ಚಿಕ್ಕಬಳ್ಳಾಪುರ | ಆನ್‌ಲೈನ್ ವಂಚನೆ; ₹23 ಲಕ್ಷ ಕಳೆದುಕೊಂಡ ಎಂಜಿನಿಯರ್ ಶ್ರೀಕಾಂತ್

Date:

ಉದ್ಯೋಗದ ಆಮಿಷವೊಡ್ಡಿ ಎಂಜಿನಿಯರ್ ಒಬ್ಬರಿಗೆ ₹23 ಲಕ್ಷ ಆನ್‌ಲೈನ್‌ ವಂಚನೆಯಾಗಿದ್ದು, ಈ ಕುರಿತು ಚಿಕ್ಕಬಳ್ಳಾಪುರ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರ ನಿವಾಸಿ ಶ್ರೀಕಾಂತ್ ಹಣ ಕಳೆದುಕೊಂಡವರು. ಶ್ರೀಕಾಂತ್‌ಗೆ ಟೆಲಿಗ್ರಾಂನಲ್ಲಿ ಜಾಬ್ ಆಫರ್ ಎಂಬ ಸಂದೇಶ ಬಂದಿತ್ತು. ಸಂದೇಶದಲ್ಲಿದ್ದ ಲಿಂಕ್ ಕ್ಲಿಕ್ ಮಾಡಿದ ನಂತರ CARS 24 ಎಂಬ ಗ್ರೂಪ್‌ಗೆ ಸೇರಿಸಿದ್ದರು. ಆನಂತರ ಉದ್ಯೋಗ ಆರಂಭ ಮಾಡಲು ಮೊದಲಿಗೆ ₹10,000 ಡೆಪಾಸಿಟ್ ಮಾಡುವಂತೆ ವಂಚಕರು ತಿಳಿಸಿದ್ದರು ಎನ್ನಲಾಗಿದೆ.

ಡೆಪಾಸಿಟ್ ಮಾಡಿದ ಬಳಿಕ ಕೆಲ ಟಾಸ್ಕ್ ಕೊಡಲಾಗಿತ್ತು. ಟಾಸ್ಕ್ ಮುಗಿಸಿದ ಬಳಿಕ ಶ್ರೀಕಾಂತ್ ಖಾತೆಗೆ ₹16,500 ಹಣ ಬಂದಿತ್ತು. ಇದನ್ನು ನಂಬಿದ್ದ ಶ್ರೀಕಾಂತ್ ಹಂತ ಹಂತವಾಗಿ ಸುಮಾರು ₹23 ಲಕ್ಷ ಹಣವನ್ನು ಜಮೆ ಮಾಡಿದ್ದರೆಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ರೈತ ಹೋರಾಟಕ್ಕೆ ಯಾವುದೇ ಪಕ್ಷ ತಲೆಬಾಗಲೇಬೇಕು: ಶಾಸಕ ಎಂ ಆರ್ ಪಾಟೀಲ್

ಬಳಿಕ ಮತ್ತೆ ₹13 ಲಕ್ಷ ಹಣವನ್ನು ಡೆಪಾಸಿಟ್ ಮಾಡಿದರೆ ಮಾತ್ರ ನಿಮಗೆ ಹಣವನ್ನು ಹಾಕಲಾಗುತ್ತದೆ ಎಂದು ತಿಳಿಸಿದ್ದರು. ಇದರಿಂದ ಎಚ್ಚೆತ್ತ ಶ್ರೀಕಾಂತ್ ತಾವು ಮೋಸ ಹೋಗಿರುವುದನ್ನು ಮನಗಂಡು ಸೆನ್ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...