ಚಿಕ್ಕಬಳ್ಳಾಪುರದಲ್ಲಿ ಮುಸ್ಲಿಂ ಯುವಕರು ಗೂಂಡಾಗಿರಿ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಚಿಕ್ಕಬಳ್ಳಾಪುರ ನಗರದ ಗೋಪಿಕಾ ಚಾಟ್ಸ್ ಬಳಿ ಮೇ 24ರಂದು ಮುಸ್ಲಿಂ ಯುವತಿ ಮತ್ತು ಹಿಂದೂ ಯುವಕ ಇಬ್ಬರೂ ಜೊತೆಯಾಗಿ ಹೋಟೆಲ್ಗೆ ತೆರಳಿದ್ದರು. ಈ ವೇಳೆ ಮುಸ್ಲಿಂ ಯುವಕರ ತಂಡವೊಂದು ಅವರ ಬಳಿ ಬಂದು ಯುವಕನೊಂದಿಗೆ ಗಲಾಟೆ ಮಾಡಿ, ಆತನ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಆ ವೇಳೆ, ಯುವತಿ ಅವರನ್ನು ತಡೆದಿದ್ದು, ಆಕೆಯಿಂದ ತಪ್ಪೊಪ್ಪಿಗೆ ಹೇಳಿಕೆ ಪಡೆದಿದ್ದಾರೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಒಡವೆ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ
ಗಲಾಟೆಗೆ ಸಂಬಂಧಿಸಿದಂತೆ ಈ ದಿನ.ಕಾಮ್ ಚಿಕ್ಕಬಳ್ಳಾಪುರ ಪೊಲೀಸ್ ಕಂಟ್ರೋಲ್ ರೂಮ್‌ಗೆ ಸಂಪರ್ಕಿಸಿದಾಗ “ಹಿಂದು ಯುವಕ ಮತ್ತು ಮುಸ್ಲಿಂ ಯುವತಿ ಇಬ್ಬರೂ ಚಾಟ್ಸ್ ಅಂಗಡಿಗೆ ಗೋಬಿ ತಿನ್ನಲು ಹೋಗಿದ್ದರು. ಈ ವೇಳೆ ಮುಸ್ಲಿಂ ಯುವಕರ ತಂಡವೊಂದು ಅವರ ಜೊತೆ ಗಲಾಟೆ ಮಾಡಿಕೊಂಡಿದ್ದು, ವಿಡಿಯೋ ಹರಿದಾಡುತ್ತಿದೆ. ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ” ಎಂದು ತಿಳಿಸಿದ್ದಾರೆ.




