ಮಲೆನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಪರಿಣಾಮ ಪ್ರತ್ಯೇಕ ಚಾಲಕರ ನಿಯಂತ್ರಣ ತಪ್ಪಿ ಎರಡು ವಾಹನಗಳು ಒಂದೇ ಸ್ಥಳದಲ್ಲಿ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ.
ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪ ಹೇಮಾವತಿ ನದಿ ಬಳಿ ಕಾರುಗಳು ಪಲ್ಟಿಯಾಗಿದ್ದು, ಸೇತುವೆಯಿಂದ ಕೆಳಗೆ ಉರುಳಿವೆ. ಶಿಫ್ಟ್ ಕಾರು ಮತ್ತು ಇನೋವಾ ಕಾರು ಪಲ್ಟಿಯಾದ ಕಾರುಗಳು.
ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಭಾರೀ ಮಳೆ; ಸೆಮಿಸ್ಟರ್ ಪರೀಕ್ಷೆ ಮುಂದೂಡದ ಮಂಗಳೂರು ವಿವಿ
ಇನೋವಾ ಕಾರಿನ ಪ್ರಯಾಣಿಕರು ಪುತ್ತೂರಿನಿಂದ ಚಿಕ್ಕಮಗಳೂರಿಗೆ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.




