ಚಿಕ್ಕಮಗಳೂರು | ಶಾಲೆಗಳಿಗೆ ಬಿಇಒ ಭೇಟಿ; ಕಿರುಗುಂದ ಶಾಲೆಯ ಕಂಪ್ಯೂಟರ್ ಕೊಠಡಿಯಲ್ಲಿ ಆಹಾರ ದಾಸ್ತಾನು ಪತ್ತೆ

Date:

ಕ್ಷೇತ್ರ ಶಿಕ್ಷಣಾಧಿಕಾರಿ ಹೇಮಂತ ಚಂದ್ರ ಅವರು ಮಂಗಳವಾರ ಹಲವು ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಎಚ್‍ಪಿಎಸ್ ಶಾಲೆಯೊಂದರ ಕಂಪ್ಯೂಟರ್ ಕೊಠಡಿಯಲ್ಲಿ ಆಹಾರ ದಾಸ್ತಾನು ಶೇಖರಿಸಿಟ್ಟಿರುವುದು ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ಎಚ್‌ಪಿಎಸ್‌ ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದ್ದು, ಮಕ್ಕಳಿಗೆ ನೀಡುತ್ತಿದ್ದ ಆಹಾರ ಪದಾರ್ಥಗಳನ್ನು ಶಿಕ್ಷಕಿಯೊಬ್ಬರು ಮನೆಗೆ ಕೊಂಡೊಯ್ಯುತ್ತಿದ್ದರು ಎಂಬುದು ತಿಳಿದುಬಂದಿದೆ.

“ಮಕ್ಕಳಿಗಾಗಿ ಸರ್ಕಾರ ನೀಡುತ್ತಿದ್ದ ಆಹಾರ ಸಾಮಗ್ರಿಗಳನ್ನು ಕಿರುಗುಂದ ಶಾಲೆಯಲ್ಲಿ ಶಿಕ್ಷಕಿಯೋರ್ವರು ಮನೆಗೆ ಕೊಂಡೊಯ್ಯುತ್ತಿದ್ದ ಬಗ್ಗೆ ಈ ಹಿಂದೆಯೇ ದೂರು ಬಂದಿತ್ತು. ಈ ಬಗ್ಗೆ ಬಿಇಒ ಅವರ ಗಮನಕ್ಕೂ ತರಲಾಗಿತ್ತು. ಆದರೆ, ಅವರು ಗಮನ ಹರಿಸಿರಲಿಲ್ಲ” ಎಂದು ಎಸ್‍ಡಿಎಂಸಿ ಮಾಜಿ ಅಧ್ಯಕ್ಷ ಕೆ ಆರ್ ಲೋಕೇಶ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಒಒ ಮಂಗಳವಾರ ಶಾಲೆಗೆ ಭೇಟಿ ನೀಡುತ್ತಿದ್ದಾರೆಂಬ ಮಾಹಿತಿ ಮೇರೆಗೆ ಕಿರುಗುಂದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ವಾತಿಶ್ರೀ ಹಾಗೂ ಸ್ಥಳೀಯರುಗಳಾದ ರಾಮಯ್ಯ, ಮಂಜುನಾಥ್, ಚನ್ನಕೇಶವ ಎಲ್ಲರೂ ಶಾಲೆಗೆ ತೆರಳಿ, ಅಲ್ಲಿ ಕಂಪ್ಯೂಟರ್ ಕೊಠಡಿಯ ಬೀಗ ತೆಗೆಸಿದಾಗ ಹಾಲಿನಪುಡಿ, ಅಕ್ಕಿ, ಬೇಳೆ, ಎಣ್ಣೆ, ಗೋಧಿ ಹಾಗೂ ಶಾಲೆ ಮಕ್ಕಳ ಶೂಗಳು ಪತ್ತೆಯಾಗಿವೆ” ಎಂದು ಹೇಳಿದರು.

“ಶಾಲೆಗೆ ಬರುವ ಆಹಾರ ಪದಾರ್ಥಗಳನ್ನು ಇಲ್ಲಿನ ಶಿಕ್ಷಕಿಯೇ ಕೊಂಡೊಯ್ಯುತ್ತಿದ್ದರು. ಹೆಚ್ಚುವರಿ ಪದಾರ್ಥವನ್ನು ತರಕಾರಿ ಆಟೊದಲ್ಲಿ ಸಾಗಿಸುತ್ತಿದ್ದರೆಂಬ ಮಾಹಿತಿ ಕೂಡ ಬಂದಿತ್ತು. ಆಹಾರ ಪದಾರ್ಥಗಳನ್ನು ಕಂಪ್ಯೂಟರ್ ಕೊಠಡಿಯಿಂದ ಸಾಗಿಸಲು ಸುಲಭವಾಗುತ್ತದೆಂಬ ಕಾರಣಕ್ಕೆ ದಾಸ್ತಾನು ಕೊಠಡಿಯಲ್ಲಿದ್ದ ಆಹಾರ ಪದಾರ್ಥಗಳನ್ನು ಕಂಪ್ಯೂಟರ್ ಕೊಠಡಿಗೆ ವರ್ಗಾಯಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ; 3 ತಿಂಗಳು ಅವಧಿ ವಿಸ್ತರಣೆ

“ಕಿರುಗುಂದ ಶಾಲೆಯ ಕಂಪ್ಯೂಟರ್ ಕೊಠಡಿಯಲ್ಲಿ ಆಹಾರ ಪದಾರ್ಥ ಶೇಖರಿಸಿಟ್ಟಿರುವುದು ಮಂಗಳವಾರ ಕಂಡುಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ತಪ್ಪು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು” ಎಂದು ಬಿಇಒ ಹೇಮಂತಚಂದ್ರ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...