ಚಿಕ್ಕಮಗಳೂರು l ಬಿಸಿಯೂಟ ಅಡುಗೆ ಸಿಬ್ಬಂದಿಯ ಗೌರವಧನ ಕೇಂದ್ರ ಸರ್ಕಾರ ಹೆಚ್ಚಿಸಿಲ್ಲ; ಶಾಸಕ ಹೆಚ್.ಡಿ ತಮ್ಮಯ್ಯ

Date:

ಚಿಕ್ಕಮಗಳೂರು ನಗರದ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆ ಅಡಿ ಎಂಇಎಸ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಡುಗೆ ಸಿಬ್ಬಂದಿ ತರಬೇತಿ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಕಾಲಕಾಲಕ್ಕೆ ರಾಜ್ಯ ಸರ್ಕಾರ ಬಿಸಿಯೂಟ ಅಡುಗೆ ಸಿಬ್ಬಂದಿಯ ಗೌರವಧನ ಹೆಚ್ಚಿಸುತ್ತಲೇ ಬಂದಿದೆ. ಆದರೆ, ಕೇಂದ್ರ ಸರ್ಕಾರ ತನ್ನ ಪಾಲನ್ನು ಆರಂಭದಿಂದಲೂ ಹೆಚ್ಚಿಸಿಲ್ಲ. ಸಂಘಟನಾತ್ಮಕ ಹೋರಾಟದಿಂದ ಸಮಪಾಲು ಪಡೆಯಲು ಸಾಧ್ಯ, ಹಾಗೆಯೇ ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಅಕ್ಷರ ದಾಸೋಹ ಬಿಸಿಯೂಟ ಕಾರ್ಯಕ್ರಮ ಜಾರಿ ಮಾಡಲಾಗಿತ್ತು. ಆರಂಭದಲ್ಲಿ ಈಶಾನ್ಯ ಕರ್ನಾಟಕದಲ್ಲಿ ಜಾರಿಯಾಗಿ ನಂತರ ರಾಜ್ಯದಾದ್ಯಂತ ವಿಸ್ತರಣೆಯಾಗಿದೆ. 

ಬಿಸಿಯೂಟ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದಿಂದ ಶೇ 60ರಷ್ಟು ಹಣ, ರಾಜ್ಯದಿಂದ ಶೇ 40ರಷ್ಟು ಅನುದಾನದ ಒಪ್ಪಂದದಲ್ಲಿ ಈ ಯೋಜನೆ ಆರಂಭವಾಯಿತು. ಆರಂಭದಲ್ಲಿ ರಾಜ್ಯ ಸರ್ಕಾರ ₹400, ಕೇಂದ್ರ ಸರ್ಕಾರ ₹600 ಸೇರಿ ₹1 ಸಾವಿರ ನೀಡಲಾಗುತ್ತಿತ್ತು. ಯೋಜನೆ ಆಂಭವಾಗಿ 23 ವರ್ಷ ಕಳೆದಿದೆ. ಆದರೆ, ಇಂದಿಗೂ ಕೇಂದ್ರ ಸರ್ಕಾರ ತನ್ನ ಪಾಲಿನ ₹600 ಮಾತ್ರ ನೀಡುತ್ತಿದೆ. ಆದರೆ, ರಾಜ್ಯ ಸರ್ಕಾರ ₹400ರಿಂದ ₹4 ಸಾವಿರ ಗೌರವಧನ ಹೆಚ್ಚಿಸಿದೆ. ಕೇಂದ್ರ ಸರ್ಕಾರವೂ ₹6 ಸಾವಿರ ನೀಡಿದ್ದರೆ ₹10 ಸಾವಿರ ಗೌರವಧನ ಪಡೆಯಬಹುದಿತ್ತು ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕಲುಷಿತ ನೀರು; ನೂರಾರು ಮೀನು ಸಾವು

ಈ ಸಂದರ್ಭದಲ್ಲಿ ಶಿಕ್ಷಣ ಅಧಿಕಾರಿ ನೀಲಕಂಠ, ಅಕ್ಷರ ದಾಸೋಹ ಫೆಡರೇಶನ್ ಅಧ್ಯಕ್ಷ ಜಿ.ರಘು, ಬಿಇಒ ರುದ್ರಪ್ಪ, ನಟರಾಜ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿಜಯಕುಮಾರ್, ಇಂಧುಮತಿ, ಸಮೀಮಾ ಬಾನು, ಕಾಂತರಾಜು, ಅಂಜನಪ್ಪ, ಪೂರ್ಣೇಶ್ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...