ಚಿಕ್ಕಬಳ್ಳಾಪುರ | ಶಾಶ್ವತ ನೀರಾವರಿ ಕಲ್ಪಿಸುವ ಕನಸು ಕಂಡಿದ್ದ ಹೋರಾಟಗಾರ ಡಾ. ಮಧುಸೀತಪ್ಪ ನಿಧನ

Date:

ಬಯಲುಸೀಮೆಯ ನೀರಾವರಿ ಹೋರಾಟಗಾರ, ಚಿಂತಕ, ವಿದೇಶದಲ್ಲಿ ಅತ್ಯುನ್ನತ ವೈದ್ಯರಾಗಿದ್ದರೂ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಕಲ್ಪಿಸಿಕೊಡುವ ಕನಸು ಕಂಡಿದ್ದ ಸಹೃದಯಿ ಡಾ. ಮಧುಸೀತಪ್ಪ ನಿಧನ ಹೊಂದಿದ್ದು, ಅವರ ಅಗಲಿಕೆ ಹೋರಾಟ ರಂಗಕ್ಕೆ ಬರಿಲಾಗದ ನಷ್ಟವಾಗಿದೆ.

ನೀರಾವರಿ ಹೋರಾಟಕ್ಕೆ ಡಾಕ್ಯುಮೆಂಟರಿ, ಜಾನಪದ ಹಾಡುಗಳನ್ನು ನಿರ್ಮಿಸಿ ತಮ್ಮದೇ ಕಾಣಿಕೆ ನೀಡಿದ್ದ ಮಧುಸೀತಪ್ಪನವರ ಅಕಾಲಿಕ ಮರಣ ವಿಷಾದಕರ.

ಕರ್ನಾಟಕ ನೀರಾವರಿ ವೇದಿಕೆ ಅಧ್ಯಕ್ಷ ಹಾಗೂ ಶಾಶ್ವತ ನೀರಾವರಿ ಹೋರಾಟ ಸಮಿತಿ ಮುಖಂಡ ಡಾ.ಮಧು ಸೀತಪ್ಪ(59) ಚೇಳೂರು ತಾಲೂಕಿನ ಶಿವಪುರ ಬಳಿಯ ತಮ್ಮ ತೋಟದಲ್ಲಿ ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರ ಮೃತದೇಹವನ್ನು ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಲಂಡನ್ ನಗರದಲ್ಲಿರುವ ಪತ್ನಿ ಮತ್ತು ಮಗ ಆಗಮಿಸಿದ ನಂತರ ಸ್ಥಳ ನಿಗದಿಪಡಿಸಿದ ಬಳಿಕ ಮೃತರ ಅಂತ್ಯಸಂಸ್ಕಾರ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೈದ್ಯರಾದ ಮಧು ಸೀತಪ್ಪ ಕೆಲಕಾಲ ಲಂಡನ್‌ನಲ್ಲಿಯೂ ಕೆಲಸ ಮಾಡಿದ್ದರು. 2023ರ ವಿಧಾನ‌ಸಭಾ ಚುನಾವಣೆಯಲ್ಲಿ ಎಎಪಿಯಿಂದ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.

ಈ ಹಿಂದೆ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಇವರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಲು ಯತ್ನಿಸಿ ವಿಫಲರಾಗಿದ್ದರು. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ನೀರಾವರಿ ಹೋರಾಟಗಳಲ್ಲಿಯೂ ತೊಡಗಿದ್ದರು. ಅವರ ಪತ್ನಿ ಮತ್ತು ಪುತ್ರ ಲಂಡನ್‌ನಲ್ಲಿದ್ದು ಅವರು ಬಂದ ನಂತರ ಅಂತ್ಯಕ್ರಿಯೆ ನಡೆಯಲಿದೆ.

ಸಿಪಿಐಎಂ ಪಕ್ಷದ ಮುಖಂಡ ಚನ್ನರಾಯಪ್ಪ ಮಾತನಾಡಿ, “ಚಿಕ್ಕಬಳ್ಳಾಪುರ ಜಿಲ್ಲೆಯ ಅವಿಭಜಿತ ಕೋಲಾರ, ತುಮಕೂರು, ಚಿತ್ರದುರ್ಗ, ರಾಮನಗರ ಜಿಲ್ಲೆಗಳು ವರ್ಷಗಳನಂತರ ನೀರಿಲ್ಲದೆ ಬರಡಾಗುತ್ತವೆ. ಕುಡಿಯುವ ನೀರಿನ ಹಾಹಾಕಾರ ಉಂಟಾಗುತ್ತಿದ್ದಂಹ ದಾರುಣ ಪರಿಸ್ಥಿತಿ ತಪ್ಪಿಸಲು ಪೂರಕ ಯೋಜನೆಗಳ ಅನುಷ್ಠಾನ ಗಳಿಸಿ ಅದರ ಬಗ್ಗೆ ಸಾಕಷ್ಟು ಕೆಲಸ ಮಾಡಿದವರು ಸಮಾಜಮುಖಿ ಪರಮಶಿವಯ್ಯನವರು. ಬಾಲ್ಯದಿಂದಲೂ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಯ ಕಡೆ ತುಡಿತ ಹೊಂದಿದ್ದರು. ಪರಮಶಿವಯ್ಯನವರ ದೃಷ್ಟಿಕೋನ ಹಾಗೂ ಚಿಂತನೆಗಳ ಬಗ್ಗೆ ಆಕರ್ಷಿತರಾದ ಡಾ. ಮಧು ಸೀತಪ್ಪ ಅವರು ಪರಮಶಿವಯ್ಯನವರನ್ನು ಭೇಟಿಯಾಗಿ ಅವರೊಂದಿಗೆ ಚರ್ಚಿಸಿ ಅಗತ್ಯ ಕೆಲಸಗಳತ್ತ ಗಮನ ಹರಿಸಿದರು” ಎಂದು ಹೇಳಿದರು.

ಕೋಲಾರ ಜಿಲ್ಲೆಯ ಚಿಲಕನೆಪುರ ಗ್ರಾಮದಲ್ಲಿ ಜನಿಸಿದ ಡಾ.ಮಧು ಅವರ ತಂದೆ ಸೀತಪ್ಪ ಸ್ವಾತಂತ್ರ್ಯ ಹೋರಾಟಗಾರರು. ತಾಯಿ ಶಾರದ ಸೀತಪ್ಪ ವಿದ್ಯಾ ಸಂಸ್ಥೆಯಲ್ಲಿ ತಮ್ಮ ಸೇವೆ ಸಲ್ಲಿಸಿದ್ದಾರೆ. ಮಧು ತಮ್ಮ ಆರಂಭಿಕ ಶಿಕ್ಷಣವನ್ನು ಕೋಲಾರದ ಹೈಸ್ಕೂಲ್‌ನಲ್ಲಿ ಪೂರೈಸಿದರು. ಆ ಬಳಿಕ ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಪಿಯುಸಿ ಮತ್ತು ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪೂರೈಸಿದರು.

ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ಆರು ತಿಂಗಳ ಹಿಂದೆಯೇ ಚಾಲನೆ ಸಿಕ್ಕರೂ ಆಮೆಗತಿಯಲ್ಲಿ ಸಾಗುತ್ತಿರುವ ಚೇಳೂರು ರಸ್ತೆ ಕಾಮಗಾರಿ!

ಮಧುಸೀತಪ್ಪನವರ ಹಿತೈಷಿಗಳು, “ಮಧು ಅವರಿಗೆ ಸದ್ಗತಿ ಪ್ರಾಪ್ತಿಯಾಗಲೆಂದು ಪ್ರಾರ್ಥಿಸುತ್ತೇವೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಶ್ರೀಯುತರ ಅಗಲಿಕೆಯ ನೋವು ಭರಿಸುವ ಶಕ್ತಿ ಅವರ ಕುಟುಂಬಕ್ಕೆ, ಅಪಾರ ಬಂಧು ಬಳಗಕ್ಕೆ ಭಗವಂತ ದಯಪಾಲಿಸಲಿ” ಎಂದು ಪ್ರಾರ್ಥನೆ ಮಾಡಿದರು.

“ಡಾ. ಮಧು ಸೀತಪ್ಪ ವಿಧಿವಶರಾಗಿದ್ದಾರೆ, ಬಯಲುಸೀಮೆಗೆ ಶಾಶ್ವತ ನೀರಾವರಿ ಹರಿಸಬೇಕೆಂಬ ಕನಸುಕಂಡಿದ್ದ ಗೆಳೆಯನ ಅಕಾಲಿಕ ಮರಣದಿಂದ ತೀವ್ರ ಆಘಾತವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇವೆ” ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...