ಚಿಕ್ಕಬಳ್ಳಾಪುರ | ಗ್ರಾಮದೇವತೆ ಹೊತ್ತ ಮಹಿಳೆಯರು; ಮೆರವಣಿಗೆಯಲ್ಲಿ ಸ್ತ್ರೀಶಕ್ತಿ ಪ್ರದರ್ಶನ

Date:

ಇತಿಹಾಸದಲ್ಲಿ ಇದೇ ಮೊದಲಿಗೆ ಮಹಿಳೆಯರು ದೇವರನ್ನು ಹೊತ್ತು ಸಾಗಿದ ವಿಶಿಷ್ಟ ಪ್ರಸಂಗ ಚಿಕ್ಕಬಳ್ಳಾಪುರ ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ನಡೆದಿದ್ದು, ಗ್ರಾಮದೇವತೆ ಹೊತ್ತ ಮಹಿಳೆಯರು ಸ್ತ್ರೀಶಕ್ತಿ ಪ್ರದರ್ಶನ ಮಾಡಿದ್ದಾರೆ.

ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಪುರಾತನ ಕಾಲದಿಂದಲೂ ಮಹೇಶ್ವರಮ್ಮ, ಗಂಗಮ್ಮ, ಸಪ್ಲಮ್ಮ, ಕಾಳಮ್ಮ ಎಂಬ ಹೆಸರಿನ ಗ್ರಾಮದೇವತೆಗಳ ಮೆರವಣಿಗೆ ನಡೆದುಕೊಂಡು ಬರುತ್ತಿದ್ದು, ಎಂದಿನಂತೆ ಪುರುಷರೇ ದೇವರನ್ನು ಹೊರುವುದು ವಾಡಿಕೆ. ಆದರೆ, ಈ ಬಾರಿ ಗ್ರಾಮದ ಮಹಿಳೆಯರು ತಾವೇ ದೇವರು ಹೋರುತ್ತೇವೆಂದು ಉತ್ಸಾಹ ತೋರಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ದೇವರನ್ನು ಹೊರಲು ಅವಕಾಶ ಕೊಟ್ಟಿದ್ದಾರೆ.

ಮಣಬಾರದ ದೇವರುಗಳನ್ನು ಹೊರಲು ಪುರುಷರು ಹಿಂದೇಟು ಹಾಕುವ ಕಾಲಘಟ್ಟದಲ್ಲಿ ಹೆಣ್ಣುಮಕ್ಕಳೇ ದೇವರನ್ನು ಹೊತ್ತಿರುವುದು ಇದೇ ಮೊದಲು ಎಂಬಂತಾಗಿದೆ. ಮುಷ್ಟೂರು ಗ್ರಾಮದ ಗೃಹಿಣಿ ತ್ರಿವೇಣಿ ಮತ್ತು ಯುವತಿ ಮಾನಸ ದೇವರನ್ನು ಹೊತ್ತ ಹೆಂಗಳೆಯರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಜಿಲ್ಲಾಡಳಿತ, ಜನಪ್ರತಿನಿಧಿಗಳ ನಿರ್ಲಕ್ಷ್ಯ; ಆತಂಕದ ಬದುಕು ದೂಡುತ್ತಿರುವ ಸಾವಾಯಿಪಾಳ್ಯ ನಿವಾಸಿಗಳು

ಪುರುಷ ಪ್ರಧಾನ ಸಮಾಜದಲ್ಲಿ ಸ್ತ್ರೀಯರಿಗೆ ದೇವರು ಹೊರಲು ಅವಕಾಶ ಕೊಟ್ಟಿರುವುದು ಸ್ತ್ರೀ ಸಮಾನತೆಗೊಂದು ಹೊಸ ಉದಾಹರಣೆಯಾಗಿದೆ. ಇತಿಹಾಸದಲ್ಲಿ ಇದೇ ಮೊದಲಿಗೆ ಮಹಿಳೆಯರು ದೇವರನ್ನು ಹೊತ್ತು ಮೆರವಣಿಗೆ ಮಾಡಿದ್ದಕ್ಕೆ ಗ್ರಾಮಸ್ಥರೂ ಸೇರಿದಂತೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...