ಚಿಕ್ಕಮಗಳೂರು l ದೇವನಹಳ್ಳಿ ಚಲೋ ಹೋರಾಟಗಾರರ ಬಂಧನ ಖಂಡಿಸಿ ಪ್ರತಿಭಟನೆಗೆ ಸಂಯುಕ್ತ ಹೋರಾಟ ಕರೆ; ಕೆ ಎಲ್ ಅಶೋಕ್

Date:

ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಇಂದು ನಡೆದ ‘ದೇವನಹಳ್ಳಿ ಚಲೋ’ ವೇಳೆ ಕೊನೆಗೂ ರಾಜ್ಯ ಸರ್ಕಾರ ಪೊಲೀಸ್‌ ಪ್ರಯೋಗ ಮಾಡಿದೆ. ಬೆಳಿಗ್ಗೆಯಿಂದ ನಡೆಯುತ್ತಿದ್ದ ಶಾಂತಿಯುತ ಹೋರಾಟವು ಮುಂದುವರಿಯುವ ಸೂಚನೆ ಕಂಡುಬಂದ ಬೆನ್ನಲ್ಲೇ ಸ್ಥಳದಲ್ಲಿದ್ದ ಎಲ್ಲ ಹೋರಾಟಗಾರರನ್ನು ಸಿದ್ದರಾಮಯ್ಯ ಸರ್ಕಾರ ಬಂಧಿಸಿದೆ. ಚಳವಳಿಗಾರರನ್ನು ಹಾಗೂ ಸಣ್ಣ ಮಕ್ಕಳು, ವಯಸ್ಸಾದ ವೃದ್ಧರು ಎಂದು ಕಾಣದೆ ಪೊಲೀಸರು ಎಳೆದಾಡಿ, ಬಸ್ ಒಳಗೆ ತಳ್ಳಿ ಬಂಧಿಸಿದ್ದಾರೆ. ಇದನ್ನ ಖಂಡಿಸಿ ಗುರುವಾರ ಚಿಕ್ಕಮಗಳೂರು ನಗರದಲ್ಲಿ ಸಿದ್ದರಾಮಯ್ಯ ಸರ್ಕಾರ ವಿರುದ್ಧ ಪ್ರತಿಭಟನೆಯನ್ನು ಮಾಡುತ್ತೇವೆ ಎಂದು ಸಂಯುಕ್ತ ಹೋರಾಟ ಸಮಿತಿ ಮುಖಂಡರಾದ ಕೆ ಎಲ್ ಅಶೋಕ್ ಈದಿನ. ಕಾಮ್ ತಿಳಿಸಿದ್ದಾರೆ.

Screenshot 2025 06 25 22 12 29 88 a23b203fd3aafc6dcb84e438dda678b6

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ 13 ಹಳ್ಳಿಗಳ ರೈತರು ತಮ್ಮಭೂಮಿ ಉಳಿಸಿಕೊಳ್ಳುವುದಕ್ಕಾಗಿ 1180 ದಿನಗಳಿಂದ ಹೋರಾಟ ನಡೆಸುತ್ತಿದ್ದರು. ಸರ್ಕಾರ ಅಂತಿಮ ಆದೇಶ ಹೊರಡಿಸಿ, 1777 ಎಕರೆ ಭೂಮಿಯನ ಕಿತ್ತುಕೊಳ್ಳಲು ಹೊರಟಿತ್ತು. ಆದರೆ ವಿರೋಧ ಬಂದ ಬೆನ್ನ 500 ಎಕರೆ ಜಮೀನಷ್ಟೇ ಬಿಟ್ಟುಕೊಡುವುದಾಗಿ ನಿರ್ಧರಿಸಿತ್ತು.

Screenshot 2025 06 25 22 12 13 73 a23b203fd3aafc6dcb84e438dda678b6

ನೊಂದ ರೈತರ ಪರವಾಗಿ ನಿಲ್ಲುವ ನಿಟ್ಟಿನ ರಾಜ್ಯದ ಮೂಲೆಮೂಲೆಯಿಂದ ವಿವಿಧ ಸಂಘಟನೆಗಳ ಮುಖಂಡರು ಇಂದು ದೇವನಹಳ್ಳಿ ಚಲೋ ಹಮ್ಮಿಕೊಂಡಿದ್ದರು. ಶಾಂತಿಯುತವಾಗಿ ಹೋರಾಟಗಾರರು ಪ್ರತಿಭಟನೆಯನ್ನು ಕೈಗೊಂಡಿದ್ದರು. ಅದನ್ನ ದಿಕ್ಕು ತಪ್ಪಿಸಿ ಹೋರಾಟಗಾರರನ್ನು ಬಂಧಿಸಿರುವುದನ್ನು ಖಂಡಿಸುತ್ತೇವೆ ಎಂದು ಸಂಯುಕ್ತ ಹೋರಾಟ ಸಮಿತಿ ಮುಖಂಡರಾದ ಕೆ ಎಲ್ ಅಶೋಕ್ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...