ಚಿಕ್ಕಮಗಳೂರು | ಬೆಳಗಾವಿ ಚಲೋ; ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಭೆ 

Date:

ಕರ್ನಾಟಕ ರಾಜ್ಯ ಸರ್ಕಾರಿ ವಸತಿ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರನ್ನು ಸರ್ಕಾರ ಕಡೆಗಣಿಸಿರುವುದನ್ನು ಖಂಡಿಸಿ ಬೆಳಗಾವಿ ಚಲೋ ಮೂಲಕ ಡಿಸೆಂಬರ್‌ 18ರಂದು ಬೆಳಗಾವಿಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದು, ರಾಜ್ಯದಿಂದ ಸುಮಾರು ₹5000ಕ್ಕೂ ಅಧಿಕ ಮಂದಿ ಹೊರಗುತ್ತಿಗೆ ನೌಕರರು ಭಾಗವಹಿಸುತ್ತಿದ್ದಾರೆ ಎಂದು ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಹನುಮೇಗೌಡ ತಿಳಿಸಿದರು.

ಚಿಕ್ಕಮಗಳೂರು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸಭೆ ನಡೆಸಿ ಮಾತನಾಡಿ, ಜಿಲ್ಲಾ ಪಂಚಾಯಿತಿ ಸಿಇಒ ಕೀರ್ತನಾ, ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕಿ ಮಾಲತಿ, ಪರಿಶಿಷ್ಟ ಪಂಗಡದ ಜಿಲ್ಲಾ ಉಪ ನಿರ್ದೇಶಕಿ ಭಗೀರಥಿ ಅವರಿಗೆ ಸಭೆಯ ನಂತರ ಮನವಿ ನೀಡಿದರು.

“ಬಿಸಿಎಂ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡಗಳ ಇಲಾಖೆ, ಅಲ್ಪಸಂಖ್ಯಾತ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಕಳೆದ 15ರಿಂದ 20 ವರ್ಷಗಳಿಂದ ಕಡಿಮೆ ಸಂಬಳಕ್ಕೆ ದುಡಿಯುತ್ತ ಬಂದಿದ್ದೇವೆ. ಮಹಿಳೆಯರು, ದಲಿತರು ಹೆಚ್ಚಿನದಾಗಿ ಈ ಕೆಲಸ ಮಾಡುತ್ತ ಬಂದಿದ್ದು, ಸರ್ಕಾರ ಕಡೆಗಣಿಸಿರುವ ಹಿನ್ನೆಲೆಯಲ್ಲಿ ನ್ಯಾಯಯುತವಾಗಿ ವೇತನ ನೀಡುವಂತೆ ಆಗ್ರಹಿಸುತ್ತಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Screenshot 2024 12 08 17 02 30 72 7352322957d4404136654ef4adb64504

“ನೇರವಾಗಿ ಇಲಾಖೆಯಿಂದ ವೇತನ ಕೊಡುವುದು, ಹತ್ತು ವರ್ಷ ಸೇವೆ ಸಲ್ಲಿಸಿರುವವ ಎಲ್ಲರನ್ನೂ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದ ಅಡಿ ಪರಿಗಣಿಸುವುದು, ಕನಿಷ್ಠವೇತನ ಮಾಸಿಕ ₹31,000 ಕೊಡುವುದು, ಸೇವಾ ಭದ್ರತೆ, ಸಮಾನ ಕೆಲಸಕ್ಕೆ ಸಮಾನ ವೇತನ, ಬೀದರ್ ಜಿಲ್ಲೆಯ ಮಾದರಿಯಲ್ಲಿ ಜಿಲ್ಲಾ ಕಾರ್ಮಿಕ ಸಂಸ್ಥೆಗಳ ಸಹಕಾರ ಸಂಘವನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ವಿಸ್ತರಿಸುವುದು, ನಿವೃತ್ತಿ ನಂತರ ₹10 ಲಕ್ಷ ಪರಿಹಾರ ಕೊಡುವುದು, ಏಳು ಮಂದಿ ಇರುವ ವಸತಿ ಶಾಲೆಗಳಲ್ಲಿ ಹೆಚ್ಚುವರಿ ನಾಲ್ಕು ಜನರನ್ನು ನೇಮಕ ಮಾಡುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಇಟ್ಟುಕೊಂಡು ಪ್ರತಿಭಟನೆ ಮಾಡುತ್ತಿದ್ದೇವೆ. ಎಲ್ಲ ಹೊರಗುತ್ತಿಗೆ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಬೇಕು. ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆ ಮಾಡಲಾಗುವುದು” ಎಂದು ಜಿಲ್ಲಾಧ್ಯಕ್ಷ ಶಿವಮೂರ್ತಿ ಎಸ್ ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮಕ್ಕಳ ಎದುರೇ ಗೃಹಿಣಿ ಹತ್ಯೆ; ಆರೋಪಿ ಪ್ರಿಯಕರನಿಗಾಗಿ ಹುಡುಕಾಟ

ಈ ವೇಳೆ ಚಿಕ್ಕಮಗಳೂರು, ಕಡೂರು, ತರೀಕೆರೆ, ಎನ್ಆರ್ ಪುರ, ಶೃಂಗೇರಿ, ಕೊಪ್ಪ ತಾಲೂಕಿನ ಹೊರಗುತ್ತಿಗೆ ನೌಕರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...