ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದ ಆಡಳಿತ ಮಂಡಳಿ ಚುನಾವಣೆಯ ಹಿನ್ನೆಲೆಯಲ್ಲಿ, ಜನವರಿ 17ರಂದು ಚಿಕ್ಕಮಗಳೂರು ನಗರದಲ್ಲಿ ಉಪ ವಿಭಾಗಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದ ಆಡಳಿತ ಮಂಡಳಿ ಚುನಾವಣೆಯ ಹಿನ್ನೆಲೆಯಲ್ಲಿ, ರತ್ನಗಿರಿ ರಸ್ತೆಯಲ್ಲಿರುವ ಬ್ಯಾಂಕಿನ ನೂತನ ಆಡಳಿತ ಕಚೇರಿಯ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ. ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿಯನ್ನು ಕಾಪಾಡುವ ದೃಷ್ಟಿಯಿಂದ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಶ್ರೀ ರಂಗರಾಮ್ ಆರ್ಟ್ಸ್ ಫೌಂಡೇಶನ್; ಜ.18ರಂದು ವಾರ್ಷಿಕ ಕಲಾ ಉತ್ಸವ
ಈ ಕುರಿತು ಬಿಎನ್‌ಎಸ್‌ಎಸ್ ಕಲಂ 163ರ ಅಡಿಯಲ್ಲಿ ಜಾರಿಯಲ್ಲಿರಲಿದೆ. ಜನವರಿ 17ರ ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಈ ಆದೇಶ ಅನ್ವಯವಾಗಲಿದ್ದು, ಮತದಾನ ಕೇಂದ್ರದ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಿಸಲಾಗಿದೆ. ಫುಡ್ ಪ್ಯಾಲೇಸ್‌ನಿಂದ ರಾಮೇಶ್ವರ ದೇವಾಲಯ ರಸ್ತೆಯವರೆಗೆ ಸಾರ್ವಜನಿಕ ಓಡಾಟ ಮತ್ತು ಗುಂಪು ಸೇರುವುದಕ್ಕೆ ನಿರ್ಬಂಧ ವಹಿಸಲಾಗಿದೆ. ಜಿಲ್ಲಾಡಳಿತ ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.





