ಚಿಕ್ಕಮಗಳೂರು | ಮನೆ ಮೇಲೆ ಕಲ್ಲು ತೂರಿದ ಆರೋಪ – ಹಲ್ಲೆ; ಭುಗಿಲೆದ್ದ ಕೋಮು ಉದ್ವಿಗ್ನತೆ

Date:

ಚಿಕ್ಕಮಗಳೂರಿನ ತಿಲಕ್ ಪಾರ್ಕ್ ಸಮೀಪವಿರುವ ಹಿಂದು ಸಮುದಾಯದ ಮನೆಯೊಂದರ ಮೇಲೆ ಮುಸ್ಲಿಂ ಯುವಕರು ಕಲ್ಲು ತೂರಿದ್ದಾರೆಂದು ಆರೋಪಿಸಲಾಗಿದೆ. ಅಲ್ಲದೆ, ಮುಸ್ಲಿಂ ಯುವಕರ ಮೇಲೆ ಬಜರಂಗದಳದ ಕಾರ್ಯಕರ್ತರು ಹಲ್ಲೆಯನ್ನೂ ನಡೆದಿದ್ದಾರೆ. ಪರಿಣಾಮ, ನಗರದಲ್ಲಿ ಕೋಮು ಉದ್ವಿಗ್ನತೆ ಉಂಟಾಗಿದೆ.

ಕಳೆದ ಒಂದು ವಾರದಿಂದ ಕಿಡಿಗೇಡಿಗಳು ರಾತ್ರಿ ವೇಳೆ ನಿರಂತರ ಕಲ್ಲುತೂರಾಟ ನಡೆಸುತ್ತಿದ್ದರು ಎಂದು ಮನೆ ಮಾಲೀಕರು ಆರೋಪಿಸಿದ್ದಾರೆ. ಸೋಮವಾರ ರಾತ್ರಿಯೂ ಕಲ್ಲು ತೂರಾಟ ನಡೆದಿದೆ. ಈ ಬೆನ್ನಲ್ಲೇ, ಕೆಲ ಮುಸ್ಲಿಂ ಯುವಕರನ್ನು ಬಜರಂಗದಳ ಕಾರ್ಯಕರ್ತರು ಹಿಡಿದು ಥಳಿಸಿದ್ದಾರೆ ಮತ್ತು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.

ಘರ್ಷಣೆ ವೇಳೆ ಇಬ್ಬರು ಮುಸ್ಲಿಂ ಯುವಕರು ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ಮೇಲೆ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಗಾಯಾಳುಗಳು ಆಯೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲ್ಲು ತೂರಾಟಕ್ಕೊಳಗಾದ ಮನೆಯ ಮಾಲೀಕ ಗಗನ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. “ಕಳೆದ ಕೆಲ ದಿನಗಳಿಂದ ಮಧ್ಯಾಹ್ನ ಮತ್ತು ರಾತ್ರಿ ವೇಳೆ ಮನೆ ಮೇಲೆ ಕಲ್ಲು ಎಸೆಯಲಾಗುತ್ತಿದೆ. ನಾವು ಭಯದಲ್ಲಿ ಜೀವನ ನಡೆಸುವಂತಾಗಿದೆ. ಸೋಮವಾರ ರಾತ್ರಿ ಕೂಡ ಮನೆ ಮೇಲೆ ಕಲ್ಲು ಎಸೆದಿದ್ದಾರೆ. ಅದನ್ನು ನನ್ನ ತಾಯಿ ಮತ್ತು ತಂಗಿ ಪ್ರಶ್ನಿಸಿದ್ದು, ಅವರೊಂದಿಗೆ ಯುವಕರು ಜಗಳ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಎಂದು ಹೇಳಿದ್ದಾರೆ. ಸದ್ಯ ಪ್ರಕರಣದ ತನಿಖೆಯನ್ನು ಬಸವನಹಳ್ಳಿ ಪೊಲೀಸ್ ಠಾಣೆ ಪೊಲೀಸರು ಕೈಗೊಂಡಿದ್ದಾರೆ.

ಕ್ಷುಲ್ಲಕ ಕಾರಣ ಮತ್ತು ಆರೋಪ ಮಾಡಿ, ಮುಸ್ಲಿಂ ಯುವಕರ ಮೇಲೆ ಬಜರಂಗದಳದ ಕಾರ್ಯಕರ್ಯರು ಹಲ್ಲೆ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಎಇಪಿಐ ಒತ್ತಾಯಿಸಿದೆ.

ನಗರದ ತಿಲಕ್ ಪಾರ್ಕ್ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಎಂಎಸ್‌ಪಿ ಜಯಕುಮಾರ್ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್ ಪಡೆ ನಿಯೋಜಿಸಲಾಗಿದೆ. ಪೊಲೀಸ್ ಠಾಣೆ ಮತ್ತು ಆಸ್ಪತ್ರೆ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...