ಚಿಕ್ಕಬಳ್ಳಾಪುರ | ಎಂಎಲ್‌ಸಿ ಚುನಾವಣೆ ನೆಪ; ಸಾರ್ವಜನಿಕರ ಕಾರ್ಯಕ್ಕೆ ನಿರ್ಬಂಧಿಸಿದ ಅಧಿಕಾರಿಗಳು

Date:

ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕು ಕೇಂದ್ರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆ ನಡೆಯುತ್ತಿದ್ದು, ತಾಲೂಕು ಆಡಳಿತ ಯಂತ್ರಾಂಗವನ್ನು ಸ್ಥಗಿತಗೊಳಿಸಿ ಕಚೇರಿ ಪ್ರವೇಶ ದ್ವಾರಕ್ಕೆ ಪೊಲೀಸ್ ಬಂದೋಬಸ್ತ್ ಮಾಡಿ ಸಾರ್ವಜನಿಕ ಕೆಲಸಗಳಿಗೆ ಅಡ್ಡಪಡಿಸಿರುತ್ತಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸಾರ್ವಜನಿಕರ ಕೆಲಸಕ್ಕೆ ಅಡ್ಡಿಪಡಿಸಿದ್ದು, ಪ್ರಶ್ನಿಸಿದವರಿಗೆ ಅಧಿಕಾರಿಗಳು, ʼಜಿಲ್ಲಾಧಿಕಾರಿ ಆದೇಶ ಇದೆ. ಏನಾದರೂ ತುರ್ತು ಇದ್ದರೆ ನಮಗೆ ತಿಳಿಸಿʼ ಎನ್ನುತ್ತಿರುವುದಾಗಿ ತಿಳಿದುಬಂದಿದೆ.

ದಸಂಸ ಮುಖಂಡ ಜಿ ವಿ ಗಂಗಪ್ಪ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಗುಡಿಬಂಡೆ ಕ್ಷೇತ್ರದಲ್ಲಿ ಎಂಎಲ್‌ಸಿ ಚುನಾವಣೆ ನಡೆಯುತ್ತಿದೆ. ತಾಲೂಕು ಕಚೇರಿಯಲ್ಲೇ ಬೂತ್ ಅಳವಡಿಸಿದ್ದಾರೆ. ಈ ನೆಪವನ್ನೇ ಇಟ್ಟುಕೊಂಡು ತಾಲೂಕು ಆಡಳಿತ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿದೆ. ಕೇಳಲು ಹೋದರೆ ಚುನಾವಣೆ ಕರ್ತವ್ಯಕ್ಕೆ ಅಡ್ಡಿಯಾಗುತ್ತದೆ. ಇಲ್ಲಿಂದ ಹೋಗಿ, ಇಲ್ಲದಿದ್ದಲ್ಲಿ ಕಾನೂನು ಕ್ರಮ ಜರುಗಿಸುತ್ತೇವೆಂದು ಉಪ ತಹಶೀಲ್ದಾರ್‌ ಶೋಭಾ ಅವರು ಬೆದರಿಕೆಯೊಡ್ಡುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಎಂಎಲ್‌ಸಿ 1
ಮೂಕ ಪ್ರೇಕ್ಷಕರಾಗಿ ಚುನಾವಣ ಪ್ರಚಾರಕ್ಕಾಗಿ ಕುಳಿತಿರುವ ರಾಜಕೀಯ ಮುಖಂಡರು

“ಕಚೇರಿ ಕೆಲಸಕ್ಕಾಗಿ ಬಂದ ಸಾರ್ವಜನಿಕರನ್ನು ನಾಳೆ ಬನ್ನಿ ಎಂದು ವಾಪಸ್‌ ಕಳುಹಿಸಿದ್ದಾರೆ. ಆದರೆ ನುಲಿಗುಂಬ ಗ್ರಾಮದ ರೈತರು ಕೇಳಿದ ಪಹಣಿಗಳನ್ನು ಅವರಿಗೆ ಕಾನೂನು ಬಾಹಿರವಾಗಿ ತರಿಸಿ ಕೊಡಿಸಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಮುಟ್ಟಿನ ಅಂಧತ್ವ ಕಳೆದುಕೊಳ್ಳದ ಗೊಲ್ಲರಹಟ್ಟಿಗಳು; ಚಿಕ್ಕನಾಯಕನಹಳ್ಳಿಯಲ್ಲಿ ಮಗು, ಬಾಣಂತಿ ರಕ್ಷಣೆ

ಕಾನೂನು ಬಾಹಿರ ಸಾರ್ವಜನಿಕ ನಿರ್ಬಂಧತೆಯನ್ನು ಖಂಡಿಸಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಜಿ ವಿ ಗಂಗಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಬಳಿಕ ಆದ್ಯತೆಯ ಮೇರೆಗೆ ಸಾರ್ವಜನಿಕ ಸೇವೆಗೆ ಅನುಕೂಲ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...