ಚಿಕ್ಕಬಳ್ಳಾಪುರ | ನೀರಿನ ಗ್ಯಾರಂಟಿ ಕೊಡುವವರಿಗೆ ಮತ ನೀಡಿ: ಆಂಜನೇಯ ರೆಡ್ಡಿ

Date:

ಸುಮಾರು 15 ವರ್ಷಗಳಿಂದ ರಾಜಕೀಯ ಪಕ್ಷಗಳು, ರಾಜಕಾರಣಿಗಳಿಂದ ಭರವಸೆಗಳು ಬಿಟ್ಟರೆ ಅಗತ್ಯವಿರುವ ನೀರಾವರಿ ಸೌಲಭ್ಯ ದಕ್ಕಿಲ್ಲ. ಹಾಗಾಗಿ ನೀರಿನ ಗ್ಯಾರಂಟಿ ಕೊಡುವ ವ್ಯಕ್ತಿಗೆ ಮತ ನೀಡಬೇಕು ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆಂಜನೇಯ ರೆಡ್ಡಿ ಕರೆಕೊಟ್ಟರು.

ಚಿಕ್ಕಬಳ್ಳಾಪುರ ನಗರದ ಪತ್ರಿಕಾ ಭವನದಲ್ಲಿ ಬುಧವಾರ ಆಯೋಜಿಸಿದ್ದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, “2009ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳು ಜಲಮೂಲಗಳ ಸಂರಕ್ಷಣೆ, ರೈತರ ಹೊಲ ಗದ್ದೆಗಳಿಗೆ ನೀರು ಕೊಡುವ ಬಿಟ್ಟಿ ಭರವಸೆಗಳನ್ನು ನೀಡಿದ್ದರು. ಆದರೆ ಇವತ್ತಿನವರೆಗೆ ಯಾವುದೇ ಪರಿಹಾರ ಕಂಡುಕೊಳ್ಳುವ, ಪರಿಹಾರ ಕೊಡುವ ಕೆಲಸವಾಗಲಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಕ್ಷೇತ್ರದ ಪ್ರತಿಯೊಬ್ಬರ ನಾಗರಿಕನ ಮೇಲೂ ಈ ಜವಾಬ್ದಾರಿ ಇದೆ. ಅಭ್ಯರ್ಥಿಗಳು ಮತ ಕೇಳಲು ಬಂದಾಗ ನೀರಾವರಿ ಕುರಿತು ಗಟ್ಟಿಯಾಗಿ ಪ್ರಶ್ನೆ ಮಾಡಿ, ಖಚಿತ ಭರವಸೆಯನ್ನು ಪಡೆಯಿರಿ. ವಿಫಲರಾದಲ್ಲಿ ಮುಂದಿನ ಚುನಾವಣೆಯಲ್ಲಿ ಬರಬಾರದು ಎಂದು ಹೇಳಬೇಕು. ಯಾರೇ ಮತ ಕೇಳಲು ಬಂದಾಗ ಕತ್ತಿನ ಪಟ್ಟಿ ಹಿಡಿದು ಕೇಳಿ” ಎಂದು ಕರೆಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವೈಜ್ಞಾನಿಕ ನೀರಾವರಿ ಯೋಜನೆಗಳಿಂದ ಹಣ ವ್ಯಯವಾಯಿತೇ ವಿನಃ ಯಾವುದೇ ಉಪಯೋಗವಾಗಲಿಲ್ಲ. ಬಾಣಲೆಯಿಂದ ಬೆಂಕಿಗೆ ಬಿದ್ದ ಪರಿಸ್ಥಿತಿ ನಮ್ಮ ಜಿಲ್ಲೆಗೆ ಬಂದಿದೆ” ಎಂದು ಬೇಸರಗೊಂಡರು.

“ಯುರೇನಿಯಂ, ಆರ್ಸೆನಿಕ್‌ನಂತಹ ವಿಷಕಾರಿ ನೀರು ನಮ್ಮ ಜಿಲ್ಲೆಗೆ ಪೂರೈಕೆಯಾಗುತ್ತಿದೆ. ಇದರಿಂದ ಪ್ಯಾರಾಲಿಸಿಸ್, ಮಿದುಳಿನ ಸಮಸ್ಯೆ ಇತ್ಯಾದಿ ಸಮಸ್ಯೆಗಳು ಉಲ್ಬಣವಾಗುತ್ತಿವೆ. ಆದ್ದರಿಂದ, ಕೇಂದ್ರ ಸರ್ಕಾರ ಕೂಡಲೇ ಗಂಭೀರ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ಫಲವತ್ತಾದ ಭೂಮಿ ಇರುವವರಿಗೆ ನೀರಿಲ್ಲದೆ ಲಕ್ಷಾಂತರ ಎಕರೆ ಭೂಮಿ ಪಾಳುಬಿದ್ದಿದೆ. ಆರ್ಥಿಕವಾಗಿ ಸುಧಾರಣೆ ಹೊಂದಿರುವ ರೈತರು ಮಾತ್ರ ಕೊಳವೆ ಬಾವಿ ಮೊರೆಹೋಗುತ್ತಾರೆ. ಆದರೆ, ರೈತರಿಗೆ ಶಾಶ್ವತ ನೀರಾವರಿ ಭದ್ರತೆ ಇಲ್ಲ. ಕುಡಿಯಲು ಯೋಗ್ಯವಿಲ್ಲ, ಕೃಷಿಗೂ ಯೋಗ್ಯವಿಲ್ಲ” ಎಂದು ಕಳವಳ ವ್ಯಕ್ತಪಡಿಸಿದರು.

“ಯುರೇನಿಯಂ, ಆರ್ಸೆನಿಕ್ ಯುಕ್ತ ನೀರಿನಿಂದ ಮಲ್ಟಿ ಆರ್ಗನ್ ಡ್ಯಾಮೇಜ್ ಆಗುತ್ತದೆ ಎಂದು ಬೆಂಗಳೂರಿನ ಎಂ2ಎಂ ಸಂಸ್ಥೆ ಸರ್ಕಾರಕ್ಕೆ ವರದಿ ನೀಡಿದೆ. ಆದರೂ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ” ಎಂದರು.

ಕೇಂದ್ರ ಸರ್ಕಾರದ Drought Manual ಅನುಸಾರ ಬರ ಪರಿಹಾರಕ್ಕೆ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದರು. ಆದರೆ ನೀರಾವರಿ ಯೋಜನೆಯ ಸಿವೆಜ್ ಮ್ಯಾನುವಲ್ ಅನುಸಾರ ಪರಿಹಾರ ಶಾಶ್ವತ ನೀರಾವರಿ ಯೋಜನೆ ತರಲು ಏಕೆ ಸಾಧ್ಯವಿಲ್ಲ. ಸರ್ಕಾರದ ಈ ರೀತಿಯ ವರ್ತನೆ ಜಿಲ್ಲೆಗೆ ಆಗಿರುವ ಘೋರ ಅನ್ಯಾಯ. CPHEEO(Central Public Health Engineering Organisation) Guideline ಪ್ರಕಾರ ಪರಿಹಾರ ಕೊಡಿ” ಎಂದು ಒತ್ತಾಯಿಸಿದರು.

“Guideline ಪ್ರಕಾರ ಪರಿಹಾರ ಕೊಡಲೇಬೇಕು. ನೀರಿನ ಸಮಸ್ಯೆಗೆ ಕಾಲಮಿತಿ ಇಟ್ಟುಕೊಂಡು ಜಿಲ್ಲೆಗೆ ಸೂಕ್ತ ಸಮಯಕ್ಕೆ ಕೃಷಿ ಮತ್ತು ಕುಡಿಯುವ ನೀರಾವರಿ ಯೋಜನೆ ತರಬೇಕು. ಇದರಿಂದ ನಮ್ಮ ಜಿಲ್ಲೆಗಳ ಉಳಿವು ಸಾಧ್ಯ. ಪಕ್ಕದ ಜಿಲ್ಲೆಗೆ ಉತ್ತಮ ಗುಣಮಟ್ಟದ ತರಕಾರಿ ರಫ್ತು ಮಾಡಲು ಸಾಧ್ಯ” ಎಂದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು: ಗೀತಾ ಶಿವರಾಜ್‌ಕುಮಾರ್

ನನ್ನ ಮತ ನೀರಿಗೆ :‌ “ಜಿಲ್ಲೆಯ ಅಳಿವು ಉಳಿವು ನೀರಿನ ಮೇಲಿದೆ ಎಂಬುದನ್ನು ಎಲ್ಲ ಮತದಾರರು, ಮತದಾರ್ತಿಯರು ಅರಿತು ಪ್ರಜ್ಞಾವಂತರಾಗಿ, ಬದ್ಧತೆಯಿಂದ ಮತಚಲಾವಣೆಗೆ ಮುಂದಾಗಬೇಕು” ಎಂದು ಕರೆ ನೀಡಿದರು.

ಪತ್ರಿಕಾಗೋಷ್ಟಿಯಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಮಮತಾ, ಹರೀಶ್, ಶ್ರೀರಾಮೆಗೌಡ, ನಾರಾಯಣ ಸ್ವಾಮಿ, ಕೃಷ್ಣಪ್ಪ, ಸುಷ್ಮಾ ಶ್ರೀನಿವಾಸ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...