ಚಿಕ್ಕಮಗಳೂರು | ಭಾರೀ ಮಳೆಗೆ ನಲುಗಿದ ಏಲಕ್ಕಿ ಬೆಳೆಗಾರರು; ಕಟಾವು ಮಾಡಿದ ಏಲಕ್ಕಿ ಒಣಗಿಸಲು ಪರದಾಟ

Date:

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಾದ್ಯಂತ ಒಂದು ವಾರದಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಏಲಕ್ಕಿ ಬೆಳೆಗಾರರು ತತ್ತರಿಸಿ ಹೋಗಿದ್ದಾರೆ.

ಜಿಲ್ಲೆಯ ದೇವರುಂದ, ಹಂತೂರು, ಮೇಕನಗದ್ದೆ, ಹೊಸ್ಕೆರೆ, ಏರಿಕೆ, ಭೈರಾಪುರ, ಗುತ್ತಿ, ಹೆಸಗೋಡು, ಮೂಲರಹಳ್ಳಿ ಸೇರಿದಂತೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗಡಿ ಭಾಗದಲ್ಲಿ ಸಂಪ್ರಾದಾಯಿಕ ಪದ್ಧತಿಯಲ್ಲಿ ಏಲಕ್ಕಿ ಬೆಳೆಯುತ್ತಾರೆ. ಆಗಸ್ಟ್ ಅಂತ್ಯದಿಂದ ನವೆಂಬರ್‌ ಕೊನೆಯವರೆಗೆ ಏಲಕ್ಕಿ ಕಟಾವಿನ ಕಾಲವಾಗಿದೆ. ಆದರೆ, ಈ ಬಾರಿ ಮಳೆ ಮುಂದುವರೆದಿರುವುದರಿಂದ ಏಲಕ್ಕಿ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಏಲಕ್ಕಿ ಬೆಳೆಗಾರರಲ್ಲಿ ಹೆಚ್ಚಿನವರು ಸಣ್ಣ ಬೆಳೆಗಾರರಿದ್ದು, ಬೆಳೆ ಒಣಗಿಸಲು ಡ್ರೈಯರ್‌ನಂತಹ ಆಧುನಿಕ ವ್ಯವಸ್ಥೆ ಹೊಂದಿಲ್ಲ. ಮಳೆ ನಿಂತು, ಬಿಸಿಲು ಮೂಡಿದಾಗ ಏಲಕ್ಕಿ ಒಣಗಿಸಿ ಮಾರಾಟ ಮಾಡಬೇಕಾಗಿದೆ. ಈಗಾಗಲೇ ಕಟಾವು ಮುಕ್ತಾಯವಾಗಿದ್ದು, 3 ಹಾಗೂ 4ನೇ ಸುತ್ತಿನಲ್ಲಿ ಕಟಾವು ಮಾಡಬೇಕಾದ ಕಾಯಿಗಳು ಮಾತ್ರ ಗಿಡದಲ್ಲಿ ಉಳಿದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊದಲ ಹಂತದ ಕಟಾವು ಮಳೆಯ ನಡುವೆಯೇ ನಡೆದಿದೆ. ಅಕ್ಟೋಬರ್ ಬಳಿಕ ಮಳೆ ಕಡಿಮೆಯಾಗಬಹುದೆಂದು ನಿರೀಕ್ಷಿಸಿ ಕಟಾವು ಮುಂದೂಡಿದ್ದ ರೈತರಿಗೆ, ಈಗ ನಿರಂತರವಾಗಿ ಸುರಿಯುತ್ತಿರುವ ಮಳೆ ಅಡ್ಡಿಯಾಗಿದೆ. ಕಟಾವು ಮಾಡಿದರೆ ಏಲಕ್ಕಿಯನ್ನು ಒಣಗಿಸಲಾಗದ ಸ್ಥಿತಿ ಒಂದೆಡೆಯಾದರೆ, ಇನ್ನೊಂದೆಡೆ ಗಿಡದಲ್ಲೇ ಹಣ್ಣಾದ ಏಲಕ್ಕಿ ನೆಲಕ್ಕೆ ಉದುರಿ ಬಿದ್ದು, ನಷ್ಟವಾಗುತ್ತಿರುವುದು ನುಂಗಲಾರದ ತುತ್ತಾಗಿದೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಜಿಟಿ ಜಿಟಿ ಮಳೆಗೆ ಜನಜೀವನ ಅಸ್ತವ್ಯಸ್ತ

ಸತತ ಮಳೆಯಿಂದ ಕಟಾವು ಮಾಡಲು ಸಮಸ್ಯೆಯಾಗಿದ್ದು, ವನ್ಯಪ್ರಾಣಿಗಳ ಹಾವಳಿ ಹಾಗೂ ಮೂಡಿಗೆರೆ ತಾಲೂಕಿನಲ್ಲಿ ಮಾರುಕಟ್ಟೆ ವ್ಯವಸ್ಥೆ ಇಲ್ಲದಿರುವುದು ಸೇರಿದಂತೆ ರೈತರು ಇತ್ಯಾದಿ ಸಮಸ್ಯೆಗಳನ್ನು ಎದುರಿಸುವಂತಾಗಿದೆ.

ಸಣ್ಣ ಹಾಗೂ ಅತಿಸಣ್ಣ ರೈತರಿಗೆ ಏಲಕ್ಕಿ ಒಣಗಿಸಿಕೊಳ್ಳಲು ಸರ್ಕಾರದ ನೆರವಿನಲ್ಲಿ ಸೌಲಭ್ಯ ಕಲ್ಪಿಸಿದರೆ ಮಳೆಗಾಲದಲ್ಲಿ ಕಟಾವಿಗೆ ಬರುವ ಏಲಕ್ಕಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂಬುದು ಏಲಕ್ಕಿ ಬೆಳೆಗಾರರ ನಿರೀಕ್ಷೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...