ಚಿಕ್ಕಮಗಳೂರು | ಕರ್ನಾಟಕ ಒನ್ ಸೇವಾ ಕೇಂದ್ರ ಜನಸಾಮಾನ್ಯರಿಗೆ ಅನುಕೂಲ: ಶಾಸಕ ಕೆ ಎಸ್ ಆನಂದ್

Date:

ರಾಜ್ಯ ಸರ್ಕಾರ ಸ್ಥಾಪಿಸಲ್ಪಟ್ಟ ಕರ್ನಾಟಕ ಒನ್ ಸೇವಾ ಕೇಂದ್ರ ಜನಸಾಮಾನ್ಯರಿಗೆ ಅನುಕೂಲವಾಗಲಿದೆ ಎಂದು ಕಡೂರು ಶಾಸಕ ಕೆ ಎಸ್ ಆನಂದ್ ಹೇಳಿದರು.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು ಕಚೇರಿ ಮುಂಭಾಗದಲ್ಲಿ ನೂತನವಾಗಿ ಕರ್ನಾಟಕ ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿದರು.

“ಸೇವೆಗಳನ್ನು ಒಂದೇ ಸೂರಿನಡಿ ಲಭ್ಯವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಒನ್ ಸೇವಾ ಕೇಂದ್ರ ಸ್ಥಾಪಿಸಿ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕ ಒನ್ ಪೋರ್ಟಲ್ ಒಂದು ಆನ್‌ಲೈನ್ ಪ್ಲಾಟ್‌ಫಾರ್ಮ್ ಆಗಿದ್ದು, ಎಲ್ಲ ಸೇವೆಗಳು ಒಂದೇ ಸೂರಿನಡಿ ಲಭ್ಯವಾಗುವ ನಿಟ್ಟಿನಲ್ಲಿ ಹಾಗೂ ನಾಗರಿಕ-ಕೇಂದ್ರಿತ ಸೇವೆಗಳನ್ನು ಸುಲಭಗೊಳಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಒನ್ ಸ್ಥಾಪಿಸಲ್ಪಟ್ಟಿದ್ದು, ಎಲ್ಲ ಸೇವೆಗಳನ್ನು ಪ್ರವೇಶಿಸಲು ಜನರು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು” ಎಂದು ತಿಳಿಸಿದರು.

“ಕರ್ನಾಟಕ ಒನ್ ರಾಜ್ಯ ಸರ್ಕಾರದ ಹಲವಾರು ಸೇವೆಗಳನ್ನು ತಲುಪಿಸಲು ಉದ್ದೇಶಿಸಿದ್ದು, ಆನ್‌ಲೈನ್ ಪೋರ್ಟಲ್‌ನಲ್ಲಿ ಆಧಾರ್ ಸೇವೆಗಳು, ಆರೋಗ್ಯ ಇಲಾಖೆ ಸೇವೆ, ಚುನಾವಣಾ ಆಯೋಗದ ಸೇವೆಗಳು, ನಾಡಕಚೇರಿ ಸೇವೆ, ಇ-ಸ್ಟಾಂಪಿಂಗ್, ಪುರಸಭೆಯ ಸಹಕಾರ ಸೇವೆಗಳು, ಆಹಾರ ಮತ್ತು ನಾಗರಿಕ ಸರಬರಾಜು ಸೇವೆಗಳು ಲಭ್ಯವಾಗಲಿವೆ. ಅನೇಕ ಸರ್ಕಾರಿ ಇಲಾಖೆಗಳು ಮತ್ತು ಖಾಸಗಿ ಕಂಪನಿಗಳ ಸೇವೆಗಳನ್ನು ಒಂದೇ ಪೋರ್ಟಲ್‌ನಲ್ಲಿ ಲಭ್ಯಾಗುತ್ತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಪುರಸಭೆ ಸದಸ್ಯೆ ಜ್ಯೋತಿ ವೆಂಕಟೇಶ್ ಮಾತನಾಡಿ “ನಿಗದಿತ ಸಮಯದ ಮಿತಿಯೊಳಗೆ ದಾಖಲೆಗಳನ್ನು ತಲುಪಿಸಲಾಗುತ್ತದೆ ಹಾಗೂ ಸರ್ಕಾರ ನೀಡುವ ಬಹುತೇಕ ಸೇವೆಗಳಿಗೆ ಯಾವುದೇ ಹೆಚ್ಚುವರಿ ಶುಲ್ಕವಿರುವುದಿಲ್ಲ.‌ ಸರ್ಕಾರಿ ಕಚೇರಿ ಹಾಗೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸೌಲಭ್ಯಕ್ಕೂ ಕರ್ನಾಟಕ ಒನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೇ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಬಸ್ ಪಾಸ್‌ಗಳಿಗೆ ಅರ್ಜಿ ಹಾಕಬಹುದು” ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲ್ಲೇಶ್, ಕರ್ನಾಟಕ ಒನ್ ಸೇವಾ ಕೇಂದ್ರದ ಮಾಲೀಕ ಡಿ ವಿ ಗೌತಮ್, ಜಿ ಪಂ ಮಾಜಿ ಸದಸ್ಯರು, ತಾ ಪಂ ಹಾಗೂ ಪುರಸಭೆಯ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಕಾಂಗ್ರೆಸ್ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...