾಧ್ಯವಿಲ್ಲ” ಎಂದು 17ನೇ ವಾರ್ಡ್ ಸದಸ್ಯ ಎಸ್ ಎಂ ರಫೀಖ್‌ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದರು.

21ನೇ ವಾರ್ಡ್‌ ಸದಸ್ಯ ಅಫ್ಜಲ್‌ ಮಾತನಾಡಿ, “ಯಾರೊಂದಿಗೂ ಚರ್ಚೆ ಮಾಡದೇ ಪೌರಾಯುಕ್ತರ ನೇಮಕಾತಿ ರದ್ದಿಗೆ ಆದೇಶ ತಂದಿದ್ದಾರೆ. ನಗರ ಸ್ವಚ್ಛತೆ ಸೇರಿದಂತೆ ಶೇ.35ರಷ್ಟು ತೆರಿಗೆ ವಸೂಲಿ ಹೆಚ್ಚಾಗಿತ್ತು. ವೈಯಕ್ತಿಕ ಉದ್ದೇಶಕ್ಕಾಗಿ ಈ ರೀತಿ ಮಾಡಿರುವುದು ಸರಿಯಾದ ಕ್ರಮವಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದಸ್ಯ ನರಸಿಂಹಮೂರ್ತಿ ಧ್ವನಿಗೂಡಿಸಿದ್ದು, “ಈ ಹಿಂದೆ ಅಗತ್ಯ ಸೇವಾನುಭವ, ವಿದ್ಯಾರ್ಹತೆ ಹೊಂದಿಲ್ಲದ ಅಧಿಕಾರಿಗಳು, ಪರಿಸರ ಎಂಜಿನಿಯರ್‌ಗಳೂ ಸಹ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ. ವೈಯಕ್ತಿಕ ಕಾರಣಕ್ಕೆ ಈ ರೀತಿ ಮಾಡಿರುವುದು ಎಷ್ಟು ಸರಿ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ರಾಜ್ಯ ಮಟ್ಟದ ʼಮಹಿಳಾ ಚೈತನ್ಯ ದಿನʼ

ಹಿನ್ನೆಲೆ : ಆಯುಕ್ತರ ಹುದ್ದೆಗೆ ಬೇಕಿರುವ ಸೇವಾನುಭವ ಮತ್ತು ವಿದ್ಯಾರ್ಹತೆ ಇಲ್ಲದ ಕಾರಣ ಆಯುಕ್ತ ಎ ಎಸ್ ಮಂಜುನಾಥ್‌ ಅವರನ್ನು ಬದಲಾವಣೆ ಮಾಡುವಂತೆ 17ನೇ ವಾರ್ಡ್ ಸದಸ್ಯ ರಫೀಕ್ ಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರ ನಡೆಸಿರುವ ಹೈಕೋರ್ಟ್ ನಗರಸಭೆ ಆಯುಕ್ತ ಮಂಜುನಾಥ್ ಅವರ ನೇಮಕಾತಿಯನ್ನು ರದ್ದುಗೊಳಿಸಿ ಆದೇಶಿಸಿದೆ. ನಾಲ್ಕು ವಾರಗಳಲ್ಲಿ ಸೂಕ್ತ ಅಧಿಕಾರಿಯನ್ನು ನೇಮಿಸುವಂತೆ ಪೌರಾಡಳಿತ ನಿರ್ದೇಶನಾಲಯಕ್ಕೆ ಸೂಚಿಸಿದೆ.

ಸುದ್ದಿಗೋಷ್ಟಿಯಲ್ಲಿ 3ನೇ ವಾರ್ಡ್‌ ಸದಸ್ಯೆ ನೇತ್ರಾವತಿ, 27ನೇ ವಾರ್ಡ್‌ ಸದಸ್ಯೆ ಶಕೀಲಾ ಬಾನು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...