ಚಿಕ್ಕಮಗಳೂರು ನಗರದಲ್ಲಿ ರೋಗಿಯೊಬ್ಬರನ್ನು ಜಿಲ್ಲಾಸ್ಪತ್ರೆಗೆ ಕರೆತರುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ಮಲ್ಲೇಗೌಡ ಜಿಲ್ಲಾಸ್ಪತ್ರೆ ಮುಂಭಾಗದಲ್ಲಿ ಮಂಗಳವಾರ ನಡೆದಿದೆ.
ಜಿಲ್ಲಾ ಆಸ್ಪತ್ರೆ ಆವರಣಕ್ಕೆ ರೋಗಿಯನ್ನು ಕರೆ ತರುವಾಗ ಕಾರಿನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಕಿಡಿ ನೋಡನೋಡುತ್ತಿದ್ದಂತೆಯೇ ಎಲ್ಲಾ ಕಡೆ ವ್ಯಾಪಿಸಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಆಂಬುಲೆನ್ಸ್ ಚಾಲಕರು ಕಾರಿನಲ್ಲಿದ್ದ ರೋಗಿ ಹಾಗೂ ಇತರರನ್ನು ಕೆಳಗಿಳಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ರಸ್ತೆ ಅಪಘಾತ; ಕೂಲಿ,ಕಾರ್ಮಿಕರಿಗೆ ಗಂಭೀರ ಗಾಯ
ಈ ಕುರಿತು ಸ್ಥಳೀಯರು ಆಸ್ಪತ್ರೆಯಲ್ಲಿದ್ದ ನೀರು ಮತ್ತು ಆಕ್ಸಿಜನ್ ಸಿಲಿಂಡರ್ ಬಳಸಿಕೊಂಡು ಬೆಂಕಿ ನಂದಿಸಿದ್ದಾರೆ. ಸಧ್ಯ ಯಾರಿಗೂ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಕಾರಿಗೆ ಹತ್ತಿದ್ದ ಬೆಂಕಿ ನಂದಿಸುವಷ್ಟರೊಳಗೆ ಮುಂಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.





