ಚಿಕ್ಕಮಗಳೂರು | ಸ್ವ-ಸಹಾಯ, ಸ್ತ್ರೀಶಕ್ತಿ ಸಂಘಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವಂತೆ ಒತ್ತಾಯ

Date:

ಸರ್ಕಾರ ಸಹಕಾರ ಸಂಘಗಳ ಮೂಲಕ ಸ್ವ-ಸಹಾಯ ಸಂಘ ಹಾಗೂ ಸ್ತ್ರೀಶಕ್ತಿ ಸಂಘಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿದರೆ ಮೈಕ್ರೋ ಫೈನಾನ್ಸ್ ಹಾವಳಿ ತಡೆಯಬಹುದು ಎಂದು ರಾಜ್ಯ ಸಹಕಾರ ಭಾರತಿ ಉಪಾಧ್ಯಕ್ಷ ಯಡಗೆರೆ ಸುಬ್ರಹ್ಮಣ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಚಿಕ್ಕಮಗಳೂರು ಜಿಲ್ಲೆಯ ಎನ್‌ ಆರ್‌ ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್‌ನಿಂದ ಸಾಲ ಪಡೆದ ಬಡವರು ಸಾಲ ಮರುಪಾವತಿಸಲಾಗದೆ ಹಾಗೂ ಅವರ ದಬ್ಬಾಳಿಕೆ ಸಹಿಸಲಾರದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಎಸ್ ಎಂ ಕೃಷ್ಣನವರು ಮುಖ್ಯಮಂತ್ರಿಯಾಗಿದ್ದಾಗ ಸ್ವ–ಸಹಾಯ ಸಂಘ, ಸ್ತ್ರೀಶಕ್ತಿ ಸಂಘಗಳ ಸದಸ್ಯರಿಗೆ ಶೇ.4ರ ಬಡ್ಡಿಯಲ್ಲಿ ಸಾಲ ನೀಡಿದ್ದರು. ಬಳಿಕ, ಯಡಿಯೂರಪ್ಪ ಸಿಎಂ ಆಗಿದ್ದಾಗ ಶೇ.6ರ ಬಡ್ಡಿಯಲ್ಲಿ ಸಾಲ ನೀಡಲಾಗಿತ್ತು. ನಂತರದ ದಿನಗಳಲ್ಲಿ ಸ್ವ–ಸಹಾಯ ಗುಂಪುಗಳಿಗೆ ಕಡಿಮೆ ಬಡ್ಡಿಯಲ್ಲಿ ಸಾಲ ನೀಡುವುದು ನಿಂತು ಹೋಗಿದೆ. ಇದನ್ನು ಉಪಯೋಗಿಸಿಕೊಂಡು ಮೈಕ್ರೊ ಫೈನಾನ್ಸ್‌ ಕಂಪನಿಗಳು ಬಡವರಿಗೆ, ಕಾರ್ಮಿಕರಿಗೆ ಅಧಿಕ ಬಡ್ಡಿಯಲ್ಲಿ ಸಾಲ ನೀಡುತ್ತಿವೆ. ಸಾಲ ನೀಡುವುದರಲ್ಲಿ ಪಾರದರ್ಶಕತೆ ಇಲ್ಲವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಸೈಬರ್ ಸುರಕ್ಷತೆಗೆ ಪರಿಣಾಮಕಾರಿ ತಾಂತ್ರಿಕ ವ್ಯವಸ್ಥೆ ಬೇಕು : ಬಿ. ವಿ. ಅಶ್ವಿಜಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಹಕಾರ ಸಂಘಗಳಲ್ಲಿ ಸಾಲ ನೀಡುವಾಗ ಕೆಲವು ನಿಯಮಗಳನ್ನು ಸರಿಯಾಗಿ ಪಾಲಿಸಲಾಗುತ್ತದೆ. ಆದ್ದರಿಂದ ಸರ್ಕಾರವು ಈ ಬಗ್ಗೆ ಚಿಂತನೆ ನಡೆಸಿ ಹಿಂದಿನ ರೀತಿಯಲ್ಲೇ ಸ್ವ–ಸಹಾಯ ಸಂಘ, ಸ್ತ್ರೀಶಕ್ತಿ ಸಂಘಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಿ ಮೈಕ್ರೋ ಫೈನಾನ್ಸ್ ಹಾವಳಿಗೆ ಕಡಿವಾಣ ಹಾಕಬಹುದಾಗಿದೆ” ಎಂದು ತಿಳಿಸಿದ್ದಾರೆ.

ಸೀತೂರು ವಿಎಸ್‌ಎಸ್‌ಎನ್ ಅಧ್ಯಕ್ಷ ಬೆಮ್ಮನೆ ಮೋಹನ್, ಜಿಲ್ಲಾ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್ ವಿ ಸಂದೀಪ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...