ಚಿಕ್ಕಮಗಳೂರು | ಬಾಳೆಹೊನ್ನೂರಿನಲ್ಲಿ 2 ಸೆಂ.ಮೀ ಮಳೆ; ಕಲಬುರಗಿಯಲ್ಲಿ ಮುಂದುವರೆದ ಬಿಸಿ

Date:

ಕರ್ನಾಟಕದಾದ್ಯಂತ ಬಿಸಿಲಿನ ಝಳಕ್ಕೆ ಜನರು ತತ್ತರಿಸಿರುವ ನಡುವೆಯೇ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಮಳೆ ಸುರಿದಿದ್ದು, ಬಾಳೆಹೊನ್ನೂರಿನಲ್ಲಿ 2 ಸೆಂಟಿ ಮೀಟರ್ ಮಳೆಯಾಗಿದೆ. ಇತ್ತ ಬೆಳಗಾವಿಯ ಲೋಂಡಾದಲ್ಲಿ ಮಳೆ ಸುರಿದಿದೆ. ಉಳಿದಂತೆ ರಾಜ್ಯದಲ್ಲಿ ಒಣ ಹವೆ ಮುಂದುವರೆದಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮಾಹಿತಿ ನೀಡಿದೆ.

ಭಾನುವಾರ (ಮಾರ್ಚ್ 24) ಬೆಳಗಿನ ವರೆಗೆ ದಾಖಲಾಗಿರುವ ಮಾಹಿತಿಯ ಪ್ರಕಾರ, ಚಿಕ್ಕಮಗಳೂರು ಹಾಗೂ ಬೆಳಗಾವಿಯ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಲೋಂಡಾದಲ್ಲಿ 1 ಸೆಂಟಿ ಮೀಟರ್ ಮಳೆಯಾಗಿರುವ ವರದಿಯಾಗಿದೆ.

ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಯಾದಗರಿ ಸೇರಿದಂತೆ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಳವಾಗಿದೆ. ಅಂದರೆ 3.1 ಡಿಗ್ರಿ ಸೆಲ್ಸಿಯಸ್‌ನಿಂದ 5.0 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಳವಾಗಿದೆ. ಉಳಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಕಡಿಮೆ ದಾಖಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಕೆಲವು ಕಡೆ ಮಳೆಯಾಗುವ ನಿರೀಕ್ಷೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಕ್ಷಿಣ ಒಳನಾಡಿನಲ್ಲಿ ಸೋಮವಾರ ಮುಂಜಾನೆ ವೇಳೆಯಲ್ಲಿ ಸ್ವಲ್ಪ ಚಳಿಯ ವಾತಾವರಣವಿತ್ತು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ರಾಮನಗರ ಈ ಜಿಲ್ಲೆಗಳಲ್ಲಿ ಅಲ್ಪ ಬಿಸಿಯ ವಾತಾವರಣವಿದೆ. ಆದರೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಏರಿಕೆಯಾಗಿದೆ. ಬೆಳಗ್ಗೆ 10ರ ಬಳಿಕ ಬಿಸಿ ಹೆಚ್ಚಾಗಲಿದೆ. ಕಲಬುರಗಿಯಲ್ಲಿ ಗರಿಷ್ಟ ಉಷ್ಣಾಂಶ 39.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಮಂಡ್ಯದಲ್ಲಿ ಕನಿಷ್ಠ ಉಷ್ಣಾಂಶ 19.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ನಗರದಲ್ಲಿ ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಟ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಟ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮಾಹಿತಿ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...