ಚಿಕ್ಕಮಗಳೂರು l 17 ವರ್ಷದ ಬಾಲಕನ ಮೇಲೆ ಹಲ್ಲೆ; ಆರೋಪಿಗಳನ್ನು ಬಂಧಿಸುವಂತೆ ಎಸ್‌ಡಿಪಿಐ ಆಗ್ರಹ

Date:

17 ವರ್ಷದ ಬಾಲಕ ಆಟ ಆಡುತ್ತಿದ್ದಾಗ ಗೊತ್ತಿಲ್ಲದೇ ಹಸುವಿನ ಬಾಲಕ್ಕೆ ಪರಫ್ಯೂಮ್ ಸ್ಪ್ರೇ ಹಾಕಿದ ಕಾರಣಕ್ಕೆ ಹಲ್ಲೆ ನಡೆಸಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ವಿಜಯಪುರದಲ್ಲಿ ನಡೆದಿದೆ.

ಹಲ್ಲೇಗೊಳಗಾದ ಬಾಲಕ ಶುಹೇಬ್(17), ಆಟ ಆಡುತ್ತಿದ್ದಾಗ ಗೊತ್ತಿಲ್ಲದೇ ಹಸುವಿನ ಬಾಲದ ಕಡೆ ಬಾಲಕ ಸ್ಪ್ರೇ ಹಾರಿಸಿದ್ದಾನೆ, ಈ ನೆಪ ಮಾಡಿಕೊಂಡು ಬಜರಂಗದಳದ ಶ್ಯಾಮ್ ವಿ.ಗೌಡ, ಸಂತೋಷ ಕೋಟ್ಯನ್ ಹಾಗೂ ಅವರ ತಂಡ ಕ್ರೂರವಾಗಿ ಆ ಬಾಲಕನ ಮೇಲೆ ಹಲ್ಲೆ ನಡೆಸಿ, ಅಬಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಹಾಗೆಯೇ, ಮೊಬೈಲ್ ಅಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹೆಸರುವಾಸಿಯಾಗಿರುವ AI ಬಳಸಿದ್ದಾರೆಂದು ತಿಳಿದು ಬಂದಿದೆ. ಇಂತಹ ಹಿಂಸಾತ್ಮಕ ಮತ್ತು ಅತಿರೇಕಿ ವರ್ತನೆಗಳು ಸಂಸ್ಕೃತ ಸಮಾಜದಲ್ಲಿ ಯಾವುದೇ ರೀತಿಯ ಸ್ವೀಕಾರಾರ್ಹವಾಗುವುದಿಲ್ಲ. ಯಾರಿಗೂ ಕಾನೂನನ್ನು ತಮ್ಮ ಕೈಯಲ್ಲಿ ತೆಗೆದುಕೊಳ್ಳುವ ಹಕ್ಕಿಲ್ಲ ಎಂದು ಎಸ್‌ಡಿಪಿಐ ತೀವ್ರ ಖಂಡಿಸಿದೆ.

Screenshot 2025 10 06 18 46 06 94 7352322957d4404136654ef4adb64504

ಎಸ್‌ಡಿಪಿಐ ಪಕ್ಷದಿಂದ ಕೆಳಕಂಡ ಬೇಡಿಕೆಗಳು: 1️⃣ ಆರೋಪಿಗಳಾದ ಶ್ಯಾಮ್ ವಿ.ಗೌಡ, ಸಂತೋಷ ಕೋಟ್ಯನ್ ಹಾಗೂ ಇತರರನ್ನು ತಕ್ಷಣ ಬಂಧಿಸಿ, ಕೊಲೆ ಯತ್ನ, ಹಲ್ಲೆ ಮತ್ತು ಬೆದರಿಕೆ ಸೇರಿದಂತೆ ಸಂಬಂಧಿತ ಕಾನೂನು ವಿಧಿಗಳಡಿ ಪ್ರಕರಣ ದಾಖಲಿಸಬೇಕು. 2️⃣ ತನಿಖೆಯನ್ನು ಉನ್ನತ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ನಿರಪೇಕ್ಷವಾಗಿ ನಡೆಸಬೇಕು. 3️⃣ ಬಾಲಕನ ಹಕ್ಕುಗಳನ್ನು ರಕ್ಷಿಸಲು ಜುವೆನೈಲ್ ಜಸ್ಟಿಸ್ ಕಾಯ್ದೆ (Juvenile Justice Act) ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. 4️⃣ ಪೀಡಿತ ಕುಟುಂಬಕ್ಕೆ ತಕ್ಷಣ ಪರಿಹಾರ ಹಾಗೂ ವೈದ್ಯಕೀಯ ನೆರವು ನೀಡಬೇಕು. 5️⃣ ಘಟನೆಯ ಕುರಿತು ತಪ್ಪು, ಕೋಮು ಆಧಾರಿತ ಅಥವಾ AI ವಿಡಿಯೋಗಳ ಮೂಲಕ ತಪ್ಪು ಸುದ್ದಿ ಹರಡಿದವರ ಮೇಲೆ IT ಕಾಯ್ದೆ ಹಾಗೂ IPC ಪ್ರಕಾರ ಕ್ರಮ ಕೈಗೊಳ್ಳಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ರೈತರ ಬೆಳೆಯನ್ನು ನಾಶ ಮಾಡಿದ ಕಾಡಾನೆ

ಈ ಘಟನೆ ಧರ್ಮದ ವಿಚಾರವಲ್ಲ, ಮಾನವೀಯತೆ ಮತ್ತು ನ್ಯಾಯದ ಪ್ರಶ್ನೆಯಾಗಿದೆ. ಶಾಂತಿ ಕಾಪಾಡಲು ಮತ್ತು ಪೀಡಿತ ಕುಟುಂಬದವರಿಗೆ ನ್ಯಾಯ ಸಿಗಬೇಕೆಂದು ಎಸ್‌ಡಿಪಿಐ ಅಧ್ಯಕ್ಷರಾದ ಸಯ್ಯದ್ ಅಜ್ಮತ್ ಈದಿನ. ಕಾಮ್ ಗೆ ಮಾಹಿತಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...