ಚಿಕ್ಕಮಗಳೂರು l ಆಗಸ್ಟ್ 7, 8ರಂದು14ನೇ ಜಿಲ್ಲಾ ಸಮ್ಮೇಳನ: ಸಿಪಿಐ ಕರೆ

Date:

1925ರಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ ಜನ್ಮತಾಳಿ 100 ವರ್ಷಗಳ ಸಂಭ್ರಮ ಹಾಗೆಯೇ, 50 ವರ್ಷಗಳ ಇತಿಹಾಸ ಹೊಂದಿರುವ ಚಿಕ್ಕಮಗಳೂರು ಜಿಲ್ಲಾ ಸಮಿತಿಯ 14ನೇ ಜಿಲ್ಲಾ ಸಮ್ಮೇಳನ ಆಗಸ್ಟ್ 7-8 ಕ್ಕೆ ಸಮ್ಮೇಳನ ನಡೆಯಲಿದೆ ಎಂದು ಕಮ್ಯೂನಿಸ್ಟ್ ಪಕ್ಷ ವತಿಯಿಂದ ಪತ್ರಿಕಾಗೋಷ್ಠಿ ಮಂಗಳವಾರ ನಡೆಸಲಾಯಿತು.

ಸುಮಾರು 80ರ ದಶಕದಲ್ಲಿ ಆರಂಭವಾದ ಪಕ್ಷ ನಿರಂತರವಾಗಿ ತೋಟ ಕಾರ್ಮಿಕರ ಹಕ್ಕುಗಳು ಜಿಲ್ಲೆಯ ನಿರುದ್ಯೋಗಿ ಯುವಕರ ಉದ್ಯೋಗ, ವಿದಾರ್ಥಿಗಳಿಗೆ ಸೂಕ್ತ ಹಾಸ್ಟೆಲ್ ವ್ಯವಸ್ಥೆ, ಭೂಹೀನ ರಹಿತರಿಗೆ ಭೂಮಿ (ಬಗರ್ ಹುಕುಂ ಚಳುವಳಿ) ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರ ಮತ್ತು ಶೋಷಿತರ ಹೇಳಿಗೆಗಾಗಿ ಹೋರಾಟ, ನಿವೇಶನರಹಿತರಿಗಾಗಿ ಹೋರಾಟ ನಡೆಸಿ ಜನರಿಗೆ ಭೂಮಿ ಮತ್ತು ವಸತಿ ಕೊಡಿಸಿಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ ಹೆಗ್ಗಳಿಕೆ ಭಾರತ ಕಮ್ಯೂನಿಸ್ಟ್ ಪಕ್ಷಕ್ಕಿದೆ ಎಂದು ತಾಲೂಕು ಅಧ್ಯಕ್ಷೆ ನಳಿನಾ ತಿಳಿಸಿದರು.

ಚಿಕ್ಕಮಗಳೂರು ವಿಧಾನಸಭಾ ಚುನಾವಣೆಯಲ್ಲಿ ಕೇವಲ 600 ಮತಗಳ ಅಂತರದಲ್ಲಿ ಸೋತ ಪಕ್ಷವು, ಹಲವು ತಾಲ್ಲೂಕು, ಪಂಚಾಯಿತಿ, ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆ ಸದಸ್ಯರನ್ನು ಗೆಲ್ಲಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ಹಣಬಲ, ಜಾತಿಬಲ, ಚುನಾವಣೆ ವ್ಯವಸ್ಥೆಯಿಂದ ಚುನಾವಣಾ ಗೆಲುವಿನ ಮತ ಪಡೆಯುವಲ್ಲಿ ಪಕ್ಷಕ್ಕೆ  ಹಿನ್ನೆಡೆಯಾಗಿರುವುದು ನಿಜ ಅದರೆ ನೈತಿಕ ಹೋರಾಟದಲ್ಲಿ ಜಿಲ್ಲೆಯ ರಾಜಕೀಯ ವ್ಯವಸ್ಥೆಯನ್ನು ಪ್ರತಿನಿಧಿಸಬಲ್ಲ ಶಕ್ತಿಯಾಗಿರುವುದು ಹೆಮ್ಮೆಯಾಗಿದೆ ಎಂದು ತಿಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಕೀಯ, ಆರ್ಥಿಕ, ಸಾಮಾಜಿಕ ಅಸಮತೋಲನೆಯಿಂದ ದೇಶ ಮತ್ತು ಸ್ವರ್ಥ ರಾಜಕಾರಣದಿಂದ ರೈತರು, ಕಾರ್ಮಿಕರು, ಯುವಜನರು, ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ ಸ್ವಚ್ಛ ನ್ಯಾಯ ಸಮ್ಮಿತ ರಾಜಕೀಯ ವ್ಯವಸ್ಥೆಯನ್ನು ಕಲ್ಪಿಸುವ ಅವಶ್ಯಕತೆಗೆ ಭಾರತ ಕಮ್ಯೂನಿಸ್ಟ್ ಪಕ್ಷದತ್ತ ಜನರ ಸಹಕಾರ ಅಗತ್ಯವಾಗಿದ್ದು, ಜಿಲ್ಲೆಯಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ ನಡೆಸುವ ಹೋರಾಟ ಮತ್ತು ಸಾಧನೆಗಳನ್ನು ಈ ಸಮಾವೇಶದಲ್ಲಿ ಚರ್ಚಿಸಿ ಪಕ್ಷವನ್ನು ಬಲ ಪಡಿಸಲು ಅಗತ್ಯ ವೇದಿಕೆಯಾನ್ನಾಗಿ ಸಿಕೊಳ್ಳಲು ತೀರ್ಮಾನಿಸಿದೆ ಎಂದು ಕಮ್ಯೂನಿಸ್ಟ್ ಪಕ್ಷದ ಮುಖಂಡರು ತಿಳಿಸಿದರು. ಈ ವೇಳೆ ಸಿಪಿಐ ಮುಖಂಡರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...