ಚಿಕ್ಕಬಳ್ಳಾಪುರ | ಲಯನ್ಸ್ ಕ್ಲಬ್‌ ವತಿಯಿಂದ ಶ್ರೀನಿವಾಸ್‌ಮೂರ್ತಿಗೆ ಆಚಾರ್ಯಶ್ರೇಷ್ಠ ಪ್ರಶಸ್ತಿ

Date:

ಚಿಕ್ಕಬಳ್ಳಾಪುರ ಜಿಲ್ಲೆಯ ಕಂದವಾರ ಗ್ರಾಮದ ನಿವಾಸಿ ನಿವೃತ್ತ ಅಭಿಯಂತರ ಡಿ ಟಿ ಶ್ರೀನಿವಾಸಮೂರ್ತಿ ಇಂಜಿನಿಯರ್ಸ್ ಡೇ ಅಂಗವಾಗಿ ಮುದ್ದೇನಹಳ್ಳಿ ಗ್ರಾಮದಲ್ಲಿ ಲಯನ್ಸ್ ಕ್ಲಬ್ ಸಂಸ್ಥೆ ಜಿಲ್ಲಾ ಘಟಕವು ನೀಡುತ್ತಿರುವ ಆಚಾರ್ಯಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತಾಲೂಕಿನ ಮುದ್ದೇನಹಳ್ಳಿಯಲ್ಲಿ ಇಂಜಿನಿಯರ್ಸ್ ಡೇ ಅಂಗವಾಗಿ ಕಳೆದ 20 ವರ್ಷಗಳಿಂದ ಲಯನ್ಸ್ ಸಂಸ್ಥೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ನೀಡುತ್ತಿರುವ ಆಚಾರ್ಯಶ್ರೇಷ್ಠ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಇಂಜನಿಯರ್ ಆಗಿ ಅನುಪಮ ಸೇವೆ ಸಲ್ಲಿಸಿರುವ ಶ್ರೀನಿವಾಸ್, 2025ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪಡೆದಿರುವ ನಂದಿ ಕ್ಲಸ್ಟರ್ ಈರೇನಹಳ್ಳಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಪ್ರೇಮಾವತಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಶಸ್ತಿ ಪುರಸ್ಕೃತ ನಿವೃತ್ತ ಅಭಿಯಂತರ ಡಿ.ಟಿ.ಶ್ರೀನಿವಾಸಮೂರ್ತಿ ಮಾತನಾಡಿ, “ಯಾವುದೇ ಇಂಜಿನಿಯರ್ ವೃತ್ತಿಯಲ್ಲಿರುವವರು ಮಾಧ್ಯಮದ ಕಣ್ಣಿಗೆ, ಸಮಾಜ ಕಣ್ಣಿಗೆ ಭೌತಿಕವಾಗಿ ಕಾಣುವುದಿಲ್ಲ.ಆದರೆ ನಾವು ನಿರ್ಮಾಣ ಮಾಡಿರುವ ಕೆಲಸಗಳ ಮೂಲಕ ನಮ್ಮ ಹೆಸರು ಚಿರಸ್ಥಾಯಿಯಾಗಿರಲಿದೆ. ಮೂಲತಃ ಇಂಜಿನಿಯರ್ ಆದ ನಾನು ರಾಷ್ಟ್ರೀಯ ಹೆದ್ದಾರಿ ಅಭಿಯಂತರ, ಕೆ.ಎನ್.ಆರ್ ಕನ್ಸ್ಟ್ರಕ್ಷನ್ ಸೇರಿ ಇಂಜಿನಿಯರ್ ಆಗಿ ಹತ್ತಾರು ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತನಾಗಿದ್ದೇನೆ. ನನ್ನ ವೃತ್ತಿಯಲ್ಲಿ ಹತ್ತು ಜನಕ್ಕೆ ಉಪಯೋಗವಾಗುವ ಕೆಲಸ ಮಾಡಿರುವ ತೃಪ್ತಿ ನನಗಿದೆ. ನನ್ನ ಸೇವೆಯನ್ನು ಗುರುತಿಸಿ ಚಿಕ್ಕಬಳ್ಳಾಪುರ ಲಯನ್ಸ್ ಸಂಸ್ಥೆ ವಿಶ್ವೇಶ್ವರಯ್ಯ ಅವರ ಜನ್ಮದಿನದಂದು ಆಚಾರ್ಯಶ್ರೇಷ್ಠ ಪ್ರಶಸ್ತಿ ಪ್ರಧಾನ ಮಾಡಿ ನನ್ನ ಜವಾಬ್ದಾರಿಯನ್ನು ಹೆಚ್ಚುವಂತೆ ಮಾಡಿದೆ. ಇದಕ್ಕಾಗಿ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಚಿಕ್ಕಬಳ್ಳಾಪುರ | ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ಕಾರ್ಯದಿಂದ ವಿನಾಯಿತಿ ನೀಡಲು ಶಿಕ್ಷಕರ ಮನವಿ

ಲಯನ್ ಸಂಸ್ಥೆಯ ಕಾರ್ಯದರ್ಶಿ ಲಕ್ಷ್ಮಣ್ ಮಾತನಾಡಿ‌, “ಲಯನ್ಸ್ ಸಂಸ್ಥೆ ಸೇವಾಕಾರ್ಯಗಳಿಗೆ ಹೆಸರಾದ ಸಂಸ್ಥೆಯಾಗಿದೆ. ವಿಶ್ವದಾದ್ಯoತ ಲಯನ್ಸ್ನ ಶಾಖೆಗಳಿದ್ದು ಕಾಲಕಾಲಕ್ಕೆ ಸಮಾಜಕ್ಕೆ ಬೇಕಾದ ಸೇವಾಕಾರ್ಯಗಳನ್ನು ಮಾಡುತ್ತಾ ಜವಾಬ್ದಾರಿಯುತ ನಾಗರೀಕರನ್ನು ಕಟ್ಟುವಲ್ಲಿ ಮುನ್ನಡೆದಿದ್ದೇವೆ. ಕಳೆದ ೨೦ ವರ್ಷಗಳಿಂದ ಚಿಕ್ಕಬಳ್ಳಾಪುರ ಘಟಕವು ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದು ಪ್ರತಿವರ್ಷ ಇಂಜನಿಯರ್ಸ್ ಡೇ ಅಂಗವಾಗಿ ವಿವಿಧ ಕ್ಷೇತ್ರದ ಗಣ್ಯರನ್ನು ಆರಿಸಿ ಅವರಿಗೆ ಆಚಾರ್ಯ ಶ್ರೇಷ್ಟ ಪ್ರಶಸ್ತಿ ಪ್ರದಾನ ಮಾಡುತ್ತಾ ಬರಲಾಗಿದೆ” ಎಂದರು.

ಕಾರ್ಯಕ್ರಮದಲ್ಲಿ ಡಾ.ಚಂದ್ರಪ್ಪ, ಡಾ.ಭಾರ್ಗವಿ ಸುನಿಲ್, ಡಾ.ಲಕ್ಷಿ ನಾರಯಣರೆಡ್ಡಿ, ಡಾ.ಪಿ.ಸಿ.ಲಕ್ಷ್ಮಿ ನಾರಾಯಣ, ಪ್ರೊ.ಮಲ್ಲಣ್ಣ, ಡಾ.ಜಿ.ವಿ.ಜ್ಞಾನೇಂದ್ರ ರೆಡ್ಡಿ, ಭಾರತಿ ಶ್ರೀನಿವಾಸ್, ನೂತನ, ಡಾ.ರಘು, ಚಿಕ್ಕಬಳ್ಳಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಚಂದ್ರಣ್ಣ, ಮಾಜಿ ಅಧ್ಯಕ್ಷ ಬ್ರಹ್ಮಾಚಾರಿ, ಖಜಾಂಚಿ ಲಯನ್ ರವೀಂದ್ರ, ಲಯನ್ ಸುನಿಲ್ ಮತ್ತು ಇತರರು ಇದ್ದರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...