ಚಿಕ್ಕಮಗಳೂರು l ಮುಖ್ಯವಾಹಿನಿಗೆ 6 ಜನ ನಕ್ಸಲ್: ಶ್ರಮಿಸಿದ ಪ್ರತಿಯೊಬ್ಬರಿಗೆ ಅಭಿನಂದನೆ ಸಲ್ಲಿಸಿದ ಶಾಂತಿಗಾಗಿ ನಾಗರಿಕ ವೇದಿಕೆ

Date:

ಸುಮಾರು 25-30 ವರ್ಷಗಳಿಂದ ಮಲೆನಾಡು ಹಾಗೂ ಪಶ್ಚಿಮ ಘಟ್ಟಗಳಲ್ಲಿ ಮೂಲಸೌಕರ್ಯ, ಭೂಮಿಯ ಹಕ್ಕು, ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಹಲವಾರು ವರ್ಷಗಳಿಂದ ಸರ್ಕಾರಗಳ ಮುಂದೆ ಬೇಡಿಕೆ ಇಟ್ಟು ಅನೇಕ ಹೋರಾಟಗಳು ನಡೆಸುತ್ತಾ, ಅರಣ್ಯ ಇಲಾಖೆಯ ಕಿರುಕುಳಗಳನ್ನು ವಿರೋಧಿಸುತ್ತಾ ನಕ್ಸಲ್‌ ಚಳುವಳಿ ಅಥವಾ ಮಾವೋವಾದಿ ಹೋರಾಟದ ಕಡೆಗೆ ಒಲವು ಹೊಂದಿದ್ದ. ನಾಡನ್ನು ತ್ಯಜಿಸಿ, ತಮ್ಮ ಕುಟುಂಬ ಪರಿವಾರವನ್ನು ತ್ಯಜಿಸಿ, ತಮ್ಮ ಯೌವನವನ್ನು, ಸುಖ ಸಂತೋಷಗಳನ್ನು ತ್ಯಜಿಸಿ ಕಾಡಿನ ಪಾಲಾಗಿ ಭೂಗತರಾಗಿದ್ದರು.

Screenshot 2025 01 26 19 30 54 35 965bbf4d18d205f782c6b8409c5773a4
ನಕ್ಸಲ್ ಹೋರಾಟಗಾರರನ್ನು ಮುಖ್ಯವಾಹಿನಿಗೆ ಕರೆತರಲು ಶ್ರಮಿಸಿದ ಸಾರ್ವಜನಿಕರು.

ಅಂತಹವರಲ್ಲಿ ಈ ಹಿಂದೆ ಅದೆಷ್ಟೋ ಜನ ಈ ಹಿಂದೆಯೇ ಮುಖ್ಯ ವಾಹಿನಿಗೆ ಬಂದಿದ್ದಾರೆ. ಅದೇ ರೀತಿ ಕರ್ನಾಟಕದಲ್ಲಿ ಉಳಿದ 7 ಜನ ನಕ್ಸಲರಲ್ಲಿ 6 ಜನ ನಕ್ಸಲರು, ನಕ್ಸಲ್ ಚಳುವಳಿಯಿಂದ ಮುಖ್ಯವಾಹಿನಿಗೆ ಇತ್ತೀಚೆಗೆ ಬಂದಿದ್ದಾರೆ. ಇನ್ನೊಬ್ಬರನ್ನು ಹುಡುಕುವ ಪ್ರಯತ್ನ ಆಗುತ್ತಿದೆ. ಆದರೆ ಈ 6 ಜನರನ್ನು ಮುಖ್ಯವಾಹಿನಿಗೆ ಕರೆತರಲು ಗುಡ್ಡಗಾಡು ಪ್ರದೇಶವಿರುವ ಜಾಗದಲ್ಲಿ ವಾಸಮಾಡುತ್ತಿರುವ ಸಾರ್ವಜನಿಕರ ಸಹಾಯವನ್ನೂ ಪಡೆಯಲಾಗಿತ್ತು. ಹಾಗೆಯೇ, ವಿಶೇಷವಾಗಿ ಚಿಂತಕರು ಮತ್ತು ಪ್ರಗತಿಪರ ಹಾಗೂ ಮಾವೋವಾದಿ ಹೋರಾಟಗಾರರು ಸೇರಿ “ಶಾಂತಿಗಾಗಿ ನಾಗರಿಕ ವೇದಿಕೆ”ಯನ್ನು ಮಾಡಲಾಗಿತ್ತು.

Screenshot 2025 01 26 19 32 47 62 965bbf4d18d205f782c6b8409c5773a4 1
ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆ ಹಿಡಿದು ಎಲ್ಲರಿಗೂ ಅಭಿನಂದನೆ ಸಲ್ಲಿಸಿದ ಸಂದರ್ಭ.

ಶಾಂತಿಗಾಗಿ ನಾಗರಿಕರ ವೇದಿಕೆಯಿಂದ ನಕ್ಸಲ್ ಚಳುವಳಿಯಲ್ಲಿ ಇದ್ದ 6 ಜನರನ್ನು ಮುಖ್ಯವಾಹಿನಿಗೆ ಕರೆತರುವ ಪ್ರಯತ್ನ ಸಂಪೂರ್ಣ ಯಶಸ್ಸನ್ನು ಕಂಡಿದೆ. ಆದ್ದರಿಂದ ಆರು ಜನರನ್ನು ಕರೆತರಲು ಶ್ರಮಿಸಿದ ಪ್ರತಿಯೊಬ್ಬರಿಗೂ, “ಶಾಂತಿಗಾಗಿ ನಾಗರಿಕ ವೇದಿಕೆ”ಯಿಂದ ಶನಿವಾರ ಶೃಂಗೇರಿ ತಾಲ್ಲೂಕಿನ ಹಾಗಲಗಂಚಿ ಗ್ರಾಮದಲ್ಲಿ, ಪರಸ್ಪರ ಪರಿಚಯಿಸುವ ಮೂಲಕ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Screenshot 2025 01 26 19 35 58 45 965bbf4d18d205f782c6b8409c5773a4
ಸಂತೋಷದಿಂದ ಔತಣ ಕೂಟ ಏರ್ಪಡಿಸಿ ಊಟ ಬಡಿಸಿದ ಸಂದರ್ಭ.

ಜೊತೆಗೆ, ಬಹಳ ಖುಷಿಯಿಂದ ಔತಣ ಕೂಟವನ್ನು ಏರ್ಪಡಿಸಿದರು. ಹಾಗೆಯೇ, 6 ಜನ ಮುಖ್ಯವಾಹಿನಿಗೆ ಬರಲು ಅವಕಾಶ ಕಲ್ಪಿಸಿಕೊಟ್ಟ ರಾಜ್ಯ ಸರ್ಕಾರಕ್ಕೆ ಧನ್ಯವಾದವನ್ನು ವ್ಯಕ್ತಪಡಿಸಿದರು.

Screenshot 2025 01 26 20 06 28 50 7352322957d4404136654ef4adb64504
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...