ಚಿಕ್ಕಮಗಳೂರು | ಕೃಷಿ ಉದ್ದೇಶಕ್ಕೆ ವಿದ್ಯುತ್ ಬಳಕೆ; ರೈತನಿಗೆ ಬರೋಬ್ಬರಿ 3 ಲಕ್ಷ ರೂ. ಬಿಲ್ ಕೊಟ್ಟ ಮೆಸ್ಕಾಂ

Date:

ಕೃಷಿ ಉದ್ದೇಶಕ್ಕೆ ಉಚಿತ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದ್ದರೂ, ರೈತರೊಬ್ಬರಿಗೆ ಬರೋಬ್ಬರಿ 3 ಲಕ್ಷ ರೂ. ವಿದ್ಯುತ್‌ ಬಿಲ್ ವಿಧಿಲಾಗಿರುವ ಘಟನೆ ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರ ಉಸ್ತುವಾರಿ ಜಿಲ್ಲೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಜಿಲ್ಲೆಯ ಬಿಕ್ಕರಣೆ ಗ್ರಾಮದ ರೈತರ ಉಮೇಶ್‌ ಎಂಬವರಿಗೆ ಮೆಸ್ಕಾಂ (ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ) 3,20,076 ರೂ.ಗಳ ಬಿಲ್ ವಿಧಿಸಿದೆ. ಕೃಷಿಗಾಗಿ 10 ಎಚ್‌ಪಿ ಮೋಟಾರ್ ಬಳಕೆ ಮಾಡಿರುವುದಕ್ಕೆ ಬಿಲ್ ನೀಡಲಾಗಿದ್ದು, ಬಿಲ್‌ ಪಾವತಿಸದಿದ್ದರೆ, ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಿಯೂ ಹೇಳಿದೆ.

ಎಸ್‌ ಬಂಗಾರಪ್ಪ ಅವರುಇ ಮುಖ್ಯಮಂತ್ರಿಯಾಗಿದ್ದಾಗ ಕೃಷಿ ಉದ್ದೇಶಕ್ಕೆ 10 ಎಚ್‌ಪಿ ಮೋಟಾರ್ ಬಳಕೆಗೆ ಉಚಿತ ವಿದ್ಯುತ್‌ ನೀಡುವುದಾಗಿ ಘೋಷಿಸಿದ್ದರು. ಅಂದಿನಿಂದಲೂ ರಾಜ್ಯಾದ್ಯಂತ ಕೃಷಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಅಂತೆಯೇ, ರೈತ ಉಮೇಶ ಅವರು 13 ವರ್ಷಗಳ ಹಿಂದೆ ತಮ್ಮ ಜಮೀನಿನಲ್ಲಿ ಬೋರ್‌ವೆಲ್ ಕೊರೆಸಿ, 10 ಎಚ್‌ಪಿ ಮೋಟಾರ್ ಅವಳವಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ, ಆಲ್ದೂರು ಮೆಸ್ಕಾಂ ಉಪ ವಿಭಾಗವು 13 ವರ್ಷಗಳ ಬಳಿಕ ಏಕಾಏಕಿ 3 ಲಕ್ಷ ರೂ.ಗಳ ವಿದ್ಯುತ್ ಬಿಲ್ ನೀಡಿದೆ. ಬಿಲ್‌ ಕಂಡು ರೈತ ಉಮೇಶ್ ಕಂಗಾಲಾಗಿದ್ದಾರೆ.

ಆದಾಗ್ಯೂ, ‘ಕಾಫಿ ಬೆಳೆಗಾರರಿಗೆ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡಲಾಗುವುದಿಲ್ಲ. ಹೀಗಾಗಿಯೇ, ವಿದ್ಯುತ್ ಬಿಲ್ ನೀಡಿದ್ದೇವೆ’ ಎಂದು ಮೆಸ್ಕಾಂ ಅಧಿಕಾರಿಗಳು ಹೇಳಿಕೊಂಡಿದ್ದಾರೆ. ಆದರೆ, 13 ವರ್ಷಗಳಿಂದ ಬಿಲ್ ಕೊಡದೆ ಈಗ ಏಕಾಏಕಿ ಬಿಲ್‌ ಕೊಟ್ಟು, 15 ದಿನಗಳ ಒಳಗೆ ಪಾವತಿ ಮಾಡುವಂತೆ ಎಚ್ಚರಿಕೆ ನೀಡಿರುವುದೇಕೆ ಎಂದು ಉಮೇಶ್‌ ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...