ಚಿಕ್ಕಮಗಳೂರು | ಅವಾಚ್ಯ ನಿಂದನೆ ಆರೋಪ: ಸರ್ಕಾರಿ ವೈದ್ಯರಿಗೆ ಹಲ್ಲೆ; ಒಪಿಡಿ ಬಂದ್, ಪ್ರತಿಭಟನೆ

Date:

ರೋಗಿಯನ್ನು ನೋಡಲೆಂದು ಬಂದಿದ್ದ ವೇಳೆ ವೈದ್ಯರು ಅವಾಚ್ಯವಾಗಿ ನಿಂದಿಸಿದ್ದಾರೆಂದು ಆಕ್ರೋಶಗೊಂಡ ಮಹಿಳೆಯರು, ಕೊರಳಪಟ್ಟಿ ಹಿಡಿದು ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ನಗರದ ಅರಳುಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಮೂಳೆ ತಜ್ಞರಾಗಿರುವ ಡಾ. ವೆಂಕಟೇಶ್ ಎಂಬುವವರ ಮೇಲೆ ಆಸ್ಪತ್ರೆಯಲ್ಲೇ ಮಹಿಳೆಯೊಬ್ಬರು ಏಕಾಏಕಿ ಹಲ್ಲೆ ಮಾಡಿದ್ದಾರೆ. ವೈದ್ಯರ ಕೊರಳ ಪಟ್ಟಿ ಹಿಡಿದು ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಘಟನೆಯ ವಿಡಿಯೋವನ್ನು ಸ್ಥಳದಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ.

ವೈದ್ಯರ ಮೇಲೆ ಹಲ್ಲೆ ನಡೆದ ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾಸ್ಪತ್ರೆಯ ಒಪಿಡಿ ಬಂದ್ ಮಾಡಿ ಆಸ್ಪತ್ರೆಯ ವೈದ್ಯರು, ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದು, ಹಲ್ಲೆಗೈದವರ ವಿರುದ್ಧ ಪ್ರಕರ ದಾಖಲಿಸುವಂತೆ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಗೆ ಚಿಕ್ಕಮಗಳೂರು ನಗರ ಡಿವೈಎಸ್‌ಪಿ ಹಾಗೂ ಎಸ್‌ಐ ಭೇಟಿ ನೀಡಿದ್ದು, ಪ್ರತಿಭಟನಾ ನಿರತ ವೈದ್ಯರನ್ನು ಸಮಾಧಾನಿಸಿದ್ದಾರೆ. ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಆಗಿದ್ದೇನು?

ಜಗಳವೊಂದರಲ್ಲಿ ಗಾಯಗೊಂಡಿದ್ದ ಇರ್ಫಾನ್ ಎಂಬುವವರು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದಾರೆ. ಈ ವೇಳೆ ತುರ್ತು ಚಿಕಿತ್ಸಾ ವಿಭಾಗದಲ್ಲಿ ಮೂಳೆ ತಜ್ಞರಾಗಿರುವ ಡಾ. ವೆಂಕಟೇಶ್ ಅವರು ಚಿಕಿತ್ಸೆ ನೀಡುತ್ತಿದ್ದರು. ರೋಗಿಯ ತಪಾಸಣೆ ನಡೆಸುವಾಗ ಆತನ ಕುಟುಂಬಸ್ಥರು ಕೊಠಡಿಗೆ ತೆರಳಿದ್ದಾರೆ. ಇದನ್ನು ಗಮನಿಸಿದ ವೈದ್ಯರು ಕೊಠಡಿಯಿಂದ ಹೊರಹೋಗುವಂತೆ ಸೂಚಿಸಿದ್ದಾರೆ.

ಚಿಕ್ಕಮಗಳೂರು3

ಈ ವೇಳೆ ಮಾತಿಗೆ ಮಾತು ಬೆಳೆದಿದ್ದು, ಮಾತಿನ ರಭಸದಲ್ಲಿ ವೈದ್ಯರು ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿರುವ ಆರೋಪ ಕೇಳಿಬಂದಿದೆ. ಮಾತಿನ ಭರದಲ್ಲಿ ‘ಈ ರೀತಿ ನುಗ್ಗಲು ಇದು ಸೂಳೆಗಳ ಮನೆಯಲ್ಲ’ ಎಂದು ವೈದ್ಯರು ಹೇಳಿರುವುದಾಗಿ ಹಲ್ಲೆ ನಡೆಸಿರುವ ಮಹಿಳೆಯರು ಆರೋಪಿಸಿದ್ದಾರೆ.

ಪ್ರತಿಭಟನೆ 20

ವೈದ್ಯರ ಅವಾಚ್ಯ ಹೇಳಿಕೆಯಿಂದ ಆಕ್ರೋಶಗೊಂಡ ರೋಗಿಯ ಕುಟುಂಬದ ಮಹಿಳೆ ತಸ್ಲೀಮಾ ಎಂಬುವವರು ವೈದ್ಯ ಡಾ. ವೆಂಕಟೇಶ್ ಅವರ ಕೊರಳ ಪಟ್ಟಿ ಹಿಡಿದು ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿರುವ ದೃಶ್ಯವು ಮೊಬೈಲ್‌ನಲ್ಲಿ ಸೆರೆಯಾಗಿದೆ. ಕೂಡಲೇ ಹೊರರೋಗಿ ಬಂದ್ ಮಾಡಿ, ಉಳಿದ ವೈದ್ಯರು ಪ್ರತಿಭಟನೆ ನಡೆಸಿದರು.

ಘಟನೆಯ ಸಂಬಂಧ ವೈದ್ಯರು ಈಗಾಗಲೇ ಚಿಕ್ಕಮಗಳೂರು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವೈದ್ಯರ ವಿರುದ್ಧವೂ ಕೂಡ ದೂರು ನೀಡುವುದಾಗಿ ಹಲ್ಲೆ ನಡೆಸಿರುವ ಮಹಿಳೆಯರು ತಿಳಿಸಿದ್ದಾರೆ.

ಕ್ರಮಕ್ಕೆ ಆಗ್ರಹಿಸಿದ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ

ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಕರ್ತವ್ಯ ನಿರತ ವೈದ್ಯಾಧಿಕಾರಿ, ಡಾಕ್ಟರ್ ವೆಂಕಟೇಶ್ ಅವರ ಮೇಲೆ ಹಲ್ಲೆಯಾದ ದುರದೃಷ್ಟಕರ ಘಟನೆ ನಡೆದಿದೆ. ಗೃಹ ಸಚಿವರಾದ ಡಾ ಜಿ ಪರಮೇಶ್ವರ್ ಅವರೇ ಇಂತಹ ಕೃತ್ಯ ಎಸಗಿದವರನ್ನು ಈ ಕೂಡಲೇ ಬಂಧಿಸಿ ವೈದ್ಯಕೀಯ ಸಿಬ್ಬಂದಿಗಳ ರಕ್ಷಣೆಗೆ ಕ್ರಮ ತೆಗೆದುಕೊಳ್ಳಿ. ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್ ಅವರೇ ತಾವು ಈ ಆರೋಪಿಗಳನ್ನು ಬಂಧಿಸಿ ವೈದ್ಯಕೀಯ ಸಿಬ್ಬಂದಿ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ವಿಶ್ವಾಸವಿಟ್ಟು ಕೆಲಸ ಮಾಡುವ ವಾತಾವರಣ ನಿರ್ಮಾಣ ಮಾಡಿ ಎಂದು ವಿಧಾನ ಪರಿಷತ್ ಸದಸ್ಯ, ಚಿಕ್ಕಮಗಳೂರಿನ ಬಿಜೆಪಿ ಮುಖಂಡ ಸಿ ಟಿ ರವಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿ, ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...