ಚಿಕ್ಕಮಗಳೂರು | ಕಾರ್ಯಕರ್ತರು ಸ್ಪರ್ಧಿಸಬೇಕಾದ ಚುನಾವಣೆ; ಸಿ.ಟಿ ರವಿ ಸ್ವಯಂ ಘೋಷಿತ ಕುರಿಯಾಗಿದ್ದಾರೆ; ಎಚ್‌.ಎಚ್‌ ದೇವರಾಜ್

Date:

ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಗೆಲುವಿನ ಬಗ್ಗೆ ಕೆಪಿಸಿಸಿ ವಕ್ತಾರ ಎಚ್‌.ಎಚ್‌. ದೇವರಾಜ್ ವಿಧಾನಪರಿಷತ್ ಸದಸ್ಯರಾದ ಸಿ.ಟಿ. ರವಿ ಹಾಗೂ ಎಸ್.ಎಲ್. ಭೋಜೇಗೌಡ ವಿರುದ್ಧ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತೀವ್ರ ಖಂಡಿಸಿದರು.

ರಾಜಕಾರಣದಲ್ಲಿ ಸ್ವಾಭಿಮಾನ ಎನ್ನುವುದು ಮುಖ್ಯವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿ.ಟಿ. ರವಿ ಅವರನ್ನು ಸೋಲಿಸಿದ ಖುಷಿಯಲ್ಲಿ ಹಾಲಿನ ಅಭಿಷೇಕ ಮಾಡಿಸಿಕೊಂಡಿದ್ದ ಭೋಜೇಗೌಡರು, ಇಂದು ಅದೇ ರವಿ ಅವರ ಹೆಗಲ ಮೇಲೆ ಕೈಹಾಕಿಕೊಂಡು ‘ಭಾಯ್ ಭಾಯ್’ ಎನ್ನುತ್ತಿರುವುದು ಹಾಸ್ಯಾಸ್ಪದವಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ, ನಾಲ್ಕು ಬಾರಿ ಶಾಸಕರಾಗಿ ಹಾಗೂ ಸಚಿವರಾಗಿ ಕೆಲಸ ಮಾಡಿದ ಅನುಭವವಿರುವ ಸಿ.ಟಿ. ರವಿ ಅವರು ಕಾರ್ಯಕರ್ತರು ಸ್ಪರ್ಧಿಸಬೇಕಾದ ಚುನಾವಣೆಯಲ್ಲಿ ತಾವೇ ಕಣಕ್ಕಿಳಿದಿರುವುದು ಅವರ ರಾಜಕೀಯ ತೋರಿಸುತ್ತದೆ ಎಂದು ಕೆಪಿಸಿಸಿ ವಕ್ತಾರ ಎಚ್‌.ಎಚ್‌. ದೇವರಾಜ್  ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಜ. 21ರಂದು ವಿದ್ಯುತ್ ವ್ಯತ್ಯಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿ.ಟಿ. ರವಿಯನ್ನು ಮರಿ ಎಂದು ಭಾವಿಸಿದ್ದೆವು, ಆದರೆ ಅವರೀಗ ಸ್ವಯಂಘೋಷಿತ ಕುರಿ ಮರಿಯಾಗಿದ್ದಾರೆ. ಅವರಿಗೆ ಅಷ್ಟೊಂದು ಆಸೆಯಿದ್ದರೆ ತಮ್ಮ ಮಗನನ್ನು ಪಿಸಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿಸಲಿ ಎಂದು ಕೆಪಿಸಿಸಿ ವಕ್ತಾರ ಎಚ್‌.ಎಚ್‌ ದೇವರಾಜ್ ಅಣುಕಿಸಿದರು. ಈ ವೇಳೆ ಕಾಂಗ್ರೆಸ್ ತಾಲೂಕು ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತಿಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...