ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ರಾಜ್ಯಾದ್ಯಂತ ನಡೆಸಲು ಯೋಜಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಿಂದ ವಿನಾಯಿತಿ ನೀಡಬೇಕು ಎಂದು ಕೆಲ ಶಿಕ್ಷಕರು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.
2025ನೇ ಸಾಲಿಗೆ ನಡೆಯುತ್ತಿರುವ ಈ ಸಮೀಕ್ಷೆ ಕಾರ್ಯಕ್ಕೆ ಜಿಲ್ಲೆಯ ಶಿಕ್ಷಕರನ್ನು ನಿಯೋಜಿಸಿದ್ದು, ಈ ಅವಧಿಯಲ್ಲಿ ದಸರಾ ಹಾಗೂ ನವರಾತ್ರಿ ಹಬ್ಬಗಳಿರುವುದರಿಂದ ಒಂದು ವಾರ ಮುಂದೂಡಲು ಮನವಿ ಮಾಡಲಾಗಿದೆ ಹಾಗೂ ಈ ಪ್ರಕರಣಗಳಿಂದ ಶಿಕ್ಷಕರನ್ನು ಗಣತಿ ಕಾರ್ಯದಿಂದ ವಿನಾಯಿತಿ ನೀಡಬೇಕೆಂದು ಮನವಿ ಪತ್ರದಲ್ಲಿ ವಿವರಿಸಲಾಗಿದೆ.
ಗರ್ಭಿಣಿ ಹಾಗೂ ಬಾಣಂತಿ ಶಿಕ್ಷಕಿಯರಿಗೆ, ಅಂಗವಿಕಲ ಶಿಕ್ಷಕ-ಶಿಕ್ಷಕಿಯರಿಗೆ, ತೀವ್ರತರ ಕಾಯಿಲೆಯಿಂದ ಬಳಲುತ್ತಿರುವ ಶಿಕ್ಷಕ ಶಿಕ್ಷಕಿಯರಿಗೆ, ವಯೋನಿವೃತ್ತಿ ಅಂಚಿನಲ್ಲಿರುವ ಶಿಕ್ಷಕ-ಶಿಕ್ಷಕಿಯರಿಗೆ, ಶಿಕ್ಷಕರ ಹಿತದೃಷ್ಟಿಯಿಂದ ಗಣತಿ ಕಾರ್ಯನಿರ್ವಹಿಸುವ ಶಿಕ್ಷಕರಿಗೆ ಗೌರವಧನ ಹಾಗೂ ಗಳಿಕೆ ರಜೆಯನ್ನು ಮಂಜೂರು ಮಾಡಲು ಮನವಿ ಪತ್ರದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರ | ಸರ್ಕಾರಿ ನೌಕರರು ತಮ್ಮ ಹುದ್ದೆಯ ಪಾವಿತ್ರ್ಯತೆಯನ್ನು ಕಾಪಾಡಬೇಕು: ಷಡಕ್ಷರಿ
ಈ ಸಂದರ್ಭದಲ್ಲಿ ಅಧ್ಯಕ್ಷ ಎ ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಆರ್ ಅಶೋಕ್ ಕುಮಾರ್, ಕೋಶಾಧ್ಯಕ್ಷ ಪಿ ಪಿಳ್ಳನ್ನ ಸೇರಿದಂತೆ ಮತ್ತಿತರರು ಇದ್ದರು.





